Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಜಾಪ್ರಭುತ್ವ ಉಳಿಯಬೇಕಾದರೆ 'ಇಂಡಿಯಾ...

ಪ್ರಜಾಪ್ರಭುತ್ವ ಉಳಿಯಬೇಕಾದರೆ 'ಇಂಡಿಯಾ ಒಕ್ಕೂಟ'ಕ್ಕೆ ಯಶಸ್ಸು ಸಿಗಬೇಕು : ಸುಧೀಂದ್ರ ಕುಲಕರ್ಣಿ

ವಾರ್ತಾಭಾರತಿವಾರ್ತಾಭಾರತಿ11 April 2024 11:22 PM IST
share
ಪ್ರಜಾಪ್ರಭುತ್ವ ಉಳಿಯಬೇಕಾದರೆ ಇಂಡಿಯಾ ಒಕ್ಕೂಟಕ್ಕೆ ಯಶಸ್ಸು ಸಿಗಬೇಕು : ಸುಧೀಂದ್ರ ಕುಲಕರ್ಣಿ

ಬೆಂಗಳೂರು: ದೇಶವು ಅಘೋಷಿತ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಪ್ರಜಾಪ್ರಭುತ್ವವನ್ನು ನಾಶ ಮಾಡುವ ಕೆಲಸ ಬಿಜೆಪಿ ಇಂದು ಮಾಡುತ್ತಿದೆ. ಹೀಗಾಗಿ ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ 'ಇಂಡಿಯಾ ಒಕ್ಕೂಟ'ಕ್ಕೆ ಯಶಸ್ಸು ಸಿಗಬೇಕು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ತಿಳಿಸಿದ್ದಾರೆ.

ಗುರುವಾರ ಇಲ್ಲಿನ ಗಾಂಧಿ ಭವನದಲ್ಲಿ ಸೃಷ್ಟಿ ಪಬ್ಲಿಕೇಶನ್ ವತಿಯಿಂದ ಆಯೋಜಿಸಿದ್ದ ಡಾ. ಪರಕಾಲ ಪ್ರಭಾಕರ್ ರ ' ದಿ ಕ್ರೂಕುಡ್ ಟಿಂಬರ್ ಆಫ್ ನ್ಯೂ ಇಂಡಿಯಾ' ಕೃತಿಯ ಕನ್ನಡ ಅವತರಣಿಕೆಯಾದ ರಾಹು (ಆರ್.ಕೆ. ಹುಡುಗಿ) ಅನುವಾದಿಸಿದ ' ಎಡವಾಗುತ್ತಿರುವ ಗಣರಾಜ್ಯ' ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಈವರೆಗೂ 17 ಲೋಕಸಭಾ ಚುನಾವಣೆಗಳು ನಡೆದಿದೆ. ತುರ್ತು ಪರಿಸ್ಥಿತಿಯನ್ನು ಹೊರತುಪಡಿಸಿದರೆ ಉಳಿದ ಯಾವ ಸಂದರ್ಭದಲ್ಲಿಯೂ ಗಣತಂತ್ರ ವ್ಯವಸ್ಥೆ ಇಷ್ಟೊಂದು ಅಪಾಯಕಾರಿ ಸ್ಥಿತಿಯಲ್ಲಿ ಇರಲಿಲ್ಲ. 1975ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಭಾರತದ ಗಣತಂತ್ರ ವ್ಯವಸ್ಥೆ ಉಳಿಯುತ್ತದೆ ಇಲ್ಲವೋ ಎಂದು ಆತಂಕದಲ್ಲಿದ್ದೆವು. ಈಗ ನಾವು ಅದೇ ಸ್ಥಿತಿಯಲ್ಲಿದ್ದೇವೆ. ತುರ್ತು ಪರಿಸ್ಥಿತಿಯನ್ನು ಅಧಿಕೃತವಾಗಿ ಘೋಷಿಸದೆ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯನ್ನು ತಂದಿಟ್ಟಿದ್ದಾರೆ ಎಂದು ಅವರು ತಿಳಿಸಿದರು.

