Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕ್ವಾಂಟಮ್ ತಂತ್ರಜ್ಞಾನ, ಜಲ ನಿರ್ವಹಣೆ...

ಕ್ವಾಂಟಮ್ ತಂತ್ರಜ್ಞಾನ, ಜಲ ನಿರ್ವಹಣೆ ಕ್ಷೇತ್ರಗಳಲ್ಲಿ ಇಸ್ರೇಲ್‍ನೊಂದಿಗೆ ಸಂಶೋಧನಾ ಸಹಭಾಗಿತ್ವಕ್ಕೆ ಆಸಕ್ತಿ: ಡಾ.ಅಜಯ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ17 Nov 2026 9:44 PM IST
share
ಕ್ವಾಂಟಮ್ ತಂತ್ರಜ್ಞಾನ, ಜಲ ನಿರ್ವಹಣೆ ಕ್ಷೇತ್ರಗಳಲ್ಲಿ ಇಸ್ರೇಲ್‍ನೊಂದಿಗೆ ಸಂಶೋಧನಾ ಸಹಭಾಗಿತ್ವಕ್ಕೆ ಆಸಕ್ತಿ: ಡಾ.ಅಜಯ್ ಸಿಂಗ್

ಬೆಂಗಳೂರು : ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಸುಧಾರಿತ ಜಲ ನಿರ್ವಹಣೆ ಕ್ಷೇತ್ರಗಳಲ್ಲಿ ಇಸ್ರೇಲ್‍ನೊಂದಿಗೆ ಸಂಶೋಧನೆ ಹಾಗೂ ತಂತ್ರಜ್ಞಾನ ಸಹಭಾಗಿತ್ವವನ್ನು ಬಲಪಡಿಸಲು ಕರ್ನಾಟಕ ಆಸಕ್ತಿ ಹೊಂದಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯ್ ಸಿಂಗ್ ತಿಳಿಸಿದರು.

ಮಂಗಳವಾರ ನಗರದ ಬಿಐಇಸಿಯಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಟೆಕ್ ಸಮ್ಮಿಟ್-2026ರ ಅಂಗವಾಗಿ ಇಸ್ರೇಲ್‍ನ ಡೀಪ್‍ಟೆಕ್ ಕ್ಷೇತ್ರದ ಪ್ರತಿನಿಧಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಅವರು, ಉಭಯ ದೇಶಗಳ ನಡುವಿನ ಸಂಶೋಧನಾ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಕ್ವಾಂಟಮ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ಜಲ ನಿರ್ವಹಣೆಯಲ್ಲಿ ಜಂಟಿ ಸಂಶೋಧನೆ ಹಾಗೂ ತಂತ್ರಜ್ಞಾನ ಅಭಿವೃದ್ಧಿಗೆ ಹೆಚ್ಚಿನ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಕರ್ನಾಟಕ-ಇಸ್ರೇಲ್ ಕೈಗಾರಿಕಾ ಸಂಶೋಧನೆ ಮತ್ತು ಅಭಿವೃದ್ಧಿ ಸಹಕಾರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಸಾಧ್ಯತೆಗಳನ್ನು ಪರಿಶೀಲಿಸಲಾಗುವುದು ಎಂದು ಅಜಯ್ ಸಿಂಗ್ ತಿಳಿಸಿದರು.

