Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿಗೆ ರೈತಪರ ಕಾಳಜಿ ಇದ್ದರೆ ಮಹದಾಯಿ,...

ಬಿಜೆಪಿಗೆ ರೈತಪರ ಕಾಳಜಿ ಇದ್ದರೆ ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿಸಿ: ಎಂ.ಲಕ್ಷ್ಮಣ್

ವಾರ್ತಾಭಾರತಿವಾರ್ತಾಭಾರತಿ26 Dec 2023 11:17 PM IST
share
ಬಿಜೆಪಿಗೆ ರೈತಪರ ಕಾಳಜಿ ಇದ್ದರೆ ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿಸಿ: ಎಂ.ಲಕ್ಷ್ಮಣ್

ಬೆಂಗಳೂರು: ಬಿಜೆಪಿಯವರಿಗೆ ರೈತಪರ ಕಾಳಜಿ ಇದ್ದರೆ ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುವ ಬಗ್ಗೆ ಮಾತನಾಡಲಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸವಾಲು ಹಾಕಿದ್ದಾರೆ.

ಮಂಗಳವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ 45 ಸಾವಿರ ಕೋಟಿ ರೂ. ಪರಿಹಾರ ಬಾಕಿ ಇದೆ. ಅದನ್ನು ಕೊಡಿಸುವ ಬಗ್ಗೆ ಬಿಜೆಪಿಯ ಯಾವೊಬ್ಬ ಸಂಸದರೂ ಚಕಾರ ಎತ್ತುತ್ತಿಲ್ಲ ಎಂದು ಆರೋಪಿಸಿದರು.

ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರು, ಕೇಂದ್ರ ಸಚಿವರು ಧ್ವನಿ ಎತ್ತುತ್ತಿಲ್ಲ. ಪ್ರಹ್ಲಾದ್ ಜೋಷಿ ಅವರು ತಮ್ಮ ಭಾಗದ ಸಮಸ್ಯೆ ಬಗ್ಗೆ ಮೋದಿ ಅವರ ಜತೆ ಮಾತನಾಡಿದ್ದಾರೆ. ಶೋಭ ಕರಂದ್ಲಾಜೆ ಅವರು ಚಿಕ್ಕಮಗಳೂರು ಸಂಸದೆಯಾಗಿ ಎಷ್ಟು ಬಾರಿ ಆ ಜಿಲ್ಲೆಗೆ ಭೇಟಿ ನೀಡಿದ್ದಾರೆ, ಎಷ್ಟು ಅನುದಾನ ತಂದಿದ್ದಾರೆ ಎಂದು ಎಂ.ಲಕ್ಷ್ಮಣ್ ಪ್ರಶ್ನಿಸಿದರು.

ಚುನಾವಣೆ ಸಮೀಪಿಸುತ್ತಿದೆ ಎಂದು ಗ್ಯಾರಂಟಿ ಯೋಜನೆಗಳಿಂದ ಜನರ ದಿಕ್ಕು ತಪ್ಪಿಸಲು ಸಣ್ಣ ವಿಚಾರವನ್ನು ದೊಡ್ಡದಾಗಿ ಬಿಂಬಿಸುವ ಪ್ರಯತ್ನವನ್ನು ಬಿಜೆಪಿಯವರು ಮಾಡಿತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಅಷ್ಟೊಂದು ಆಸಕ್ತಿ ಇದ್ದರೆ ಬರಗಾಲದಲ್ಲಿ ಇದುವರೆಗೂ 5 ಪೈಸೆ ಹಣ ಬಿಡುಗಡೆ ಮಾಡಿಲ್ಲ ಏಕೆ?, ಬಿಜೆಪಿಯವರು ರೈತ ವಿರೋಧಿ, ಜನವಿರೋಧಿ, ಪರಿಶಿಷ್ಟರ ವಿರೋಧಿ, ಅಲ್ಪಸಂಖ್ಯಾತ ವಿರೋಧಿ, ಒಬಿಸಿ ವಿರೋಧಿಗಳು. ಅವರು ಏನಿದ್ದರೂ ಕಾರ್ಪೋರೇಟ್ ಸ್ನೇಹಿತರು, ಹಿಂದಿನ 9 ವರ್ಷಗಳಲ್ಲಿ ಸುಮಾರು 22 ಲಕ್ಷ ಕೋಟಿ ರೂ.ಗಳಷ್ಟು ಕಾರ್ಪೋರೇಟ್ ಸ್ನೇಹಿತರ ಸಾಲ ಮನ್ನಾ ಮಾಡಿದ್ದೀರಿ. ಎಲ್ಲಾದರೂ ರೈತರ ಒಂದು ರೂಪಾಯಿ ಸಾಲ ಮನ್ನಾ ಮಾಡಿರುವ ಉದಾಹರಣೆ ಇದೆಯೇ ಎಂದು ಎಂ.ಲಕ್ಷ್ಮಣ್ ಪ್ರಶ್ನಿಸಿದರು.

