Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಾಮರಾಜನಗರ; 5 ಹುಲಿಗಳ ಸೆರೆಗೆ ಬೋನು,...

ಚಾಮರಾಜನಗರ; 5 ಹುಲಿಗಳ ಸೆರೆಗೆ ಬೋನು, ಅರವಳಿಕೆ ಕಾರ್ಯಾಚರಣೆಗೆ ಈಶ್ವರ್‌ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Dec 2025 11:09 PM IST
share
ಚಾಮರಾಜನಗರ; 5 ಹುಲಿಗಳ ಸೆರೆಗೆ ಬೋನು, ಅರವಳಿಕೆ ಕಾರ್ಯಾಚರಣೆಗೆ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು : ಚಾಮರಾಜನಗರದ ನಂಜೆದೇವಪುರದಲ್ಲಿ ಕಾಣಿಸಿಕೊಂಡಿರುವ 5 ಹುಲಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಮೊದಲಿಗೆ ಬೋನುಗಳನ್ನು ಅಳವಡಿಸಲು ಮತ್ತು ಅಗತ್ಯ ಬಿದ್ದರೆ ಅರವಳಿಕೆ ನೀಡಿ ಸೆರೆ ಹಿಡಿಯಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಹುಲಿಗಳು ಖಾಸಗಿ ಜಮೀನಿನಲ್ಲಿ ಕಾಣಿಸಿಕೊಂಡಿರುವ ಕಾರಣ ಜನರು ಭಯಭೀತರಾಗಿದ್ದು, ಅಮೂಲ್ಯವಾದ ಜೀವಹಾನಿ ಆಗದ ರೀತಿಯಲ್ಲಿ ಮತ್ತು ವನ್ಯಜೀವಿಗಳಿಗೂ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ಹುಲಿಗಳ ಚಲನವಲನದ ಮೇಲೆ ಸತತ ನಿಗಾ ಇಡುವುದು ಅತ್ಯಗತ್ಯವಾಗಿದ್ದು, ಡ್ರೋನ್ ಕ್ಯಾಮರಾಗಳು, ಥರ್ಮಲ್ ಕ್ಯಾಮರಾಗಳನ್ನು ಬಳಸಿ ಹುಲಿಗಳು ಎಲ್ಲಿವೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದು ಗ್ರಾಮಸ್ಥರಿಗೆ ಕೂಡಲೆ ಮಾಹಿತಿ ನೀಡಬೇಕು ಮತ್ತು ಅಲ್ಲಿಗೆ ಅರಣ್ಯ ಇಲಾಖೆಯ ತಂಡಗಳನ್ನು ಕಳುಹಿಸಿ ಯಾವುದೆ ಅನಾಹುತ ಆಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

5 ಹುಲಿಗಳ ಕಾರ್ಯಾಚರಣೆ ಸುಲಭದ ಕಾಯಕವಲ್ಲ ಎಂಬುದು ತಮಗೂ ಅರಿವಿದೆ. ಹುಲಿಗಳನ್ನು ಹಿಡಿಯುವಾಗ ಹುಲಿಗಳು ಕಾರ್ಯಾಚರಣೆ ತಂಡದ ಮೇಲೆ ದಾಳಿ ಮಾಡದಂತೆ ಮತ್ತು ಬಡಗಲಪುರದಲ್ಲಿ ಹುಲಿ ರಕ್ಷಣೆ ಕಾರ್ಯಾಚರಣೆ ವೇಳೆ ವ್ಯಕ್ತಿಯ ಮೇಲೆ ದಾಳಿ ಆದಂತಹ ಪ್ರಕರಣಗಳು ಮರುಕಳಿಸದಂತೆ ಹಿರಿಯ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಅವರು ಸೂಚಿಸಿದರು.

