Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಗ್ನಿ ಸುರಕ್ಷತಾ ಪತ್ರ ಪಡೆಯದೇ...

ಅಗ್ನಿ ಸುರಕ್ಷತಾ ಪತ್ರ ಪಡೆಯದೇ ಚಿನ್ನಸ್ವಾಮಿ ಸ್ಟೇಡಿಯಂಗೆ ವಿದ್ಯುತ್ ಸಂಪರ್ಕ ವಿಚಾರ : ಬೆಸ್ಕಾಂಗೆ ಹೈಕೋರ್ಟ್ ತೀವ್ರ ತರಾಟೆ

ವಾರ್ತಾಭಾರತಿವಾರ್ತಾಭಾರತಿ30 Jun 2025 11:28 PM IST
share
ಅಗ್ನಿ ಸುರಕ್ಷತಾ ಪತ್ರ ಪಡೆಯದೇ ಚಿನ್ನಸ್ವಾಮಿ ಸ್ಟೇಡಿಯಂಗೆ ವಿದ್ಯುತ್ ಸಂಪರ್ಕ ವಿಚಾರ : ಬೆಸ್ಕಾಂಗೆ ಹೈಕೋರ್ಟ್ ತೀವ್ರ ತರಾಟೆ

ಬೆಂಗಳೂರು : ಅಗ್ನಿ ಸುರಕ್ಷತಾ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಳ್ಳದಿದ್ದರೂ ಚಿನ್ನಸ್ವಾಮಿ ಸ್ಟೇಡಿಯಂಗೆ ವಿದ್ಯುತ್ ಸಂಪರ್ಕ ನೀಡಿದ ಬೆಸ್ಕಾಗೆ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ.

ತಮ್ಮ ಸಂಸ್ಥೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಬೆಸ್ಕಾಂ ನೀಡಿದ್ದ ನೋಟಿಸ್ ಪ್ರಶ್ನಿಸಿ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಅಕ್ರಮ ವಿದ್ಯುತ್ ಸಂಪರ್ಕ ನೀಡಿರುವುದಕ್ಕೆ ಸಂಪೂರ್ಣವಾಗಿ ಬೆಸ್ಕಾಂ ಸಂಸ್ಥೆಯನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಬೆಸ್ಕಾಂ ನೋಟಿಸ್ ಕೊಟ್ಟು, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಕೆಲವೊಂದು ಬೆಳವಣಿಗೆಗಳು ನಡೆದಿವೆ. ಜೂನ್ 12ಕ್ಕೆ ಬೆಸ್ಕಾಂನಿಂದ ವಿದ್ಯುತ್ ಸಂಪರ್ಕ ಕಡಿತದ ನೋಟಿಸ್ ಕೊಟ್ಟು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.

ಅದನ್ನು ಪ್ರಶ್ನಿಸಿ ಜೂನ್ 17ಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಅದೇ ದಿನ ವಿದ್ಯುತ್ ಸಂಪರ್ಕ ಮರುಸ್ಥಾಪಿಸಲಾಗಿದೆ ಎಂದರು.

ಈ ವಿಚಾರ ಗಮನಿಸಿದ ನ್ಯಾಯಾಲಯ ಅಗ್ನಿ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಂಡಿಲ್ಲ ಎಂಬ ಕಾರಣಕ್ಕೆ ವಿದ್ಯುತ್ ಸಂಪರ್ಕ ಕಡಿತದ ನೋಟಿಸ್ ಕೊಟ್ಟು, ಸಂಪರ್ಕವನ್ನೂ ಕಡಿತಗೊಳಿಸಲಾಗಿತ್ತು. ಆದರೆ, ಅಗ್ನಿ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಂಡಿಲ್ಲ ಎಂದು ಗೊತ್ತಿದ್ದರೂ ವಿದ್ಯುತ್ ಸಂಪರ್ಕ ಕೊಟ್ಟಿದ್ದು ಹೇಗೆ? ಎಂದು ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿತು.

ಈ ವೇಳೆ ಬೆಸ್ಕಾಂ ಪರ ವಕೀಲರು, ಕ್ರಿಕೆಟ್ ಅಸೋಸಿಯೇಷನ್ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಬೇಕಿದ್ದರೆ ಅದನ್ನು ಪುನಃ ಕಡಿತಗೊಳಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಅಗ್ನಿ ಸರುಕ್ಷತಾ ನಿರಾಕ್ಷೇಪಣಾ ಪತ್ರ ಸರಕಾರ ನೀಡಬೇಕು. ಸರಕಾರವನ್ನು ಕೇಳದೇ ನಿಮ್ಮಷ್ಟಕ್ಕೆ ನೀವೇ ವಿದ್ಯುತ್ ಸಂಪರ್ಕ ಕೊಟ್ಟುಬಿಟ್ಟರೆ ನ್ಯಾಯಾಲಯ ಸುಮ್ಮನಿರಲ್ಲ. ಈಗಾಗಲೇ ಆಗಿರುವ ಅನಾಹುತ ಸಾಕಷ್ಟಿದೆ. ಮತ್ತೇ ಏನಾದರೂ ಅವಘಡ ಸಂಬಂಭವಿಸಿದರೆ ಯಾರು ಹೊಣೆ? ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳದಿದ್ದರೆ ಆಯಿತು, ಇಲ್ಲದಿದ್ದರೆ ಸ್ಟೇಡಿಯಂ ಕತ್ತಲಲ್ಲಿ ಇರಲಿ ಬಿಡಿ. ಇರುವ ಆಯ್ಕೆ ಒಂದೇ ಅಗ್ನಿ ಸುರಕ್ಷತಾ ಕ್ರಮಗಳನ್ನುನ ಅಳವಡಿಸಿಕೊಳ್ಳಬೇಕು, ವಿದ್ಯುತ್ ಸಂಪರ್ಕ ಪಡೆದುಕೊಳ್ಳಬೇಕು ಅಷ್ಟೇ. ಅಪಾಯಗಳ ವಿಚಾರದಲ್ಲಿ ಶೂನ್ಯ ಸಹನೆ ಬೇಕು ಎಂದು ತೀಕ್ಷ್ಣವಾಗಿ ಹೇಳಿತು.

ವಾದ-ಪ್ರತಿವಾದದ ಬಳಿಕ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ಬೆಸ್ಕಾಂ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಅಗ್ನಿ ಸುರಕ್ಷತೆ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಿಗೆ ನೋಟಿಸ್‌ಗೊಳಿಸಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X