Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪತ್ರಕರ್ತರ ತರಬೇತಿಗಾಗಿ ಇನ್ಫೋಸಿಸ್...

ಪತ್ರಕರ್ತರ ತರಬೇತಿಗಾಗಿ ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ - ಕರ್ನಾಟಕ ಮಾಧ್ಯಮ ಅಕಾಡಮಿ ಒಡಂಬಡಿಕೆ

ವಾರ್ತಾಭಾರತಿವಾರ್ತಾಭಾರತಿ9 Sept 2025 10:58 AM IST
share
ಪತ್ರಕರ್ತರ ತರಬೇತಿಗಾಗಿ ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ - ಕರ್ನಾಟಕ ಮಾಧ್ಯಮ ಅಕಾಡಮಿ ಒಡಂಬಡಿಕೆ

ಬೆಂಗಳೂರು, ಸೆ.9: ಇನ್ಫೋಸಿಸ್ನ ಸ್ಪ್ರಿಂಗ್ ಬೋರ್ಡ್ ಸಿಎಸ್ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಈ ಒಡಂಬಡಿಕೆ ನಡೆದಿದೆ.

ಪತ್ರಕರ್ತರ ಸಾಫ್ಟ್ ಸ್ಕಿಲ್ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್. ಅಡಿ ಕರ್ನಾಟಕ ಮಾಧ್ಯಮ ಅಕಾಡಮಿ ಕೈಗೆತ್ತಿಕೊಂಡ ಮೊದಲ ಕಾರ್ಯಕ್ರಮವಾಗಿದೆ.

ಇನ್ಫೋಸಿಸ್ ಸಿ.ಎಸ್.ಆರ್. ಯೋಜನೆಯ 'ಸ್ಪ್ರಿಂಗ್ ಬೋರ್ಡ್' ಪ್ಲಾಟ್ಫಾರ್ಮ್ ಮೂಲಕ ಪತ್ರಕರ್ತರ ಡಿಜಿಟಲ್ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಸಾಮರ್ಥ್ಯ ವೃದ್ಧಿ ಈ ಒಡಂಬಡಿಕೆಯ ಉದ್ದೇಶವಾಗಿದೆ.

“ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಭಾಗಿತ್ವವು ಬದಲಾಗುತ್ತಿರುವ ಹೊಸ ಮಾಧ್ಯಮಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ವಿನೂತನ ಪ್ಲಾಟ್ಫಾರ್ಮ್ ಮಾಧ್ಯಮ ವೃತ್ತಿಪರರ ಕೌಶಲ್ಯ ಉನ್ನತೀಕರಣಕ್ಕೆ, ಅದರಲ್ಲೂ ವಿಶೇಷವಾಗಿ ಪತ್ರಕರ್ತರಿಗೆ ವೇಗವಾಗಿ ಬದಲಾಗುತ್ತಿರುವ ಸನ್ನಿವೇಶಗಳಿಗೆ ಅನುಗುಣವಾಗಿ ತಾಂತ್ರಿಕ ಪರಿಣತಿ ಹಾಗೂ ಸುದ್ದಿಯನ್ನು ಪ್ರಸ್ತುತಪಡಿಸುವ ಕೌಶಲವನ್ನು ಒದಗಿಸಲಿದೆ” ಎಂಬ ಆಶಯವನ್ನು ಕರ್ನಾಟಕ ಮಾಧ್ಯಮ ಅಕಾಡಮಿಯ ಅಧ್ಯಕ್ಷೆ ಆಯೇಶಾ ಖಾನಂ ವ್ಯಕ್ತಪಡಿಸಿದ್ದಾರೆ.

“ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ಶಿಕ್ಷಣ ಕುರಿತ ಸಿಎಸ್ಆರ್ ಕಾರ್ಯಕ್ರಮವಾಗಿದೆ. ಇಂದು ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ಮಾಧ್ಯಮ ಅಕಾಡಮಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಮಾಧ್ಯಮ ಅಕಾಡಮಿಗೆ ಸ್ಪ್ರಿಂಗ್ ಬೋರ್ಡ್ನ ಡಿಜಿಟಲ್ ವಿಷಯಗಳಿಗೆ ಪ್ರವೇಶ ಲಭಿಸಲಿದೆ ಮತ್ತು ಅವರು ಸಾಫ್ಟ್ ಸ್ಕಿಲ್ ಗಳು, ವ್ಯಕ್ತಿತ್ವ ವಿಕಾಸ ಹಾಗೂ ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಇತ್ತೀಚಿನ ತಂತ್ರಜ್ಞಾನಗಳ ಅವಲೋಕನ ಕುರಿತ ವಿಷಯಗಳಿಂದ ಪ್ರಯೋಜನ ಪಡೆಯಬಹುದು. ಇದು ವಿಶೇಷವಾಗಿ 2ನೇ ಹಾಗೂ 3ನೇ ಹಂತದ ನಗರಗಳ ಪತ್ರಕರ್ತರಿಗೆ ಖಂಡಿತವಾಗಿಯೂ ಸಹಾಯಕವಾಗಲಿದೆ”ಎಂದು ಇನ್ಫೋಸಿಸ್ ನ ಹಿರಿಯ ಉಪಾಧ್ಯಕ್ಷ (ಇಟಿಎ) ಸತೀಶ ಬಿ. ನಂಜಪ್ಪ ಅಭಿಪ್ರಾಯ ಪಟ್ಟಿದ್ದಾರೆ.

ತರಬೇತಿ

ಇನ್ಫೋಸಿಸ್ ಸ್ಪ್ರಿಂಗ್ಬೋರ್ಡ್ ಕಾರ್ಯಕ್ರಮದಡಿ ಪತ್ರಕರ್ತರಿಗೆ ಮೂರು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುವುದು. ಇದರಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಅಗತ್ಯ ಕೌಶಲ್ಯಗಳು, ಕೃತಕ ಬುದ್ಧಿಮತ್ತೆಯ ಬಳಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು.

ಈ ವರ್ಷದಲ್ಲಿ ಒಟ್ಟು ಮೂರು ಕಾರ್ಯಕ್ರಮಗಳ ಮೂಲಕ ಒಟ್ಟು 150 ಪತ್ರಕರ್ತರಿಗೆ ತರಬೇತಿ ನೀಡಲು ಉದ್ದೇಶಿಸಿದೆ. ಇದರಲ್ಲಿ ವಿಶೇಷವಾಗಿ ಒಂದು ಬ್ಯಾಚ್ ನಲ್ಲಿ ಮಹಿಳಾ ಆಯವ್ಯಯದಡಿ ಪತ್ರಕರ್ತೆಯರಿಗೆ ತರಬೇತಿ ನೀಡಲು ಉದ್ದೇಶಿಸಿದೆ.

ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಈ ತರಬೇತಿಯಲ್ಲಿ ಆದ್ಯತೆ ನೀಡಲಾಗುವುದು.

ಇನ್ಫೋಸಿಸ್ ಸಂಸ್ಥೆಯು ಪ್ಲಾಟ್ಫಾರ್ಮ್ ಮತ್ತು ಪರಿಣತಿ ಒದಗಿಸಲಿದೆ. ಕರ್ನಾಟಕ ಮಾಧ್ಯಮ ಅಕಾಡಮಿಯು ಪತ್ರಕರ್ತರು ಹಾಗೂ ಶಿಕ್ಷಕರ ಭಾಗವಹಿಸುವಿಕೆ ಸಮನ್ವಯಗೊಳಿಸಲಿದೆ.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುಣಮಟ್ಟದ ಸುಧಾರಣೆಯ ನಿಟ್ಟಿನಲ್ಲಿ ಇದೊಂದು ಮಹತ್ವದ ಉಪಕ್ರಮವಾಗಿದೆ. ಹೆಚ್ಚು ಪತ್ರಕರ್ತರಿಗೆ ತರಬೇತಿ ನೀಡುವ ಆಶಯದೊಂದಿಗೆ ಕರ್ನಾಟಕ ಮಾಧ್ಯಮ ಅಕಾಡಮಿಯು ಮುಂದಡಿಯಿಟ್ಟಿದೆ.

ಮಾಧ್ಯಮ ಅಕಾಡಮಿಯ ಸದಸ್ಯ ಎಚ್.ವಿ.ಕಿರಣ್ ಇನ್ಫೋಸಿಸ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಸತೀಶ ಬಿ. ನಂಜಪ್ಪ, ಹಿರಿಯ ಅಧಿಕಾರಿಗಳಾದ ಸಂತೋಷ್ ಅನಂತಪುರ, ಬಿಳಿಗಿರಿ ರಂಗ ಮತ್ತಿತರರು ಉಪಸ್ಥಿತರಿದ್ದರು.

Tags

Karnataka Media Academy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X