ರಾಜ್ಯಪಾಲರ ಮೂಲಕ ಕನ್ನಡಿಗರಿಗೆ ಬಿಜೆಪಿಯಿಂದ ಅವಮಾನ : ಸಚಿವ ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಾಂಸ್ಕೃತಿಕ, ಆರ್ಥಿಕ ಹಾಗೂ ಆಡಳಿತಾತ್ಮಕವಾಗಿ ಕನ್ನಡಿಗರನ್ನು ಮತ್ತು ಕರ್ನಾಟಕವನ್ನು ಕಡೆಗಣಿಸಿ ಶೋಷಿಸಿದ್ದ ಬಿಜೆಪಿ ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜ್ಯಪಾಲರ ಮೂಲಕವೇ ಕನ್ನಡಿಗರಿಗೆ ಅವಮಾನ ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗುರುವಾರ ವಿಧಾನಮಂಡಲದಲ್ಲಿ ನಡೆದ ಬೆಳವಣಿಗೆಗಳ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ ರಾಜ್ಯಪಾಲರು ನಡೆದುಕೊಂಡಿರುವುದು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ ಎಂದು ಹೇಳಿದ್ದಾರೆ.
‘ರಾಷ್ಟ್ರಗೀತೆ ನುಡಿಸುವವರೆಗೂ ಕಾಯದೆ ಎದ್ದು ಹೊರಟ ರಾಜ್ಯಪಾಲರು ಶಿಷ್ಟಾಚಾರವನ್ನು ಬದಿಗೊತ್ತಿ ರಾಷ್ಟ್ರಗೀತೆಗೂ ಅವಮಾನಿಸಿದ್ದಾರೆ. ಈ ಮೂಲಕ ಬಿಜೆಪಿ ರಾಷ್ಟ್ರ ಗೀತೆಯ ವಿರೋಧಿ, ಸಂವಿಧಾನ ವಿರೋಧಿ, ಕನ್ನಡಿಗರ ವಿರೋಧಿ ಎನ್ನುವುದು ಜಗಜ್ಜಾಹೀರಾಗಿದೆ’ ಎಂದಿದ್ದಾರೆ.
‘ಕನ್ನಡಿಗರನ್ನು ಉದ್ದೇಶಿಸಿ ಪೂರ್ಣ ಭಾಷಣ ಮಾಡದಷ್ಟು ತೀವ್ರ ಅಸಹನೆಯನ್ನು ತೋರಿರುವ ರಾಜ್ಯಪಾಲರು ಬಿಜೆಪಿಯ ದರ್ಪ, ದ್ರಾಷ್ಟ್ಯದ ವಕ್ತಾರರಾಗಿ ನಿರೂಪಿಸಿದ್ದಾರೆ. ಅಸಡ್ಡೆಯಿಂದ ಕೂಡಿದ ನಾಲ್ಕು ಸಾಲಿನ ಮಾತು, ಸರ್ಕಾರದ ಭಾಷಣದ ತಿರಸ್ಕಾರವು ಸಂವಿಧಾನದ ಆಶಯಗಳ ಉಲ್ಲಂಘನೆ ಮಾತ್ರವಲ್ಲ, ಕನ್ನಡಿಗರಿಗೆ ಎಸಗಿದ ಘೋರ ಅವಮಾನ. ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ನೆಲಕ್ಕೆ ಹಾಕಿ ಹೊಸಕುತ್ತಿರುವ ಬಿಜೆಪಿಗೆ ಕನ್ನಡಿಗರು ಪಾಠ ಕಲಿಸುವುದು ನಿಶ್ಚಿತ’ ಎಂದು ಹೇಳಿದ್ದಾರೆ.
ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ,
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 22, 2026
ಸಾಂಸ್ಕೃತಿಕವಾಗಿ, ಆರ್ಥಿಕವಾಗಿ ಮತ್ತು ಆಡಳಿತಾತ್ಮಕವಾಗಿ ಕನ್ನಡಿಗರನ್ನು ಮತ್ತು ಕರ್ನಾಟಕವನ್ನು ಕಡೆಗಣಿಸಿ, ಶೋಷಿಸಿದ್ದ ಬಿಜೆಪಿ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ.
ರಾಷ್ಟ್ರಗೀತೆ ನುಡಿಸುವವರೆಗೂ ಕಾಯದೆ ಎದ್ದು ಹೊರಟ…