ಕಳೆದ ಹತ್ತು ವರ್ಷಗಳಲ್ಲಿ ವಿಕಸಿತ್ ಭಾರತ್ ಎನ್ನುತ್ತಾರೆ. ಪ್ರಜಾಪ್ರಭುತ್ವನ್ನು ಹತ್ತಿಕ್ಕಿದ್ದಾರೆ. ಇಂದು ಪಾರ್ಲಿಮೆಂಟ್ ಚುನಾವಣೆಯಾಗುತ್ತದೆ. ಆದರೆ ಪಾರ್ಲಿಮೆಂಟ್ ಗೆ ಯಾವುದೇ ಮೌಲ್ಯ ಇಲ್ಲವಾಗಿದೆ. ಪಾರ್ಲಿಮೆಂಟ್ ನಲ್ಲಿ ಯಾವುದೇ ಚರ್ಚೆಯಾಗುತ್ತಿಲ್ಲ, ವಿರೋಧಿ ಪಕ್ಷಗಳ ಮಾತುಗಳನ್ನು ಕೇಳುತ್ತಿಲ್ಲ. 150 ಲೋಕಸಭಾ ಸದಸ್ಯರನ್ನು ಅಮಾನತು ಮಾಡಲಾಗಿತ್ತು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ವಿರೋಧಿ ಪಕ್ಷಗಳ ರಾಜ್ಯ ಸರಕಾರವನ್ನು ಹೇಗೆ ಉರುಳಿಸುತ್ತಾರೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಮಹಾರಾಷ್ಟ್ರದಲ್ಲಿ ಶಿವಸೇನೆಯ ಶಾಸಕರನ್ನು ಗುಹಾಹಟಿಗೆ ಕರೆದುಕೊಂಡು ಹೋಗಿ ಸರಕಾರವನ್ನು ಉರುಳಿಸಿದರು. ಇದು ಪ್ರಜಾಪ್ರಭುತ್ವವೇ ಎಂದು ಅವರು ಪ್ರಶ್ನಿಸಿದರು.

ಇಂದಿರಾಗಾಂಧಿಯವರಾಗಲೀ, ಜೆಪಿ, ವಾಜಪೇಯಿ ಅಡ್ವಾಣಿ ಸೇರಿ ಯಾವುದೇ ವಿರೋಧಿಗಳನ್ನು ದೇಶದ್ರೋಹಿ ಎನ್ನಲಿಲ್ಲ. ಆದರೆ ಇಂದು ತಮ್ಮನ್ನು ವಿರೋಧಿಸುವವರನ್ನು ಕೇಂದ್ರ ಸರಕಾರವೇ ದೇಶದ್ರೋಹಿ ಎಂದು ಕರೆಯುತ್ತಿದೆ. ಈಡಿ, ಸಿಬಿಐಗಳ ದುರುಪಯೋಗ. ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಚುನಾವಣೆ ವೇಳೆ ಜೈಲಿನಲ್ಲಿದ್ದಾರೆ. ಈ ರೀತಿ ಯಾವತ್ತೂ ಆಗಿರಲಿಲ್ಲ. ಚುನಾವಣೆ ಘೋಷಣೆಯಾದ ಮೇಲೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರನ್ನು ಜೈಲಿಗೆ ಹಾಕಿದ್ದಾರೆ ಎಂದು ಸುಧೀಂದ್ರ ಕುಲಕರ್ಣಿ ಬೇಸರ ವ್ಯಕ್ತಪಡಿಸಿದರು.

ಸಾಹಿತಿ ಪ್ರೊ.ರಾಜಪ್ಪ ದಳವಾಯಿ ಮಾತನಾಡಿ, ಪುಸ್ತಕವು 2013ರಿಂದ 2023ರವೆರೆಗಿನ ವಿಚಾರಗಳನ್ನು ಕುರಿತು ಮಾತನಾಡುತ್ತದೆ. ಜೊತೆಗೆ ಇತಿಹಾಸದ ಕುರಿತು ಹೇಳುತ್ತದೆ. ಮೋದಿ ವರ್ಸಸ್ ಮೋದಿ ಎಂಬುದು ಬಹಳ ಮುಖ್ಯವಾದ ಲೇಖನ ಇದರಲ್ಲಿದೆ. ಕೆಂಪು ಕೋಟೆಯಲ್ಲಿ ಮೋದಿ ಮಾಡಿರುವ ಭಾಷಣ ಹೇಗೆ ಬದಲಾಗುತ್ತಾ ಹೋಗಿದೆ ಎಂಬುದು ವಿಶ್ಲೇಷಣೆಯನ್ನು ಇಲ್ಲಿ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಬಿ.ಆರ್. ಪಾಟೀಲ್, ಅನುವಾದಕ ರಾಹು ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X