Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಲ್ಲೆಗೆ ಕುಮ್ಮಕ್ಕು; ಲಕ್ಷ್ಮಣ ಸವದಿ...

ಹಲ್ಲೆಗೆ ಕುಮ್ಮಕ್ಕು; ಲಕ್ಷ್ಮಣ ಸವದಿ ಆರೋಪಿಯಾಗಿಸಿದ್ದ ವಿಚಾರಣಾ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ

ವಾರ್ತಾಭಾರತಿವಾರ್ತಾಭಾರತಿ8 Oct 2026 11:14 PM IST
share
ಹಲ್ಲೆಗೆ ಕುಮ್ಮಕ್ಕು; ಲಕ್ಷ್ಮಣ ಸವದಿ ಆರೋಪಿಯಾಗಿಸಿದ್ದ ವಿಚಾರಣಾ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಅಡಿಗಲ್ಲು ನೆರವೇರಿಸುವ ಸಂದರ್ಭದಲ್ಲಿ ಪ್ರಶ್ನಿಸಿದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸುವುದಕ್ಕೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿಯವರನ್ನು ಆರೋಪಿಯನ್ನಾಗಿಸಿರುವ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ದೂರುದಾರ ಸಾಕ್ಷಿಯ ಮುಖ್ಯ ವಿಚಾರಣೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಆಧರಿಸಿ ಆರೋಪಿಯನ್ನಾಗಿಸುವಂತೆ ಕೋರಿ ಪ್ರಾಸಿಕ್ಯೂಷನ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಥಣಿ ಶಾಸಕರೂ ಆದ ಲಕ್ಷ್ಮಣ ಸವದಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಅರ್ಜಿಯ ಮೆರಿಟ್‌ ಬಗ್ಗೆ ಹೇಳುತ್ತಿಲ್ಲ. ಆದರೆ, ಇಲ್ಲಿ ಪ್ರಕ್ರಿಯೆಯಲ್ಲಿ ಸಂಪೂರ್ಣವಾಗಿ ತಪ್ಪಾಗಿದೆ ಎನಿಸುತ್ತದೆ. ಸಾಕ್ಷಿಯು ಪ್ರತಿಕೂಲವಾದ ಮೇಲೆ ಪಾಟೀ ಸವಾಲಿಗೆ ಅವಕಾಶವಿದೆ. ಆದರೆ, ಪ್ರಧಾನ ಸಾಕ್ಷಿ ವಿಚಾರಣೆಗೆ ಹೇಗೆ ಸಾಧ್ಯ? ಆನಂತರ, ಪ್ರಧಾನ ಸಾಕ್ಷಿ ವಿಚಾರಣೆ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟು, ಸವದಿ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿತು. ಇದೇ ವೇಳೆ, ಪ್ರಕರಣದ ಉಳಿದ 17 ಆರೋಪಿಗಳ ವಿರುದ್ಧದ ವಿಚಾರಣೆ ಮುಂದುವರಿಸಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪ್ರಕರಣವೇನು?

ಅಥಣಿಯಲ್ಲಿ 2018ರಲ್ಲಿ ಅಂಬಿಗರ ಚೌಡಯ್ಯ ಸಮುದಾಯ ಭವನದ ಅಡಿಗಲ್ಲು ಸಮಾರಂಭದಲ್ಲಿ ದೂರುದಾರರು ಭವನದ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಅನುದಾನ ಮತ್ತಿತರ ವಿಚಾರಗಳನ್ನು ಕುರಿತು ಪ್ರಶ್ನಿಸಿದ್ದಕ್ಕೆ ಸವದಿ ಅವರ ಬೆಂಬಲಿಗರು ದೂರುದಾರನ ಮೇಲೆ ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ಸವದಿ ಅವರನ್ನು ಆರೋಪಿಯನ್ನಾಗಿಸಿರಲಿಲ್ಲ. ಆರೋಪ ಪಟ್ಟಿಯಲ್ಲೂ ಅವರ ಹೆಸರು ಇರಲಿಲ್ಲ.

ಆನಂತರ, ಪ್ರಕರಣದ ವಿಚಾರಣೆಯ ವೇಳೆ ದೂರುದಾರ ಸಾಕ್ಷಿಯೂ ಪ್ರತೀಕೂಲ ಸಾಕ್ಷಿ ನುಡಿದಿದ್ದರು. ಆದರೆ, ಮತ್ತೆ ಪ್ರಧಾನ ಸಾಕ್ಷಿ ವಿಚಾರಣೆಯ ವೇಳೆ ದೂರುದಾರನು ಲಕ್ಷ್ಮಣ ಸವದಿ ಚಿತಾವಣೆಯಿಂದ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದರು. ದೂರಿನಲ್ಲಿ ಸವದಿ ಹೆಸರನ್ನು ಠಾಣೆಯ ಅಧಿಕಾರಿ ಅಳಿಸಿ ಹಾಕಿ ಅವರ ಹೆಸರು ಎಫ್‌ಐಆರ್‌ಗೆ ಸೇರದಂತೆ ಮಾಡಿದ್ದರು ಎಂದು ಹೇಳಿಕೆ ನೀಡಿದ್ದರು. ಇದನ್ನು ಆಧರಿಸಿ ಪ್ರಾಸಿಕ್ಯೂಷನ್ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್‌ 319ರ ಅಡಿ ಸವದಿ ಅವರನ್ನು ಆರೋಪಿಯನ್ನಾಗಿಸಲು ವಿಚಾರಣಾ ನ್ಯಾಯಾಲಯಕ್ಕೆ ಕೋರಿತ್ತು.

ಪ್ರಾಸಿಕ್ಯೂಷನ್ ಮನವಿಯನ್ನು ಸೆಪ್ಟೆಂಬರ್‌ 26ರಂದು ಪುರಸ್ಕರಿಸಿದ್ದ ವಿಚಾರಣಾ ನ್ಯಾಯಾಲಯ, ಪ್ರಕರಣದಲ್ಲಿ ಸವದಿ ಹೆಸರು ಬರದಂತೆ ತಡೆಯಲು ಅಥಣಿ ಪೊಲೀಸರು ಎಲ್ಲ ಪ್ರಯತ್ನ ನಡೆಸಿದ್ದಾರೆ. ರಾಜ್ಯ ಕಾರ್ಯಾಂಗದ ಭಾಗವಾಗಿರುವ ಪೊಲೀಸ್ ಇಲಾಖೆಯು ರಾಜಕೀಯ ಅಧಿಕಾರ ಹೊಂದಿರುವ ನಾಯಕರನ್ನು ರಕ್ಷಿಸುವುದು ಮತ್ತು ಅವರ ಮಾತನ್ನು ಪಾಲಿಸುವುದು ಅಪರೂಪದ ಸಂಗತಿಯೇನಲ್ಲ ಎಂದು ತೀಕ್ಷ್ಣವಾಗಿ ನುಡಿದಿತ್ತಲ್ಲದೆ, ಪ್ರಕರಣದಲ್ಲಿ ಲಕ್ಷ್ಮಣ ಸವದಿ ಅವರನ್ನು ಆರೋಪಿಯನ್ನಾಗಿಸಿತ್ತು. ಇದನ್ನು ಪ್ರಶ್ನಿಸಿ ಸವದಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X