Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಉತ್ತಮ ಶಿಕ್ಷಣದ ನಂಬಿಕೆಯೊಂದೇ ಮಗುವಿನ...

ಉತ್ತಮ ಶಿಕ್ಷಣದ ನಂಬಿಕೆಯೊಂದೇ ಮಗುವಿನ ಶಾಲೆ ಬದಲಾವಣೆಗೆ ಆಧಾರವಾಗದು: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ26 Nov 2026 12:28 AM IST
share
ಉತ್ತಮ ಶಿಕ್ಷಣದ ನಂಬಿಕೆಯೊಂದೇ ಮಗುವಿನ ಶಾಲೆ ಬದಲಾವಣೆಗೆ ಆಧಾರವಾಗದು: ಹೈಕೋರ್ಟ್

ಬೆಂಗಳೂರು : ಬೇರೊಂದು ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತದೆ ಎಂಬ ಪೋಷಕರ ನಂಬಿಕೆಯೊಂದೇ ಮಗುವಿನ ಶಾಲೆ ಬದಲಿಸಲು ಸಾಕಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಶಾಲೆಯಲ್ಲಿ ಶೈಕ್ಷಣಿಕ ಗುಣಮಟ್ಟ, ಬೋಧನಾ ಸೌಲಭ್ಯ ಅಥವಾ ವಾತಾವರಣದಲ್ಲಿ ಕೊರತೆಯಿದೆ ಎಂಬುದನ್ನು ಸಾಬೀತುಪಡಿಸದೆ, ಶಾಲೆ ಬದಲಾವಣೆಗೆ ನ್ಯಾಯಾಲಯದ ಮಧ್ಯಪ್ರವೇಶ ಕೋರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ 9 ವರ್ಷದ ಪುತ್ರನನ್ನು, ಸರ್ಜಾಪುರ ರಸ್ತೆಯ ಶಾಲೆಗೆ ವರ್ಗಾಯಿಸಲು ಅನುಮತಿ ಕೋರಿ ತಂದೆ ನೂರ್ ಅಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದ್ದು, ಮಗುವಿನ ಶಾಲೆ ಬದಲಾವಣೆಗೆ ಅನುಮತಿ ನಿರಾಕರಿಸಿ 2026ರ ಸೆ.15ರಂದು ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿದೆ.

ಹೈಕೋರ್ಟ್ ಹೇಳಿದ್ದೇನು?: ಹಾಲಿ ಪ್ರಕರಣದಲ್ಲಿ ಮಗುವಿನ ಪ್ರಸ್ತುತ ಶಾಲೆಯ ಶೈಕ್ಷಣಿಕ ಗುಣಮಟ್ಟ, ಬೋಧನಾ ಸೌಲಭ್ಯ ಅಥವಾ ವಾತಾವರಣದಲ್ಲಿ ಕೊರತೆಯಿದೆ ಎಂಬುದಕ್ಕೆ ದಾಖಲೆಗಳಿಲ್ಲ. ಮಗು ಓದಿನಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ ಅಥವಾ ಅದೇ ಶಾಲೆಯಲ್ಲಿ ಮುಂದುವರಿದರೆ ಭವಿಷ್ಯಕ್ಕೆ ಹಾನಿಯಾಗುತ್ತದೆ ಎಂಬುದಕ್ಕೂ ಪೂರಕ ಅಂಶಗಳಿಲ್ಲ ಎಂದಿರುವ ಹೈಕೋರ್ಟ್, ಮಗುವಿಗೆ ಮತ್ತೊಂದು ಶಾಲೆ ಉತ್ತಮ ಅವಕಾಶ ನೀಡಲಿದೆ ಎಂಬ ಪ್ರಾಮಾಣಿಕ ನಂಬಿಕೆ ತಂದೆಗೆ ಇರಬಹುದು. ಆದರೆ, ಆ ನಂಬಿಕೆಯೊಂದೇ ಶಾಲೆ ಬದಲಾವಣೆಗೆ ಅಥವಾ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಆಧಾರವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X