Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ...

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ

16,114 ಚ.ಕಿ.ಮೀ. ಪರಿಸರ ಸೂಕ್ಷ್ಮಪ್ರದೇಶ ಮಿತಿ ಸೂಕ್ತ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ19 Sept 2024 6:49 PM IST
share
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ

ಬೆಂಗಳೂರು : ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ನೀಡಿದ್ದಾರೆ.

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿದ್ದು ಈ ಮಾಸಾಂತ್ಯದೊಳಗೆ ರಾಜ್ಯ ಸರಕಾರದ ನಿಲುವು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಡೆದ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಇಂದು ನಡೆದ ಸಭೆಯಲ್ಲಿ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಸಚಿವರ, ಶಾಸಕರ ಮತ್ತು ಸಂಸತ್ ಸದಸ್ಯರ ಅಭಿಪ್ರಾಯ ಪಡೆಯಲಾಗಿದೆ. ಆ ಎಲ್ಲ ಅಭಿಪ್ರಾಯವನ್ನು ನಾಳೆ ನಡೆಯಲಿರುವ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿ ಜೊತೆ ಸಮಾಲೋಚಿಸಿ, ಸಂಪುಟದ ಅನುಮೋದನೆ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಹಲವು ಜನಪ್ರತಿನಿಧಿಗಳು ಈಗಾಗಲೇ ರಾಜ್ಯದಲ್ಲಿ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಇದ್ದು, ಇನ್ನು ಹೆಚ್ಚಳ ಮಾಡಿದರೆ ಅರಣ್ಯದಂಚಿನ ಜನರ ಬದುಕೇ ದುಸ್ತರವಾಗುತ್ತದೆ. ಹೀಗಾಗಿ ಬಫರ್ ವಲಯವನ್ನು ಶೂನ್ಯಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಹಾಲಿ ಇರುವ 16,114 ಚ.ಕಿ.ಮೀ. ಮಿತಿಗೆ ನಾವು ಸಮ್ಮತಿಸಿದರೆ ಶೂನ್ಯ ಬಫರ್ ಆಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೆ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನೂ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.

ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದೆ. ಹೀಗಾಗಿ ನಾಳೆಯ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ವಿಶೇಷ ಪ್ಯಾಕೇಜ್ ಗೆ ಒತ್ತಾಯ: ಈಗಾಗಲೇ ಇರುವ 16,114 ಚ.ಕಿ.ಮೀ ಪ್ರದೇಶಕ್ಕೆ ಅಂಗೀಕಾರ ನೀಡಿದರೂ ಈ ಪ್ರದೇಶದಲ್ಲಿರುವ 1576 ಗ್ರಾಮಗಳ ಜನರ ಜೀವನೋಪಾಯಕ್ಕೆ ಅನಾನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಒತ್ತಾಯ ಮಾಡಬಹುದು ಎಂದು ತಾವು ಸಲಹೆ ನೀಡಿರುವುದಾಗಿ ಅವರು ತಿಳಿಸಿದರು.

ಪಶ್ಚಿಮ ಘಟ್ಟ ಕೇವಲ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಮಾತ್ರ ಸಂಬಂಧಿಸಿದ್ದಲ್ಲ. ಈ ಘಟ್ಟ ಪ್ರದೇಶ ಹಲವು ನದಿಗಳ ಉಗಮ ಸ್ಥಾನವಾಗಿದೆ. ಮಿಗಿಲಾಗಿ ಮಳೆಯ ಮಾರುತಗಳನ್ನು ತಡೆಯುವ ಕಾರಣ ದೇಶಾದ್ಯಂತ ವ್ಯಾಪಕ ಮಳೆಯಾಗುತ್ತದೆ. ಹೀಗಾಗಿ ಈ ಪಶ್ಚಿಮಘಟ್ಟ ಸಂರಕ್ಷಣೆಯ ಹೊಣೆ ಕೇಂದ್ರದ್ದೂ ಆಗಿದೆ. ಆದ ಕಾರಣ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಈಶ್ವರ್ ಖಂಡ್ರೆ ಹೇಳಿದರು.

ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟೀಕರಣ: ಒತ್ತುವರಿ ತೆರವಿನ ಬಗ್ಗೆ ತಾವು ನೀಡಿರುವ ಟಿಪ್ಪಣಿಗಳು ಸ್ಪಷ್ಟವಾಗಿವೆ. 2015ರ ನಂತರದ ಒತ್ತುವರಿ ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಜೊತೆಗೆ 2015ರ ಸರಕಾರದ ಆದೇಶ ಮತ್ತು ನಡವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಬಡ ರೈತರ ಒತ್ತುವರಿಯನ್ನು (ಪಟ್ಟಾಭೂಮಿ ಮತ್ತು ಒತ್ತುವರಿ ಸೇರಿ 3 ಎಕರೆ) ತೆರವು ಮಾಡಿಸುವುದಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದು ಅವರು ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾಸಕ ರಾಜೇಗೌಡರು 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವವರ ಜೀವನೋಪಾಯಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಲು ಮನವಿ ಮಾಡಿದ್ದಾರೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಇಂದು ನಡೆದ ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್, ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಶಾಸಕರಾದ ಆರಗ ಜ್ಞಾನೇಂದ್ರ, ನಯನಾ ಮೋಟಮ್ಮ, ರಾಜೇಗೌಡ, ಹರೀಶ್ ಪೂಂಜಾ, ಸಂಸದ ಶ್ರೇಯಸ್ ಪಟೇಲ್ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X