Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ​ಮತದಾರರ ಪಟ್ಟಿಯಲ್ಲಿ ಯುವತಿಯ ಎಪಿಕ್...

​ಮತದಾರರ ಪಟ್ಟಿಯಲ್ಲಿ ಯುವತಿಯ ಎಪಿಕ್ ಸಂಖ್ಯೆಯಲ್ಲಿ ಅಪರಿಚಿತನ ಹೆಸರು; ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ3 Sept 2026 1:07 AM IST
share
​ಮತದಾರರ ಪಟ್ಟಿಯಲ್ಲಿ ಯುವತಿಯ ಎಪಿಕ್ ಸಂಖ್ಯೆಯಲ್ಲಿ ಅಪರಿಚಿತನ ಹೆಸರು; ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಮತದಾರರ ಪಟ್ಟಿಯಲ್ಲಿ ತಮ್ಮ ಎಪಿಕ್ ಸಂಖ್ಯೆಯ ಮುಂದೆ 'ಸೈಯದ್ ಏಜಾಜ್ ಅಹ್ಮದ್' ಎಂಬ ಅಪರಿಚಿತ ವ್ಯಕ್ತಿ ಹೆಸರು ನಮೂದಿಸಿದ್ದಲ್ಲದೆ, ಎಸ್ಐಆರ್ ಪ್ರಕ್ರಿಯೆಯಲ್ಲಿ ತಮ್ಮ ಹೆಸರನ್ನು 'ಗೈರು, ಸ್ಥಳಾಂತರ, ಮರಣ, ನಕಲಿ, ಇತರ' (ಎ.ಎಸ್.ಡಿ.ಡಿ.ಒ) ಪಟ್ಟಿಯಲ್ಲಿ 'ಶಾಶ್ವತ ಸ್ಥಳಾಂತರ' ಎಂದು ವರ್ಗಿಕರಿಸಿರುವುದನ್ನು ಆಕ್ಷೇಪಿಸಿ ಯುವತಿಯೊಬ್ಬರು ಸಲ್ಲಿಸಿರುವ ಅರ್ಜಿ ಸಂಬಂಧ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರಿನ ಜೆ.ಪಿ. ನಗರದ ಪುಟ್ಟೇನಹಳ್ಳಿ ನಿವಾಸಿ ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಮತದಾರರು ಆಗಿರುವ ಎಸ್. ಮೈಥಿಲಿ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ಭಾರತ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ (ಇಆರ್‌ಒ), ಸ್ಥಳೀಯ ಮತಗಟ್ಟೆ ಅಧಿಕಾರಿ (ಬಿಎಲ್ಒ), ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೊಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟಂಬರ್ 17ಕ್ಕೆ ಮುಂದೂಡಿತು.

ಪ್ರಕರಣವೇನು?

ಅರ್ಜಿದಾರರು 2015ರಿಂದ ಮತದಾರರ ಗುರುತಿನ ಚೀಟಿ ಹೊಂದಿದ್ದು, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 92ರ ಮತದಾರರ ಪಟ್ಟಿಯಲ್ಲಿ ಅವರ ಹೆಸರಿದೆ. 2023ರ ವಿಧಾನಸಭೆ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅವರು ಮತದಾನವನ್ನೂ ಮಾಡಿದ್ದಾರೆ. ಆದರೆ, ಚುನಾವಣಾ ಆಯೋಗ 2025ರಲ್ಲಿ ಪ್ರಕಟಿಸಿದ ಮತದಾರ ಪಟ್ಟಿಯಲ್ಲಿ ಮೈಥಿಲಿ ಅವರ ಹೆಸರಿನ ಬದಲಿಗೆ ಅಪರಿಚಿತ ವ್ಯಕ್ತಿ 'ಸೈಯದ್ ಏಜಾಜ್ ಅಹ್ಮದ್' ಎಂಬ ಹೆಸರು ಬಂದಿದೆ. ಆಶ್ವರ್ಯವೆಂದರೆ ಮೈಥಿಲಿ ಅವರದ್ದೇ ಎಪಿಕ್ ಸಂಖ್ಯೆ ಇದ್ದು, ತಂದೆಯ ಹೆಸರು ಎಸ್.ಎನ್. ಶ್ರೀನಿವಾಸಮೂರ್ತಿ ಮತ್ತು ಲಿಂಗ ಹೆಣ್ಣು, ವಯಸ್ಸು ಮೈಥಿಲಿ ಅವರದ್ದೇ ಮತದಾರರ ಪಟ್ಟಿಯಲ್ಲಿ ಪ್ರಕಟವಾಗಿದೆ.

ಈ ವಿಚಾರ ಗಮನಕ್ಕೆ ಬಂದ ತಕ್ಷಣ ಮೈಥಿಲಿ ಅವರು ಅರ್ಜಿ ನಮೂನೆ 8 ಭರ್ತಿ ಮಾಡಿ ತಿದ್ದುಪಡಿ ಕೋರಿದ್ದರು. ಅಲ್ಲದೇ ಈ ಬಗ್ಗೆ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೇರಿ ಸಂಬಂಧಪಟ್ಟ ಇತರರಿಗೆ ಮನವಿ ಸಹ ಸಲ್ಲಿಸಿದ್ದರು. ಆದರೆ, ಯಾವುದೇ ಕ್ರಮ ಆಗಿಲ್ಲ. ಬದಲಿಗೆ ಮೈಥಿಲಿ ಅವರ ಹೆಸರು ಎಸ್ಐಆರ್ ಪ್ರಕ್ರಿಯೆಯಲ್ಲಿ ಎಎಸ್‌ಡಿಡಿಒ ಪಟ್ಟಿಯಲ್ಲಿ 'ಶಾಶ್ವತ ಸ್ಥಳಾಂತರ' ಎಂದು ವರ್ಗೀಕರಿಸಲಾಗಿದೆ. ಇದನ್ನು ಪ್ರಶ್ನಿಸಿ ಮೈಥಿಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X