Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಗರ್‌ಹುಕುಂ ಜಮೀನು ಮಂಜೂರಾತಿಯಲ್ಲಿ...

ಬಗರ್‌ಹುಕುಂ ಜಮೀನು ಮಂಜೂರಾತಿಯಲ್ಲಿ ಅಕ್ರಮ ಆರೋಪ; ಮಾಜಿ ಶಾಸಕ ಲಿಂಗೇಶ್‌ಗೆ ಜಾಮೀನು ನೀಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ13 Aug 2026 12:45 AM IST
share
ಬಗರ್‌ಹುಕುಂ ಜಮೀನು ಮಂಜೂರಾತಿಯಲ್ಲಿ ಅಕ್ರಮ ಆರೋಪ; ಮಾಜಿ ಶಾಸಕ ಲಿಂಗೇಶ್‌ಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಬಗರ್‌ಹುಕುಂ ಜಮೀನು ಮಂಜೂರಾತಿಯಲ್ಲಿ ಅಕ್ರಮವೆಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಬೇಲೂರಿನ ಮಾಜಿ ಶಾಸಕ ಕೆ.ಎಸ್‌. ಲಿಂಗೇಶ್‌ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಕೆ.ಎಸ್‌. ಲಿಂಗೇಶ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿದ್ದು, ಅರ್ಜಿಯನ್ನು ಮಾನ್ಯ ಮಾಡಿ ಆದೇಶಿಸಿದೆ.

ಅರ್ಜಿದಾರರನ್ನು ವಶಕ್ಕೆ ಪಡೆದು 40 ದಿನಗಳಾಗಿದ್ದು, ಅಂದಿನಿಂದಲೂ ಅವರು ಕಸ್ಟಡಿಯಲ್ಲಿದ್ದಾರೆ. ಅರ್ಜಿದಾರರು ಓಪನ್‌ ಹಾರ್ಟ್‌ ಸರ್ಜರಿಗೆ ಒಳಗಾಗಿದ್ದು, ಕಾರಾಗೃಹದಲ್ಲಿ ಅವರ ಆರೋಗ್ಯ ಕ್ಷಿಣಿಸುತ್ತಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಮತ್ತು ಸಿಐಡಿ ಅಧಿಕಾರಿಗಳು ಎಲ್ಲ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ವಿಚಾರಣೆಗೆ ಅರ್ಜಿದಾರರ ಅಗತ್ಯವಿಲ್ಲವೆಂದು ಹೇಳಿದ್ದಾರೆ. ಆದ್ದರಿಂದ, ಜಾಮೀನು ಮಂಜೂರು ಮಾಡಲಾಗುತ್ತಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.

ಜತೆಗೆ, ಈಗಾಗಲೇ ಇದೇ ಪ್ರಕರಣದ 2, 6, 8ನೇ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದ್ದು, 3, 4, 5ನೇ ಆರೋಪಿಗಳಿಗೆ ಜಾಮೀನು ದೊರೆತಿದೆ. ಆದ್ದರಿಂದ, ಕಠಿಣ ಷರತ್ತುಗಳನ್ನು ವಿಧಿಸಿ ಅರ್ಜಿದಾರರಿಗೆ ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಾಲಯ ಆದೇಶಿಸಿದೆ.

ಅರ್ಜಿದಾರರು 2 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್‌ ಹಾಗೂ ಅಷ್ಟೇ ಮೊತ್ತದ ಶ್ಯೂರಿಟಿ ಒದಗಿಸಬೇಕು. ವಿಚಾರಣಾ ನ್ಯಾಯಾಲಯಕ್ಕೆ ತಪ್ಪದೇ ವಿಚಾರಣೆಗೆ ಹಾಜರಾಗಬೇಕು, ಸಾಕ್ಷ್ಯ ನಾಶಪಡಿಸಲು ಯತ್ನಿಸಬಾರದು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ತನಿಖಾಧಿಕಾರಿ ಸೂಚಿಸಿದಾಗ ಹಾಜರಾಗಿ, ತನಿಖೆಗೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು, ಕೋರ್ಟ್‌ ಅನುಮತಿ ಇಲ್ಲದೆ ವ್ಯಾಪ್ತಿ ಬಿಟ್ಟು ತೆರಳಬಾರದು ಎಂಬ ಷರತ್ತುಗಳನ್ನು ವಿಧಿಸಿರುವ ಹೈಕೋರ್ಟ್, ಈ ಯಾವುದೇ ಷರತ್ತುಗಳ ಉಲ್ಲಂಘನೆಯಾದರೆ ಜಾಮೀನು ಸಹಜವಾಗಿಯೇ ರದ್ದಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಪ್ರಕರಣವೇನು?

ಬೇಲೂರು ವಿಧಾನಸಭೆ ಕ್ಷೇತ್ರದಲ್ಲಿ 2018ರಿಂದ 2023ರ ಅವಧಿಯಲ್ಲಿ ಶಾಸಕರಾಗಿದ್ದಾಗ ಬಗರ್‌ಹುಕುಂ ಸಾಗುವಳಿ ಸಕ್ರಮ ಸಮಿತಿ ಅಧ್ಯಕ್ಷರಾಗಿದ್ದ ಲಿಂಗೇಶ್‌ 2,750 ಎಕರೆ ಜಮೀನನ್ನು 1,430 ಮಂದಿಗೆ ಅಕ್ರಮವಾಗಿ ಮಂಜೂರು ಮಾಡಿದ್ದಾರೆಂದು ಆರೋಪಿಸಿ ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಖಾಸಗಿ ದೂರು ಸಲ್ಲಿಸಿದ್ದರು.

ದೂರನ್ನು ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶಿಸಿತ್ತು. ಅದರನ್ವಯ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 468, 464, 465, 471, 409, 420, 120ಬಿ ಅಡಿ ಪ್ರಕರಣ ದಾಖಲಿಸಲಾಗಿತ್ತು. ಮೊದಲ ಆರೋಪಿ ಮಾಜಿ ಶಾಸಕ ಲಿಂಗೇಶ್‌ ಅವರು ಉಳಿದ ಆರೋಪಿಗಳು ಹಾಗೂ ಅಧಿಕಾರಿಗಳ ಜತೆ ಶಾಮೀಲಾಗಿ ತಮ್ಮ ಅಧಿಕಾರ ಮತ್ತು ಹುದ್ದೆ ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪವಿದೆ. ಅಲ್ಲದೆ, ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಲು ಸಹಕಾರ ನೀಡಿದ್ದು, ಸರ್ಕಾರಕ್ಕೆ ವಂಚಿಸುವ ಉದ್ದೇಶದಿಂದ ಒಳಸಂಚು ನಡೆಸಿದ್ದಾರೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಆನಂತರ, ಸಿಐಡಿ ಪೊಲೀಸರು ಲಿಂಗೇಶ್‌ ಅವರನ್ನು ಬಂಧಿಸಿದ್ದರು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X