ಬಜರಂಗದಳ, ಶ್ರೀರಾಮಸೇನೆ ಮುಂದೆ ಬಿಟ್ಟು ಕೋಮುಗಲಭೆ ಸೃಷ್ಟಿಸಲು ಪ್ರಯತ್ನ ಆರಂಭಿಸಿದ್ದಾರೆ. ಹನುಮ ಜಯಂತಿ ಮಾಡುವುದು ಬಿಜೆಪಿ ಮಾತ್ರವಲ್ಲ, ಇತರೆ ಸಮುದಾಯದವರು. ಬಿಜೆಪಿಗೂ ಹನುಮನಿಗೂ ದೂರ ದೂರ. ಹಿಂದುಳಿದವರ ಓಲೈಕೆಗೆ ಇತ್ತೀಚೆಗೆ ಕತ್ತಿಗೆ ಕೇಸರಿ ಶಾಲು ಧರಿಸಿ ಶ್ರೀರಂಗಪಟ್ಟಣದಲ್ಲಿ ದೊಡ್ಡ ಮೆರವಣಿಗೆ ಮಾಡಿದರು. ಇಲ್ಲಿ ಸ್ಥಳೀಯರಿಗಿಂತ ಹೊರಗಿನಿಂದ ಕರಾವಳಿ ಭಾಗದಿಂದ ಕರೆತಂದಿದ್ದರು ಎಂದು ಎಂ.ಲಕ್ಷ್ಮಣ್ ದೂರಿದರು.

ಬಿಜೆಪಿಯವರು ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಕೋಮುಗಲಭೆ ಸೃಷ್ಟಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಾರೆ. ಅಲ್ಪಸಂಖ್ಯಾತ ಸಮುದಾಯದವರು ಕಳೆದ ವಿಧಾನಸಭೆ ಚುನಾವಣೆ ವೇಳೆ ತೋರಿದ ಸಹನೆಯನ್ನು ತೋರಬೇಕು ಎಂದು ಮನವಿ ಮಾಡುತ್ತೇನೆ ಎಂದು ಎಂ.ಲಕ್ಷ್ಮಣ್ ಮನವಿ ಮಾಡಿದರು.

ನಮ್ಮ ಐದನೇ ಗ್ಯಾರಂಟಿ ಯೋಜನೆ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, 5.69 ಲಕ್ಷ ಯುವಕರಿಗೆ ಪ್ರೋತ್ಸಾಹಧನ ನೀಡಲಿದ್ದೇವೆ. ಇದಲ್ಲದೆ ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿಯಾಗಿದೆ. ರಾಜ್ಯದ ಶೇ.96ರಷ್ಟು ಜನರಿಗೆ ಒಂದಲ್ಲಾ ಒಂದು ಯೋಜನೆ ತಲುಪುತ್ತಿದೆ. ಹೀಗಾಗಿ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಇಂತಹ ಪ್ರಯತ್ನ ಮಾಡುತ್ತಿದೆ. ಬಿಜೆಪಿಯ ಯಾವುದೇ ನಾಯಕರು ದಮ್ಮು, ತಾಕತ್ತು ಬಗ್ಗೆ ಮಾತನಾಡುತ್ತಾ ತೊಡೆ ತಟ್ಟುತ್ತಿದ್ದಾರೆ. ಮೂರನೇ ಬಾರಿಗೆ ಮೋದಿ ಅವರನ್ನು ಪ್ರಧಾನಿ ಮಾಡಲು ಮೈ ಪರಚಿಕೊಳ್ಳುತ್ತಿದ್ದಾರೆ. ಅದರಿಂದ ಗಾಯವಾಗುತ್ತದೆ ಎಂದು ಎಂ.ಲಕ್ಷ್ಮಣ್ ತಿಳಿಸಿದರು.

ಕೆಪಿಸಿಸಿ ಸಂವಹನ ವಿಭಾಗದ ಸಹ ಅಧ್ಯಕ್ಷ ರಮೇಶ್ ಬಾಬು ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಮೂರು ಬಾರಿ ಅಧಿವೇಶನ ನಡೆದಿದ್ದರೂ ಇತ್ತೀಚೆಗಷ್ಟೇ ಪರಿಷತ್ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿದ್ದಾರೆ. ಅವರ ಆಯ್ಕೆ ಬಗ್ಗೆ ಅವರದೇ ಪಕ್ಷದ ನಾಯಕರು ಬೇರೆ ಬೇರೆ ವ್ಯಾಖ್ಯಾನ ಮಾಡುತ್ತಿದ್ದಾರೆ ಎಂದರು.

ಬಗರ್ ಹುಕ್ಕುಂ ಸಾಗುವಳಿ ಸಕ್ರಮ ಮಾಡುವ ವಿಚಾರದಲ್ಲಿ ಯಡಿಯೂರಪ್ಪನವರ ಆಶ್ವಾಸನೆ ಈಡೇರಲಿಲ್ಲ. ಈಗ ಕಾಂಗ್ರೆಸ್ ಸರಕಾರ ಈ ಪ್ರಕರಣಗಳನ್ನು ಸಮರೋಪಾದಿಯಲ್ಲಿ ಬಗೆಹರಿಸುತ್ತಿದೆ. ಫಸಲ್ ಭಿಮಾ ಯೋಜನೆಯಲ್ಲಿ ಕರ್ನಾಟಕದ 50 ಲಕ್ಷ ರೈತರಿಗೆ ಹಣ ಪಾವತಿಯಾಗಿಲ್ಲ ಎಂದು ಸಿಎಜಿ ವರದಿ ಹೇಳುತ್ತಿದೆ. ರೈತರಿಗೆ ನೆರವಾಗದವರು ಒಂದು ಹೇಳಿಕೆ ಇಟ್ಟುಕೊಂಡು ಟೀಕೆ ಮಾಡುವುದನ್ನು ಬಿಡಬೇಕು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X