Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಂಪನ್ಮೂಲ ಸಂರಕ್ಷಣೆಗೆ ಪುನರ್ ಬಳಕೆ, ಮರು...

ಸಂಪನ್ಮೂಲ ಸಂರಕ್ಷಣೆಗೆ ಪುನರ್ ಬಳಕೆ, ಮರು ಬಳಕೆಗೆ ಒತ್ತು ಅಗತ್ಯ : ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ18 Nov 2025 1:23 PM IST
share
ಸಂಪನ್ಮೂಲ ಸಂರಕ್ಷಣೆಗೆ ಪುನರ್ ಬಳಕೆ, ಮರು ಬಳಕೆಗೆ ಒತ್ತು ಅಗತ್ಯ : ಈಶ್ವರ್‌ ಖಂಡ್ರೆ

ಬೆಂಗಳೂರು : ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ಹೇಳಿದ್ದಾರೆ.

ನಗರದ ಖಾಸಗಿ ಹೊಟೇಲ್ ನಲ್ಲಿಂದು ನಡೆದ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಮತ್ತು "ಸಂಪನ್ಮೂಲಗಳ ಸುದೀರ್ಘ ಬಳಕೆಯ ಆರ್ಥಿಕತೆ ಮತ್ತು ಸುಸ್ಥಿರತೆಯ ಸಮ್ಮೇಳನ" ಉದ್ಘಾಟಿಸಿ ಅವರು ಸಂಪನ್ಮೂಲದ ಹಿತ-ಮಿತ ಬಳಕೆಯ ಅಗತ್ಯ ಪ್ರತಿಪಾದಿಸಿದರು.

ಜೀವನವೂ ಇರಬೇಕು, ಜೀವನೋಪಾಯವೂ ಇರಬೇಕು, ಪ್ರಕೃತಿಯೂ ಉಳಿಯಬೇಕು, ಪ್ರಗತಿಯೂ ಆಗಬೇಕು ಎಂಬುದು ನಮ್ಮ ಸರಕಾರದ ನಿಲುವಾಗಿದ್ದು, ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

1987 ರಲ್ಲಿ, ವಿಶ್ವಸಂಸ್ಥೆಯ ಬ್ರಂಡ್ಲ್ಯಾಂಡ್ ಆಯೋಗ "ಭವಿಷ್ಯದ ಪೀಳಿಗೆಯ ಸ್ವಂತ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯದೊಂದಿಗೆ ರಾಜಿ ಮಾಡಿಕೊಳ್ಳದೆ ಇಂದಿನ ಪೀಳಿಗೆಯ ಅಗತ್ಯಗಳನ್ನು ಪೂರೈಸುವುದು". 'ಸುಸ್ಥಿರತೆ' ಎಂದು ವ್ಯಾಖ್ಯಾನಿಸಿದೆ. ನಾವು ಉತ್ತಮ ರೂಢಿಗಳನ್ನು ಅಳವಡಿಸಿಕೊಂಡು ಪ್ರಗತಿಯ ಪಥದಲ್ಲಿ ಸಾಗುವುದರ ಜೊತೆಗೆ ಪ್ರಕೃತಿ ಪರಿಸರ ಉಳಿಸಬೇಕಿದೆ ಎಂದರು.

ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳನ್ನು ಜಗತ್ತು ಎದುರಿಸುತ್ತಿದೆ. ಈ ಕಾಲಘಟ್ಟದಲ್ಲಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಪರಿಸರ ಸ್ನೇಹಿ ರೂಢಿಗಳ ಉತ್ತೇಜನ, ಆಧುನಿಕ ತಂತ್ರಜ್ಞಾನದ ಬಳಕೆ, ನಾವೀನ್ಯತೆಗೆ ಒತ್ತು ನೀಡಿ ಒಟ್ಟಾರೆ ಸುಸ್ಥಿರತೆ ಮಾದರಿಯ ಪರಿಣಾಮಕಾರಿ ಅನುಷ್ಠಾನ ಮಾಡುವ ಮೂಲಕ ಸುಸ್ಥಿರ ಅಭಿವೃದ್ಧಿಯತ್ತ ಸಾಗಬೇಕು ಎಂದು ಹೇಳಿದರು.

ಮರುಬಳಕೆ, ದುರಸ್ತಿ, ಪುನರ್ ಬಳಕೆ ಮಾಡುವ ಮೂಲಕ ಆರ್ಥಿಕವಾಗಿ ಕಾರ್ಯಸಾಧ್ಯವಾದ ರೀತಿಯಲ್ಲಿ ಕಾರ್ಯರೂಪಕ್ಕೆ ತರಬೇಕಿದೆ. ನಮ್ಮ ಭೂಗ್ರಹ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕಿದೆ ಎಂದು ಈಶ್ವರ್‌ ಖಂಡ್ರೆ ಹೇಳಿದರು.

ಮಂಡಳಿಯ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ, ಮಂಡಳಿ ಸದಸ್ಯ ಶರಣಕುಮಾರ ಮೋದಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಮತ್ತಿತರರು ಪಾಲ್ಗೊಂಡಿದ್ದರು.

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X