Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದ್ವೇಷ ಭಾಷಣ; ಕ್ರಿಮಿನಲ್ ಪ್ರಕರಣ ರದ್ದು...

ದ್ವೇಷ ಭಾಷಣ; ಕ್ರಿಮಿನಲ್ ಪ್ರಕರಣ ರದ್ದು ಕೋರಿದ ಅರ್ಜಿಗಳ ವಿಚಾರಣೆ ಅ.28ಕ್ಕೆ ನಿಗದಿಪಡಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ22 Sept 2026 12:42 AM IST
share
ದ್ವೇಷ ಭಾಷಣ; ಕ್ರಿಮಿನಲ್ ಪ್ರಕರಣ ರದ್ದು ಕೋರಿದ ಅರ್ಜಿಗಳ ವಿಚಾರಣೆ ಅ.28ಕ್ಕೆ ನಿಗದಿಪಡಿಸಿದ ಹೈಕೋರ್ಟ್

ಬೆಂಗಳೂರು : ದ್ವೇಷ ಭಾಷಣದ ಮೂಲಕ ಗಲಭೆ ಸೃಷ್ಟಿಗೆ ಪ್ರಚೋದಿಸಿದ ಹಾಗೂ ಯಾವುದೇ ವರ್ಗದ ನಾಗರಿಕರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳ ರದ್ದತಿಗೆ ಕೋರಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ನಿಗದಿಪಡಿಸಿದೆ.

ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ನಿಗದಿಯಾಗಿದ್ದವು.

ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ದ್ವೇಷ ಭಾಷಣಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಒಂದೊಂದಾಗಿ ವಿಚಾರಣೆ ನಡೆಸುವ ಬದಲು ಒಂದು ದಿನ ಎಲ್ಲ ಅರ್ಜಿಗಳನ್ನು ವಿಚಾರಣೆ ನಡೆಸಲಾಗುವುದು. ಅದಕ್ಕಾಗಿ ಅಕ್ಟೋಬರ್ 28ರಂದು ವಿಚಾರಣೆ ನಿಗದಿಪಡಿಸಲಾಗುವುದು. ಅಷ್ಟರೊಳಗೆ ಅರ್ಜಿದಾರರ ಪರ ವಕೀಲರು ಅರ್ಜಿಗೆ ಸಂಬಂಧಿಸಿದಂತೆ ಕಚೇರಿ ಎತ್ತಿರುವ ಆಕ್ಷೇಪಣೆಗಳನ್ನು ಸರಿಪಡಿಸಿ, ತಮ್ಮ ವಾದಾಂಶಕ್ಕೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆಗೆ ಕೋರಬಾರದು ಎಂದು ತಿಳಿಸಿದರು.

ಅರ್ಜಿಗಳ ಕುರಿತಂತೆ ಅಕ್ಟೋಬರ್ 28ರಂದು ಮೆರಿಟ್‌ ಆಧಾರದ ಮೇಲೆ ಕಾನೂನಾತ್ಮಕವಾಗಿ ಆದೇಶ ಮಾಡಲಾಗುವುದು. ಆ ಆದೇಶವು ಪರ ಅಥವಾ ವಿರೋಧವಾಗಿ ಇರಬಹುದು. ಪರ ಆದೇಶ ಪಡೆದವರು ನಂತರ, ಮತ್ತೆ ದ್ವೇಷ ಭಾಷಣ ಕೃತ್ಯದಲ್ಲಿ ಪಾಲ್ಗೊಂಡರೆ ಸಹಿಸುವುದಿಲ್ಲ. ಅವರ ವಿರುದ್ಧ ಕಠಿಣ ಆದೇಶ ಹೊರಡಿಸಲಾಗುವುದು ಎಂದೂ ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದರು.

ಇದೇ ವೇಳೆ, ದ್ವೇಷ ಭಾಷಣ ಮಾಡುವವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ನೋಡಿ.. ದ್ವೇಷ ಭಾಷಣ ಮಾಡುವುದರಿಂದ ಯಾವುದೇ ಉಪಯೋಗವಿಲ್ಲ. ಆದರೆ, ಏನು ಮಾಡುವುದು, ಬೀದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ನೆರೆದಿರುವುದನ್ನು ನೋಡಿದರೆ ಸಾಕು; ಭಾಷಣ ಮಾಡುವವರ ನಾಲಗೆ ಮತ್ತು ಮಿದುಳಿನ ಸಂಪರ್ಕ ಕಡಿದು ಹೋಗುತ್ತದೆ. ತನ್ನನ್ನು ತಾನು ಗೌರವಿಸಿಕೊಳ್ಳುವ ಯಾವುದೇ ವ್ಯಕ್ತಿಯೂ ಮತ್ತೊಬ್ಬರ ಭಾವನೆ-ಗೌರವಕ್ಕೆ ಧಕ್ಕೆಯಾಗುವಂತೆ ಮಾತನಾಡುವ ಧೈರ್ಯ ಮಾಡುವುದಿಲ್ಲ. ಬಾಯಿಗೆ ಬಂದಂತೆ ಮಾತನಾಡುವುದು, ನಂತರ ನಾನು ಆ ರೀತಿ ಮಾತನಾಡಿಲ್ಲ. ನನ್ನ ಹೇಳಿಕೆಗಳನ್ನು ಮಾಧ್ಯಮದವರು ತಿರುಚಿದ್ದಾರೆ ಎಂದು ಹೇಳುತ್ತ ಪ್ರಕರಣ ರದ್ದು ಕೋರಿ ಕೋರ್ಟ್‌ಗೆ ಬರುತ್ತಾರೆ. ಮಾಧ್ಯಮದವರು ಸರಿಯಾಗಿಯೇ ವರದಿ ಮಾಡಿರುತ್ತಾರೆ ಎಂದು ಮೌಖಿಕವಾಗಿ ನುಡಿದರು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X