Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ...

ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಪ್ರದಾನ: ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ2 Sept 2024 9:39 PM IST
share
ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಪ್ರದಾನ: ಈಶ್ವರ್ ಖಂಡ್ರೆ

ಬೆಂಗಳೂರು : ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕವನ್ನು ಸೆ.3ರಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅವರು, 2023-24ನೇ ಸಾಲಿನಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿತ್ತು. ಒಟ್ಟು 1,94,007 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಎಸೆಸೆಲ್ಸಿ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿದ ಅತಿ ಹೆಚ್ಚು ಅಂಕ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಮೂಲಕ ಪಾರದರ್ಶಕವಾಗಿ 267 ಅರ್ಹ ಅಭ್ಯರ್ಥಿಗಳು ಎಲ್ಲ ವೃತ್ತದಿಂದ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಮತ್ತು ಚಿಕ್ಕಮಗಳೂರು ವೃತ್ತದಲ್ಲಿ ಸ್ಥಳೀಯ ಮೂಲ ಆದಿವಾಸಿ ಜನಾಂಗದ ಅಭ್ಯರ್ಥಿಗಳಿಗೆ ಮೀಸಲಾತಿ ಇದ್ದು, ಈ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸದ ಕಾರಣ ಮತ್ತು ಇನ್ನಿತರ ತಾಂತ್ರಿಕ ಕಾರಣಗಳಿಂದ 43 ಹುದ್ದೆಗಳಿಗೆ ಸದ್ಯಕ್ಕೆ ನೇಮಕಾತಿ ಪತ್ರ ನೀಡಲಾಗುತ್ತಿಲ್ಲ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ: ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಕೃಷಿ, ಅರಣ್ಯ ನಿರ್ವಹಣೆ, ತರಬೇತಿ, ಸಂಶೋಧನೆ, ಕಾರ್ಯಯೋಜನೆ, ಜನರ ಪಾಲ್ಗೊಳ್ಳುವಿಕೆ, ಅಭಿವೃದ್ಧಿ ಕಾರ್ಯ, ಮಾನವ- ಪ್ರಾಣಿ ಸಂಘರ್ಷ ನಿಯಂತ್ರಣ, ನಾವೀನ್ಯಪೂರ್ಣ ಉಪಕ್ರಮ ಅಳವಡಿಕೆ ಇತ್ಯಾದಿ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ 49 ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X