Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಿರಂತರ ಮಳೆ: ಬೆಂಗಳೂರು ನಗರ ಜಿಲ್ಲೆಯ...

ನಿರಂತರ ಮಳೆ: ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ21 Oct 2024 8:01 AM IST
share
ನಿರಂತರ ಮಳೆ: ಬೆಂಗಳೂರು ನಗರ ಜಿಲ್ಲೆಯ ಎಲ್ಲಾ  ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು, ಅ 21 : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 21.10.2024 ರಂದು ಇಂದು ಮುಂಜಾಗೃತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ. ಜಿ ಅವರು, ಮೌಖಿಕವಾಗಿ ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸೂಚನೆಯನ್ನು ನೀಡಲಾಗಿದೆ. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನ ವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ನೀಡುವ ರಜೆಯಿಂದ ಉಂಟಾಗಿರುವ ಕಲಿಕಾ ಸಮಯದ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ಸರಿದೂಗಿಸುವಂತೆ ತಿಳಿಸಲಾಗಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X