ಕರ್ನಾಟಕದಲ್ಲಿ ವಿಶ್ವದರ್ಜೆಯ ಸಂಶೋಧನಾ ಸಂಸ್ಥೆಗಳು, ಪ್ರತಿಭಾವಂತ ವಿಜ್ಞಾನಿಗಳು ಮತ್ತು ಬಲಿಷ್ಠ ತಂತ್ರಜ್ಞಾನ ವ್ಯವಸ್ಥೆಯಿದೆ. ಇಸ್ರೇಲ್ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಂಶೋಧನೆಯನ್ನು ಪ್ರಾಯೋಗಿಕ ಬಳಕೆಗೆ ತರುವಲ್ಲಿ ವಿಶೇಷ ಸಾಧನೆ ಮಾಡಿದೆ. ಎರಡೂ ಕಡೆಯ ಸಾಮಥ್ರ್ಯಗಳನ್ನು ಒಗ್ಗೂಡಿಸುವ ಮೂಲಕ ಸಮಾಜದ ಸಮಸ್ಯೆಗಳಿಗೆ ಪರಿಣಾಮಕಾರಿ ತಂತ್ರಜ್ಞಾನ ಪರಿಹಾರಗಳನ್ನು ಕಂಡುಕೊಳ್ಳಬಹುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಪ್ರಸ್ತಾಪಿತ ಕ್ವಾಂಟಮ್ ಸಿಟಿ ಯೋಜನೆ ಹಾಗೂ ಪ್ರತ್ಯೇಕ ಕ್ವಾಂಟಮ್ ತಂತ್ರಜ್ಞಾನ ನೀತಿ ರೂಪಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್‍ನ ಕ್ವಾಂಟಮ್ ತಂತ್ರಜ್ಞಾನ ಕಂಪನಿಗಳು ಮತ್ತು ಸಂಶೋಧನಾ ಸಂಸ್ಥೆಗಳು ಕರ್ನಾಟಕದ ವೈಜ್ಞಾನಿಕ ಸಂಸ್ಥೆಗಳೊಂದಿಗೆ ಜಂಟಿ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಮುಂದಾಗಬೇಕು. ಜಲ ಸಂರಕ್ಷಣೆ, ಅಂತರ್ಜಲ ಮರುಪೂರಣ ಮತ್ತು ನೀರಾವರಿ ನಿರ್ವಹಣೆಯಲ್ಲಿಯೂ ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಅಜಯ್ ಸಿಂಗ್ ಅಭಿಪ್ರಾಯಪಟ್ಟರು.`

ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಯೋಜನಗಳು ಜನಸಾಮಾನ್ಯರಿಗೆ ತಲುಪಬೇಕು ಎಂಬುದು ನಮ್ಮ ಉದ್ದೇಶ. ವಿಶೇಷವಾಗಿ ಬರಪೀಡಿತ ಪ್ರದೇಶಗಳಲ್ಲಿ ನೀರಿನ ಸಂರಕ್ಷಣೆ, ಅಂತರ್ಜಲ ಮರುಪೂರಣ ಮತ್ತು ನೀರಾವರಿ ದಕ್ಷತೆಯನ್ನು ಹೆಚ್ಚಿಸಲು ಆಧುನಿಕ ತಂತ್ರಜ್ಞಾನ ನೆರವಾಗಬೇಕು. ಈ ನಿಟ್ಟಿನಲ್ಲಿ ಸ್ಪಷ್ಟ ಫಲಿತಾಂಶ ನೀಡುವ ಸಂಶೋಧನಾ ಸಹಭಾಗಿತ್ವಗಳಿಗೆ ಆದ್ಯತೆ ನೀಡಲು ನಾವು ಬಯಸುತ್ತೇವೆ ಎಂದು ಅವರು ಹೇಳಿದರು.

ಸಭೆಯಲ್ಲಿ ಇಸ್ರೇಲ್ ಇನ್ನೋವೇಶನ್ ಅಥಾರಿಟಿಯ ಅಧ್ಯಕ್ಷ ಅಲೋನ್ ಸ್ಟೋಪೆಲ್, ಉಪಾಧ್ಯಕ್ಷ ಹಾಗೂ ಅಂತರ್‍ರಾಷ್ಟ್ರೀಯ ಸಹಯೋಗ ವಿಭಾಗದ ಮುಖ್ಯಸ್ಥ ಶ್ಲೋಮಿ ಕೋಫ್‍ಮನ್ ಮತ್ತು ಭಾರತ-ಇಸ್ರೇಲ್ ಕೈಗಾರಿಕಾ ಸಂಶೋಧನೆ ಮತ್ತು ತಂತ್ರಜ್ಞಾನ ನಾವೀನ್ಯತಾ ನಿಧಿಯ ವ್ಯವಸ್ಥಾಪಕ ತಾಲ್ ಬೆನ್-ಅವ್ನರ್ ಭಾಗವಹಿಸಿದ್ದರು.

Tags

ResearchQuantumTechnologAjay Singh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X