Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗುಳೆ ತಡೆಯಲು ಗ್ರಾಮೀಣ ಜನತೆಗೆ ಉದ್ಯೋಗ...

ಗುಳೆ ತಡೆಯಲು ಗ್ರಾಮೀಣ ಜನತೆಗೆ ಉದ್ಯೋಗ ನೀಡಲು ಕ್ರಮ ವಹಿಸಿ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ31 July 2026 9:36 PM IST
share
ಗುಳೆ ತಡೆಯಲು ಗ್ರಾಮೀಣ ಜನತೆಗೆ ಉದ್ಯೋಗ ನೀಡಲು ಕ್ರಮ ವಹಿಸಿ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಮಳೆ ಕೊರತೆಯಿಂದ ಯಾವುದೇ ಗ್ರಾಮೀಣ ಜನತೆ ಗುಳೆ ಹೋಗದಂತೆ ತಡೆಯಲು, ಇರುವ ಸ್ಥಳದಲ್ಲೆ ‘ವಿಬಿ ಜಿ ರಾಮ್ ಜಿ’ಯಡಿ ಉದ್ಯೋಗ ನೀಡಲು ಕ್ರಮ ವಹಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಮುಖ್ಯ ಕಾರ್ಯದರ್ಶಿ, ಇಲಾಖೆಯ ಕಾರ್ಯದರ್ಶಿ ಮತ್ತು ಎಲ್ಲ ಜಿಲ್ಲೆಗಳ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಇಓ)ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಸಭೆ ನಡೆಸಿದರು.

ಜು.1ರಿಂದ ಮಾ.31ರವರೆಗೆ 9 ತಿಂಗಳ ಅವಧಿಗೆ ಕೇಂದ್ರ ಸರಕಾರ 5,709 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಿದೆ. ರಾಜ್ಯ ಸರಕಾರ 3806 ಕೋಟಿ ರೂ. ಭರಿಸುತ್ತಿದೆ. ಅಂದರೆ ಒಟ್ಟು 9,515 ಕೋಟಿ ರೂ. ನಮಗೆ 9 ತಿಂಗಳಿಗೆ ಲಭ್ಯವಿದೆ. ಈ ಅವಧಿಯಲ್ಲಿ ವಿಬಿಜಿ ರಾಮ್ ಜಿ ಅಡಿ ಪ್ರತಿ ತಿಂಗಳೂ 5 ಲಕ್ಷ ಜನರಿಗೆ ಉದ್ಯೋಗ ನೀಡಲು ಅವಕಾಶವಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಆದರೆ, ಜುಲೈ ತಿಂಗಳಲ್ಲಿ ಪ್ರಗತಿ ಆಶಾದಾಯಕವಾಗಿಲ್ಲ. ಆಗಸ್ಟ್ ನಿಂದ ಸಮರೋಪಾದಿಯಲ್ಲಿ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೊಂಡು, ಶಾಶ್ವತ ಆಸ್ತಿಯನ್ನು ಸೃಷ್ಟಿಸಬೇಕು, ಗ್ರಾಮೀಣ ಭೂ ರಹಿತ ಕೂಲಿ ಕಾರ್ಮಿಕರಿಗೆ, ಬಡವರಿಗೆ ಉದ್ಯೋಗ ನೀಡಿ ಗುಳೆ ತಡೆಯಬೇಕು ಎಂದು ಈಶ್ವರ್ ಖಂಡ್ರೆ ನಿರ್ದೇಶನ ನೀಡಿದರು.

ಉದ್ಯೋಗ ಕೇಳಿದರೂ ಪಂಚಾಯತಿಗಳಲ್ಲಿ ಕೆಲಸ ಕೊಡುತ್ತಿಲ್ಲ ಎಂಬ ಆರೋಪ ಬಾರದಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ರಮ ವಹಿಸಬೇಕು, ಕೆಲಸ ಮಾಡದೆ ನಕಲಿ ಬಿಲ್ ನೀಡಿ ಹಣ ಪಡೆದರೆ, ಕಳಪೆ ಕಾಮಗಾರಿ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಬೇಕು, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಅವರು ಸೂಚಿಸಿದರು.

ಶಿಥಿಲವಾಗಿರುವ ಶಾಲಾ ಕಟ್ಟಡಗಳ ದುರಸ್ತಿಗೆ, ಹೊಸ ಕೊಠಡಿಗಳು ಹಾಗೂ ಆವರಣ ಗೋಡೆ ನಿರ್ಮಾಣಕ್ಕೆ ಅವಕಾಶವಿದ್ದು, ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿ ಕಾಮಗಾರಿ ಕೈಗೊಳ್ಳಬೇಕು. ಉದ್ಯೋಗದ ಕಾರ್ಡ್ ರದ್ದಾಗಿರುವ ಅರ್ಹರಿಗೆ ಉದ್ಯೋಗದ ಕಾರ್ಡ್ ನೀಡಲು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಚೇತನರಿಗೆ, ಮಹಿಳಾ ನೇತೃತ್ವದಲ್ಲಿ ಮನೆ ನಿರ್ವಹಣೆ ಮಾಡುತ್ತಿರುವವರಿಗೆ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಬಡವರಿಗೆ ಆದ್ಯತೆಯ ಮೇಲೆ ಉದ್ಯೋಗ ನೀಡಬೇಕು ಎಂದು ಅವರು ಹೇಳಿದರು.

ಉದ್ಯೋಗ ನೀಡಿಕೆ ಮತ್ತು ಆಸ್ತಿ ಸೃಜನೆಯಲ್ಲಿ ಹಿಂದೆ ಬಿದ್ದಿರುವ, ವಿವಿಧ ಜಿಲ್ಲೆಗಳ ಸಿಇಓಗಳಿಗೆ ಎಚ್ಚರಿಕೆ ನೀಡಿ, ಕೂಡಲೇ ಗ್ರಾಮ ಸಭೆ ನಡೆಸಲು, ಕಾಮಗಾರಿಗೆ ಅನುಮೋದನೆ ನೀಡಲು ತುರ್ತು ಕ್ರಮ ವಹಿಸಿ, ಹೆಚ್ಚು ಶ್ರಮವಹಿಸಿ ಫಲಿತಾಂಶ ಸಕಾರಾತ್ಮಕವಾಗಿರಬೇಕು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ರಾಜ್ಯದಲ್ಲಿ ಭೂಸ್ವಾಧೀನ ಆಗಿರುವ ಸಾವಿರಾರು ಎಕರೆ ಭೂಮಿ ಉಪಯೋಗಕ್ಕೆ ಬಾರದೆ ಹಾಗೇ ಇದ್ದು, ಈ ಜಮೀನಿನಲ್ಲಿ ಸಮುದಾಯ ಕಾಮಗಾರಿಯಡಿಯಲ್ಲಿ ತಾತ್ಕಾಲಿಕವಾಗಿ ಹಸಿ ಮೇವು ಬೆಳೆಯಲು ಕ್ರಮ ವಹಿಸಿದರೆ, ಕೊಳವೆ ಬಾವಿ ಮರು ಪೂರಣಕ್ಕೆ ಕ್ರಮ ವಹಿಸಿದರೆ ಬರ ನಿರ್ವಹಣೆಗೆ ನೆರವಾಗುತ್ತದೆ, ಜಾನುವಾರುