Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ...

ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ ಈಶ್ವರ್ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 May 2025 6:53 PM IST
share
ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು : ಸರಕಾರಿ ಭೂಮಿ, ಅರಣ್ಯ, ರಸ್ತೆ ಬದಿಯಲ್ಲಿನ ಮರಗಳನ್ನು ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮತ್ತು ಹೆಚ್ಚಿನ ದಂಡ ಹಾಕಲು ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ನಗರದ ಅರಣ್ಯ ಭವನದಲ್ಲಿ ಕೆ.ಡಿ.ಪಿ ಮತ್ತು ಎಂ.ಎಂ.ಆರ್. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಸುಪ್ರೀಂಕೋರ್ಟ್ ಸಹ ಹೆಚ್ಚಿನ ಮರಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪ್ರಸಕ್ತ ಸನ್ನಿವೇಶದಲ್ಲಿ ವೃಕ್ಷ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಅಭಿವೃದ್ಧಿಯ ಹೆಸರಲ್ಲಿ ನೂರಾರು ಮರಗಳ ಕಡಿತಲೆಗೆ ಅನುಮತಿ ನೀಡುತ್ತಿರುವ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಮರ ಕಡಿಯಲು ಅನುಮತಿ ನೀಡಬಾರದು ಎಂದು ಈಶ್ವರ್ ಖಂಡ್ರೆ ಸೂಚನೆ ನೀಡಿದರು.

ಅರಣ್ಯ ಒತ್ತುವರಿ ಮಾಹಿತಿಗೆ ಸೂಚನೆ: 2015ರ ಪೂರ್ವದಲ್ಲಿ ಪಟ್ಟಾ ಜಮೀನು ಮತ್ತು ಒತ್ತುವರಿ ಸೇರಿ 3 ಎಕರೆಗಿಂತ ಕಡಿಮೆ ಇರುವ ಬಡ ಜನರಿಗೆ ಪುನರ್ವಸತಿ ಕಲ್ಪಿಸುವವರೆಗೆ ತೊಂದರೆ ನೀಡದೆ, ದೊಡ್ಡ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಲು ನಿರ್ದೇಶನ ನೀಡಿದ ಅವರು, ಅರಣ್ಯ ಭೂಮಿಯ ಇಂಡೀಕರಣಕ್ಕೆ ಪತ್ರ ಬರೆಯುವ ಬದಲು ಎ.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿದರು.

2015ರ ನಂತರದ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ ಇರಬೇಕು, ಯಾರೇ 2015ರ ನಂತರ ಅರಣ್ಯ ಒತ್ತುವರಿ ಮಾಡಿದ್ದರೆ, ಮುಲಾಜಿಲ್ಲದೆ ತೆರವು ಮಾಡಿ ಕ್ರಮ ಜರುಗಿಸಬೇಕು, ಕಳೆದ 2 ವರ್ಷದಲ್ಲಿ ಆಗಿರುವ ಒತ್ತುವರಿ, ಮಾಡಿರುವ ತೆರವು ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಈಶ್ವರ್ ಖಂಡ್ರೆ ಸೂಚಿಸಿದರು.

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ: ಸಾರ್ವಜನಿಕರು ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಕಚೇರಿಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸಿ ಎಂದು ಅವರು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ನಾಗರಹೊಳೆ ಎ ವೈಲ್ಡ್ ಪ್ಯಾರಡೈಸ್ ಮತ್ತು ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹೊರತಂದಿರುವ ವನ್ಯಜೀವಿ ವಿಧಿವಿಜ್ಞಾನ ಸಾಕ್ಷ್ಯ ಸಂಗ್ರಹಣಾ ಮಾರ್ಗದರ್ಶಿ ಎಂಬ ಎರಡು ಪುಸ್ತಕಗಳನ್ನು ಈಶ್ವರ ಖಂಡ್ರೆ ಬಿಡುಗಡೆ ಮಾಡಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಸುಭಾಷ್ ಮಾಲ್ಕಡೆ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳವರೆಗಿನ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X