ಹೆಚ್ಚುವರಿ ಆನೆ, ಪಶುವೈದ್ಯರ ನಿಯೋಜನೆಗೂ ಸೂಚನೆ: ಹುಲಿಗಳ ರಕ್ಷಣೆ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲ ಸಲಕರಣೆ, ಹೆಚ್ಚುವರಿ ಪಶುವೈದ್ಯರು, ಶಾರ್ಪ್ ಶೂಟರ್ ಗಳನ್ನು ನಿಯೋಜನೆ ಮಾಡುವಂತೆ ಹಾಗೂ ಹೆಚ್ಚುವರಿಯಾಗಿ ಆನೆಗಳನ್ನು ತಕ್ಷಣವೇ ತರಿಸಿಕೊಳ್ಳುವಂತೆಯೂ ಈಶ್ವರ್ ಖಂಡ್ರೆ ಸ್ಪಷ್ಟವಾಗಿ ತಿಳಿಸಿದರು.

ಜನರ ಜೀವ ಪರಮೋಚ್ಚ: ಜನರ ಜೀವದ ಸುರಕ್ಷತೆ ಅತ್ಯಂತ ಪರಮೋಚ್ಚವಾದದ್ದು, ಅದೇ ವೇಳೆ ವನ್ಯಜೀವಿಗಳ ರಕ್ಷಣೆಯೂ ಅಷ್ಟೇ ಮುಖ್ಯ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಾಚರಣೆ ನಡೆಸಬೇಕು, ಸಿಬ್ಬಂದಿಯ ಸುರಕ್ಷತೆಗೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಜೊತೆಗೆ ಜನರು ಯಾರೂ ಕಾರ್ಯಾಚರಣೆ ಸ್ಥಳಕ್ಕೆ ಬಾರದಂತೆ ಸೆಕ್ಷನ್ 144 ಅನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಅವರು ಸೂಚಿಸಿದರು.

ಇ-ಗಸ್ತು ಹೆಚ್ಚಿಸಬೇಕು: ಎಲ್ಲ ಅರಣ್ಯ ಗಸ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಮೊಬೈಲ್ ನಲ್ಲಿ ಇ- ಆ್ಯಪ್ ಅಳವಡಿಸಿ, ಗಸ್ತಿನ ಮೇಲೆ ಕೇಂದ್ರ ಕಚೇರಿಯಿಂದ ನಿಗಾ ಇಡಬೇಕು. ಗಸ್ತಿನಲ್ಲಿ ಯಾವುದೇ ಲೋಪ ಆಗದಂತೆ ಪೂರ್ಣ ಪ್ರಮಾಣದಲ್ಲಿ ಎಚ್ಚರಿಕೆ ವಹಿಸಬೇಕು ಹಾಗೂ ಕಮಾಂಡ್ ಕೇಂದ್ರಗಳನ್ನು ವಿಳಂಬವಿಲ್ಲದೆ ಎಲ್ಲೆಡೆ ಕಾರ್ಯಾರಂಭ ಮಾಡಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಅವರು ತಿಳಿಸಿದರು.

ಈಗ ನಾವು ಕೈಗೊಳ್ಳುತ್ತಿರುವುದೆಲ್ಲವೂ ತಾತ್ಕಾಲಿಕ ಕ್ರಮಗಳಾಗಿದ್ದು, ವನ್ಯಜೀವಿಗಳು ಕಾಡಿನಿಂದ ನಾಡಿನತ್ತ ಬಾರದಂತೆ ಶಾಶ್ವತ ಪರಿಹಾರ ಏನು ಎಂಬ ಬಗ್ಗೆ ಅಧಿಕಾರಿಗಳು ತಜ್ಞರೊಂದಿಗೆ ಚರ್ಚಿಸಿ ರೂಪುರೇಶೆ ತಯಾರಿಸಿ ವರದಿ ಸಲ್ಲಿಸಲು ಈಶ್ವರ್ ಖಂಡ್ರೆ ಹೇಳಿದರು.

ತುರುವೇಕೆರೆಯಲ್ಲಿ ಮಹಿಳೆಯ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆ, ಮಹಿಳೆಯ ದೇಹದ ಮಾಂಸ ಭಕ್ಷಣೆ ಮಾಡಿರುವ ಕಾರಣ ಅದನ್ನು ಸೆರೆ ಹಿಡಿದು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಹಿರಿಯ ಅಧಿಕಾರಿಗಳಾದ ಮನೋರ್ ರಾಜನ್, ಬಿಸ್ವಜಿತ್ ಮಿಶ್ರಾ ಮತ್ತು ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X