Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆನೆಪಥ, ಆವಾಸಸ್ಥಾನ ರಕ್ಷಣೆಗೆ...

ಆನೆಪಥ, ಆವಾಸಸ್ಥಾನ ರಕ್ಷಣೆಗೆ ಐಐಎಸ್ಸಿ-ಅರಣ್ಯ ಇಲಾಖೆ ಐತಿಹಾಸಿಕ ಒಡಂಬಡಿಕೆ : ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ15 July 2025 8:53 PM IST
share
ಆನೆಪಥ, ಆವಾಸಸ್ಥಾನ ರಕ್ಷಣೆಗೆ ಐಐಎಸ್ಸಿ-ಅರಣ್ಯ ಇಲಾಖೆ ಐತಿಹಾಸಿಕ ಒಡಂಬಡಿಕೆ : ಈಶ್ವರ್ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್ಸಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಐಐಎಸ್ಸಿಯ ಪ್ರೊ.ರಮನ್ ಸುಕುಮಾರ್ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ ಸಹಿ ಹಾಕಿ ಒಡಂಬಡಿಕೆ ವಿನಿಮಯ ಮಾಡಿಕೊಂಡ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮಾತನಾಡಿದ ಅವರು, ಹಾಸನ, ಕೊಡಗು ಭಾಗದಲ್ಲಿ ಹೆಚ್ಚಾಗಿ ಆನೆ-ಮಾನವ ಸಂಘರ್ಷವಿದ್ದು, ಜೀವಹಾನಿ, ಬೆಳೆ ಹಾನಿ ಸಂಭವಿಸುತ್ತಿದೆ ಇದರ ನಿಯಂತ್ರಣಕ್ಕೆ ಎಲ್ಲ ಸಾಧ್ಯ ಕ್ರಮಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದರು.

ಮಾನವ-ಆನೆ ಸಂಘರ್ಷ ಇತರ ಪ್ರದೇಶಕ್ಕೂ ವಿಸ್ತರಿಸುತ್ತಿದ್ದು, ಪರಿಸರ ಸಂಶೋಧನೆ ಮತ್ತು ಕ್ಷೇತ್ರ ಅನುಷ್ಠಾನವನ್ನು ಸಮನ್ವಯಗೊಳಿಸುವ ಮೂಲಕ, ಆನೆಪಥ, ಆವಾಸಸ್ಥಾನಗಳ ಸಂರಕ್ಷಣೆಗೆ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆಗಾಗಿ ಐದು ವರ್ಷಗಳ ಸಹಯೋಗದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಈಶ್ವರ್ ಖಂಡ್ರೆ ವಿವರಿಸಿದರು.

ಸ್ಯಾಟಲೈಟ್ ಟೆಲಿಮೆಟ್ರಿ, ಕ್ಯಾಮೆರಾ ಟ್ರಾಪ್ ಗಳು ಮತ್ತು ಜಿ.ಐ.ಎಸ್. ಮಾದರಿಗಳನ್ನು ಬಳಸಿಕೊಂಡು ಆನೆ ಕಾರಿಡಾರ್ ಗಳನ್ನು ಗುರುತಿಸುವುದು ಮತ್ತು ಆನೆಗಳ ಸುಗಮ ಸಂಚಾರಕ್ಕೆ ಎದುರಾಗಿರುವ ಅಡೆತಡೆಗಳನ್ನು ಗುರುತಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಆನೆ ಲದ್ದಿಯಲ್ಲಿರುವ ಹಾರ್ಮೋನ್ ಗಳ ಪರೀಕ್ಷೆ ನಡೆಸುವ ಮೂಲಕ ಆನೆಗಳ ದೇಹದ ಸ್ಥಿತಿ ಮತ್ತು ಒತ್ತಡ ಸೂಚಕಗಳನ್ನು ಅಂದಾಜು ಮಾಡಲಾಗುತ್ತದೆ. ಅದೇ ರೀತಿ ಬೆಳೆ ನಾಶದ ಮಾದರಿಗಳ ಅಧ್ಯಯನ, ಸಂಘರ್ಷದ ಹಾದಿ ತುಳಿದ ಆನೆಗಳ ಅಧ್ಯಯನ-ವಿಶ್ಲೇಷಣೆ ಮಾಡಿ ರೈತರಿಗೆ ಅರಿವು ಮೂಡಿಸುವುದೂ ಈ ಯೋಜನೆಯ ಭಾಗವಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಆನೆಗಳು ನಾಡಿನತ್ತ ಬಂದಾಗ ಮುನ್ನೆಚ್ಚರಿಕೆಯ ಗಂಟೆ ಮೊಳಗಿಸುವ ವ್ಯವಸ್ಥೆ ರೂಪಿಸುವ ಹಾಗೂ ಸ್ವಯಂ ಚಾಲಿತ ಧ್ವನಿಯಂತ್ರಗಳ ಮೂಲಕ ಆನೆಗಳನ್ನು ಹಿಮ್ಮೆಟ್ಟಿಸುವ ಬಗ್ಗೆಯೂ ಅಧ್ಯಯನ ನಡೆಸಲಾಗುವುದು. ಅರಣ್ಯ ಇಲಾಖೆ ಮತ್ತು ಭಾರತೀಯ ವಿಜ್ಞಾನ ಮಂದಿರದ ತಜ್ಞರು, ಅಧ್ಯಯನಿಗಳು ಆನೆಗಳ ವರ್ತನೆ, ಸ್ವಭಾವದ ದತ್ತಾಂಶ ಕ್ರೋಢೀಕರಿಸಿ ಆನೆಪಥ (ಕಾರಿಡಾರ್) ಹಾಗೂ ಮುಂದಿನ 10 ವರ್ಷಗಳಲ್ಲಿ ಎದುರಾಗಬಹುದಾದ ಭವಿಷ್ಯದ ಸಂಘರ್ಷ ಪ್ರದೇಶ ಗುರುತಿಸಲೂ ಈ ಅಧ್ಯಯನ ನೆರವಾಗಲಿದೆ ಎಂದು ಅವರು ಹೇಳಿದರು.

ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಅಧ್ಯಯನ: ಮೈಸೂರು ಆನೆ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಪ್ರಮುಖ ಅರಣ್ಯ ವಿಭಾಗಗಳು ಹಾಗೂ ಸಂರಕ್ಷಿತ ಪ್ರದೇಶಗಳು ಅಂದರೆ ಹುಲಿ ಸಂರಕ್ಷಿತ ಪ್ರದೇಶಗಳು, ರಾಷ್ಟ್ರೀಯ ಉದ್ಯಾನವನಗಳು, ವನ್ಯಜೀವಿ ಅಭಯಾರಣ್ಯಗಳು ಹಾಗೂ ಮಾನವ ವಾಸವಿರುವ ಕೃಷಿ ಪ್ರದೇಶಗಳಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಸಂಶೋಧನಾ ಚಟುವಟಿಕೆಗಳನ್ನು ಭಾರತೀಯ ವಿಜ್ಞಾನ ಮಂದಿರದ (ಐಐಎಸ್ಸಿ) ಪರಿಸರ ಶಾಸ್ತ್ರ ಕೇಂದ್ರ ಹಾಗೂ ಏಷಿಯನ್ ನೇಚರ್ ಕನ್ಸರ್ವೇಷನ್ ಫೌಂಡೇಶನ್, ಫೌಂಡೇಶನ್ ಫಾರ್ ಇಕಲಾಜಿಕಲ್ ರಿಸರ್ಚ್, ಅಡ್ವಕಸಿ ಅಂಡ್ ಲರ್ನಿಂಗ್‌, ನ್ಯಾಶನಲ್ ಇನ್‍ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಸಹಯೋಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.

ಸ್ಥಳಾಂತರಗೊಂಡ ಆನೆಗಳಿಗಾಗಿ ಮೃದು ಬಿಡುಗಡೆ ಶಿಷ್ಟಾ ಚಾರ, ಝ್ಯಾಪ್ ಕಾಲರ್ ಗಳು, ಬಜರ್ ಗಳು ಮತ್ತು ಸಮುದಾಯ ಬೆಂಬಲಿತ ಬೇಲಿಗಳಂತಹ ನವೀನ ಉಪಕರಣಗಳ ಅಭಿವೃದ್ಧಿಗೂ ಈ ಯೋಜನೆ ಸಹಕಾರಿಯಾಗಲಿದೆ ಎಂದು ಈಶ್ವರ್ ಖಂಡ್ರೆ ಮಾಹಿತಿ ನೀಡಿದರು.

ಪ್ರೊ.ರಮನ್ ಸುಕುಮಾರ್ ಮಾತನಾಡಿ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು, ನಾವು ಕಾರಣಗಳನ್ನು ತಿಳಿಯುವುದು ಇಂದಿನ ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ಈ ಒಡಂಬಡಿಕೆ ಮಹತ್ವಪೂರ್ಣವಾದುದಾಗಿದೆ. ಈ ಅಧ್ಯಯನದಿಂದ ಅಥವಾ ಯೋಜನೆಯ ಅನುಷ್ಠಾ ನದಿಂದ ಸಂಪೂರ್ಣವಾಗಿ ಮಾನವ-ಆನೆ ಸಂಘರ್ಷ ನಿರ್ಮೂಲನೆ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಪರಿಣಾಮಕಾರಿಯಾಗಿ ಸಂಘರ್ಷ ತಗ್ಗಿಸಬಹುದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ಮತ್ತಿತರರು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X