Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಿ.ಪಂ, ತಾ.ಪಂ ಮೀಸಲಾತಿ ನಿಗದಿ...

ಜಿ.ಪಂ, ತಾ.ಪಂ ಮೀಸಲಾತಿ ನಿಗದಿ ವಿಳಂಬಕ್ಕೆ ಹೈಕೋರ್ಟ್‌ನ ಕ್ಷಮೆ ಯಾಚಿಸಿದ ಸರ್ಕಾರ; ಮತ್ತೆ 8 ವಾರ ಕಾಲಾವಕಾಶಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ6 Jun 2026 12:49 AM IST
share
ಜಿ.ಪಂ, ತಾ.ಪಂ ಮೀಸಲಾತಿ ನಿಗದಿ ವಿಳಂಬಕ್ಕೆ ಹೈಕೋರ್ಟ್‌ನ ಕ್ಷಮೆ ಯಾಚಿಸಿದ ಸರ್ಕಾರ; ಮತ್ತೆ 8 ವಾರ ಕಾಲಾವಕಾಶಕ್ಕೆ ಮನವಿ

ಬೆಂಗಳೂರು: ಕಳೆದ 5 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಚುನಾವಣೆ ವಿಳಂಬವಾಗಿರುವುದಕ್ಕೆ ಹೈಕೋರ್ಟ್‌ನ ಕ್ಷಮೆ ಯಾಚಿಸಿರುವ ರಾಜ್ಯ ಸರ್ಕಾರ, ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಮತ್ತೆ 8 ವಾರ ಕಾಲಾವಕಾಶ ಕೇಳಿದೆ.

ರಾಜ್ಯದ ಎಲ್ಲ ಜಿ.ಪಂ. ಹಾಗೂ ತಾ.ಪಂ.ಗಳಿಗೆ 12 ವಾರಗಳಲ್ಲಿ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು 2023 ಡಿಸೆಂಬರ್ 19ರಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಲಿಖಿತ ಭರವಸೆ ನೀಡಿತ್ತು. ಆದರೆ, ಕೊಟ್ಟ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ ಎಂದು ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಸರ್ಕಾರದ ವಿರುದ್ಧ 2024ರಲ್ಲಿ ಹೂಡಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಈ ವೇಳೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಡಿ. ರಂದೀಪ್ ಅವರು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದು, ಮೀಸಲಾತಿ ನಿಗದಿ ಪ್ರಕ್ರಿಯೆಗೆ ವಿಳಂಬವಾದ ಕಾರಣಗಳನ್ನು ವಿವರಿಸಿದ್ದಾರೆ. ಸರ್ಕಾರದಿಂದ ಉದ್ದೇಶಪೂರ್ವಕವಾಗಿ ವಿಳಂಬವಾಗಿಲ್ಲ, ನ್ಯಾಯಾಲಯದ ಆದೇಶ ಪಾಲನೆಯಲ್ಲೂ ವಿಳಂಬವಾಗಿಲ್ಲ. ಆದರೆ, ಆಗಿರುವ ವಿಳಂಬಕ್ಕೆ ಕ್ಷಮೆ ಯಾಚಿಸುವುದಾಗಿ ಪ್ರಮಾಣಪತ್ರದಲ್ಲಿ ಹೇಳಿದ್ದಾರೆ.

ಕಂದಾಯ ಇಲಾಖೆಯು ವಿಜಯಪುರ ಜಿಲ್ಲೆಯ 4 ಹಾಗೂ ಬಾಗಲಕೋಟೆ ಜಿಲ್ಲೆಯ ತಾಲೂಕುಗಳ ಗಡಿಗಳನ್ನು ಬದಲಾಯಿಸಿ ಅಧಿಸೂಚನೆ ಹೊರಡಿಸಿತ್ತು. ಆದ್ದರಿಂದ, ಈ ಎರಡು ಜಿಲ್ಲೆಗಳ ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳ ಗಡಿಗಳನ್ನು ಮರು ನಿಗದಿಪಡಿಸಬೇಕಾಯಿತು. ಅದರಂತೆ ಈಗಾಗಲೇ ವಿಜಯಪುರ ಜಿಲ್ಲೆಯ ನಾಲ್ಕು ತಾಲೂಕುಗಳ ತಾ.ಪಂ, ಜಿ.ಪಂ. ಕ್ಷೇತ್ರಗಳ ಗಡಿಗಳನ್ನು ಮರುನಿಗದಿಪಡಿಸಲಾಗಿದೆ ಎಂದು ಪ್ರಮಾಣಪತ್ರದಲ್ಲಿ ವಿವರಿಸಲಾಗಿದೆ.

ಉಳಿದಂತೆ ಬಾಗಲಕೋಟೆ ಜಿಲ್ಲೆಯ ತಾಲೂಕುಗಳ ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳ ಗಡಿಗಳ ಮರು ನಿಗದಿ ಹಾಗೂ ಮೀಸಲಾತಿ ನಿಗದಿಗೆ 12 ವಾರ ಕಾಲಾವಕಾಶ ಬೇಕಾಗಿದೆ. ಇದನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ತಾ.ಪಂ, ಜಿ.ಪಂ ಕ್ಷೇತ್ರ ಮರುವಿಂಗಡಣೆ ಪೂರ್ಣಗೊಂಡಿದ್ದು, ಅವುಗಳಿಗೆ ಮೀಸಲಾತಿ ನಿಗದಿಪಡಿಸಲು 8 ವಾರ ಕಾಲಾವಕಾಶ ಬೇಕು ಎಂದು ಪ್ರಮಾಣಪತ್ರದಲ್ಲಿ ಮನವಿ ಮಾಡಲಾಗಿದೆ.

ಸರ್ಕಾರದ ಪ್ರಮಾಣಪತ್ರ ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆಯನ್ನು ಸೆಪ್ಟಂಬರ್ 11ಕ್ಕೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X