Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರೈಲ್ವೆ ಬ್ಯಾರಿಕೇಡ್, ಅರಣ್ಯವಾಸಿಗಳ...

ರೈಲ್ವೆ ಬ್ಯಾರಿಕೇಡ್, ಅರಣ್ಯವಾಸಿಗಳ ಸ್ಥಳಾಂತರಕ್ಕೆ ಕಾಂಪಾ ನಿಧಿಯಿಂದ ಹಣ ನೀಡಿ : ಕೇಂದ್ರಕ್ಕೆ ಈಶ್ವರ್ ಖಂಡ್ರೆ ಬೇಡಿಕೆ

ವಾರ್ತಾಭಾರತಿವಾರ್ತಾಭಾರತಿ4 April 2025 10:28 PM IST
share
ರೈಲ್ವೆ ಬ್ಯಾರಿಕೇಡ್, ಅರಣ್ಯವಾಸಿಗಳ ಸ್ಥಳಾಂತರಕ್ಕೆ ಕಾಂಪಾ ನಿಧಿಯಿಂದ ಹಣ ನೀಡಿ : ಕೇಂದ್ರಕ್ಕೆ ಈಶ್ವರ್ ಖಂಡ್ರೆ ಬೇಡಿಕೆ

ಹೊಸದಿಲ್ಲಿ : ಮಾನವ-ಆನೆ ಸಂಘರ್ಷ ತಡೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು, ಸ್ವಯಂ ಪ್ರೇರಿತವಾಗಿ ಮುಂದೆ ಬರುವ ಅರಣ್ಯವಾಸಿಗಳ ಸ್ಥಳಾಂತರಕ್ಕೆ ಕಾಂಪಾ ನಿಧಿಯಿಂದ 800 ಕೋಟಿ ರೂ. ಮಂಜೂರು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಕೇಂದ್ರ ಸರಕಾರಕ್ಕೆ ಬೇಡಿಕೆ ಸಲ್ಲಿಸಿದ್ದಾರೆ.

ಶುಕ್ರವಾರ ಹೊಸದಿಲ್ಲಿಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕಾಂಪಾ)ದಡಿ ರಾಜ್ಯಕ್ಕೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದು, ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು ಆನೆಗಳಿವೆ. ಇವುಗಳ ದಾಳಿಯಿಂದ ಸಾವು ನೋವು ಸಂಭವಿಸುತ್ತಿದೆ. ಹೀಗಾಗಿ ಕಾಡಿನಿಂದ ನಾಡಿಗೆ ಆನೆಗಳು ಬಾರದಂತೆ ನಿಯಂತ್ರಿಸಲು ಈಗಾಗಲೇ 393 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ ಎಂದು ಅವರು ಹೇಳಿದರು.

ಪ್ರಸಕ್ತ 200 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೂ 300 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಾಡಿದಲ್ಲಿ ಆನೆ ಹಾವಳಿ ನಿಯಂತ್ರಿಸಬಹುದಾಗಿದೆ. ಹೀಗಾಗಿ ಕಾಂಪಾ ನಿಧಿಯಲ್ಲಿರುವ ರಾಜ್ಯದ ಹಣದಲ್ಲಿ 500 ಕೋಟಿ ರೂ.ಗಳನ್ನು ಮಂಜೂರು ಮಾಡುವಂತೆ ಭೂಪೇಂದ್ರ ಯಾದವ್ ಅವರಿಗೆ ಬೇಡಿಕೆ ಸಲ್ಲಿಸಿ ಮನವರಿಕೆ ಮಾಡಿಕೊಡಲಾಗಿದ್ದು, ಅವರು ನಮ್ಮ ಮನವಿಯನ್ನು ಪರಿಗಣಿಸುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಕುದುರೆಮುಖ ಅರಣ್ಯವಾಸಿಗಳ ಸ್ಥಳಾಂತರಕ್ಕೆ 300 ಕೋಟಿ ರೂ.ಗೆ ಬೇಡಿಕೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ 2005 ರಿಂದ ಇಲ್ಲಿವರೆಗೆ 356 ಕುಟುಂಬಗಳು ಸ್ಥಳಾಂತರಗೊಂಡಿವೆ. ರಾಜ್ಯ ಸರಕಾರ ಇವರಿಗೆ ವಿಶೇಷ ಪ್ಯಾಕೇಜ್ ನೀಡಿ 142 ಕೋಟಿ ರೂ. ಪರಿಹಾರ ನೀಡಿದೆ. 688.57 ಎಕರೆ ಭೂಮಿ ಅರಣ್ಯ ಇಲಾಖೆಗೆ ಲಭಿಸಿದೆ ಎಂದು ಈಶ್ವರ್ ಖಂಡ್ರೆ ಮಾಹಿತಿ ನೀಡಿದರು.

ಆದರೆ, ಇನ್ನೂ 42 ಗ್ರಾಮಗಳು, 108 ಜನವಸತಿಗಳು, 1382 ಕುಟುಂಬಗಳಿದ್ದು ಇಲ್ಲಿ ಒಟ್ಟಾರೆ 5177 ಜನರು ವಾಸಿಸುತ್ತಿದ್ದಾರೆ. ಇವರಲ್ಲಿ ಹಲವರು ಸ್ವಯಂ ಪ್ರೇರಿತವಾಗಿ ಸ್ಥಳಾಂತರಕ್ಕೆ ಸಮ್ಮತಿಸಿದ್ದಾರೆ. 300 ಕುಟುಂಬಗಳನ್ನು ಸ್ಥಳಾಂತರಿಸಿದರೆ 597 ಎಕರೆ ಅರಣ್ಯ ಇಲಾಖೆಗೆ ಹೆಚ್ಚುವರಿಯಾಗಿ ಲಭಿಸುತ್ತಿದೆ ಎಂದು ಅವರು ಹೇಳಿದರು.

ಇದಕ್ಕೆ ಕಾಂಪಾದಿಂದ 300 ಕೋಟಿ ರೂ. ನೀಡಿದರೆ ಸ್ಥಳಾಂತರ ಕಾರ್ಯ ಸುಗಮವಾಗುತ್ತದೆ, ಮುಖ್ಯವಾಹಿನಿಗೆ ಅವರನ್ನು ತರಲು ನೆರವಾಗುತ್ತದೆ ಎಂಬ ವಿಷಯವನ್ನು ಭೂಪೇಂದ್ರಯಾದವ್ ಅವರಿಗೆ ತಿಳಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಕುದುರೆಮುಖಕ್ಕೆ ಭೇಟಿ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಎತ್ತಿನಹೊಳೆ ಯೋಜನೆ, ಕಳಸ ಬಂಡೂರಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ತ್ವರಿತವಾಗಿ ಅನುಮೋದನೆ ನೀಡುವಂತೆ ಮನವಿ ಮಾಡಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X