Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗಾಳಿ ಆಂಜನೇಯಸ್ವಾಮಿ ದೇವಾಲಯ ಮುಜರಾಯಿ...

ಗಾಳಿ ಆಂಜನೇಯಸ್ವಾಮಿ ದೇವಾಲಯ ಮುಜರಾಯಿ ಇಲಾಖೆ ವಶಕ್ಕೆ ನೀಡಿದ್ದ ಸರಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ18 Oct 2026 1:08 AM IST
share
ಗಾಳಿ ಆಂಜನೇಯಸ್ವಾಮಿ ದೇವಾಲಯ ಮುಜರಾಯಿ ಇಲಾಖೆ ವಶಕ್ಕೆ ನೀಡಿದ್ದ ಸರಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ನಗರದ ಮೈಸೂರು ರಸ್ತೆಯ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಪಡೆದು 2025ರ ಜುಲೈ 8ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸುಪರ್ದಿಗೆ ಪಡೆದು ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದು ಕೋರಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಟ್ರಸ್ಟ್‌ನ ಸಂಚಾಲಕರಾದ ಬಿ.ಪಿ. ನಾಗರಾಜು ಹಾಗೂ ಇತರ ಟ್ರಸ್ಟೀಗಳು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಪೀಠ, ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಳ್ಳಲಾಗಿದ್ದ ಆದೇಶವನ್ನು ರದ್ದುಪಡಿಸಿತು. ಆದರೆ, ಪ್ರಕರಣದಲ್ಲಿ ಕೇಳಿ ಬಂದಿರುವ ಆರೋಪಗಳ ಕುರಿತು ತನಿಖೆ ನಡೆಸಿ ಸಂಬಂಧಪಟ್ಟ ಇಲಾಖೆ ಹಾಗೂ ಪ್ರಾಧಿಕಾರ ಕ್ರಮ ಕೈಗೊಳ್ಳಬಹುದು. ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಪಡೆದುಕೊಂಡಿರುವ ಆದೇಶದಲ್ಲಿ ಕಾನೂನು ಲೋಪಗಳು ಇರುವ ಹಿನ್ನೆಲೆಯಲ್ಲಿ ಅದನ್ನು ರದ್ದುಪಡಿಸಲಾಗಿದೆ. ಪ್ರಕರಣದಲ್ಲಿ ಅರ್ಜಿದಾರರು ಮತ್ತು ಪ್ರತಿವಾದಿಗಳ ಆಕ್ಷೇಪಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ಸ್ಪಷ್ಟಪಡಿಸಿತು‌.

ಜತೆಗೆ, ದೇವಾಲಯವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಒಪ್ಪಿಸಿ 2025ರ ಜುಲೈ 8ರಂದು ಹೊರಡಿಸಿದ್ದ ಆದೇಶವೇ ರದ್ದಾಗಿರುವುದರಿಂದ ಆ ಆದೇಶ ಆಧರಿಸಿ ದೇವಾಲಯಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವ ಪ್ರಕ್ರಿಯೆ ಸಹ ರದ್ದಾಗಲಿದೆ. ಆದ್ದರಿಂದ, ನ್ಯಾಯಾಲಯದ ಆದೇಶ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಒಂದು ವಾರದಲ್ಲಿ ಆಡಳಿತಾಧಿಕಾರಿಯು ದೇವಸ್ಥಾನದ ಆಡಳಿತ ನಿರ್ವಹಣೆಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.

ಪ್ರಕರಣವೇನು?

ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳ ನಡುವೆ ಹೊಂದಾಣಿಕೆ ಇಲ್ಲ. ದೇವಾಲಯಕ್ಕೆ ಲಕ್ಷಾಂತರ ರೂ. ಆದಾಯ ಬರುತ್ತಿದ್ದರೂ ಪ್ರತಿ ವರ್ಷ ಉಳಿತಾಯವಿಲ್ಲದೆ ವೆಚ್ಚ ಮಾಡಲಾಗುತ್ತಿದೆ. ದೇವಸ್ಥಾನದ ಹಣ ದುರುಪಯೋಗವಾಗುತ್ತಿದೆ. ಆದಾಯ ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ಯಾವುದೇ ದಾಖಲೆ ನಿರ್ವಹಣೆ ಮಾಡಿಲ್ಲ. ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ನೋಟಿಸ್‌ ನೀಡಿದ ಬಳಿಕ ದಾಖಲೆ ಸೃಷ್ಟಿಸಿರುವುದು ಕಂಡು ಬಂದಿದೆ. ಇದರಿಂದ, ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಒಪ್ಪಿಸಲಾಗುತ್ತಿದೆ ಎಂದು 2025ರ ಜುಲೈ 8ರಂದು ಹೊರಡಿಸಿದ ಆದೇಶದಲ್ಲಿ ಸರ್ಕಾರ ತಿಳಿಸಿತ್ತು. ಇದನ್ನು ಪ್ರಶ್ನಿಸಿ ದೇವಾಲಯದ ಆಡಳಿತ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿತ್ತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X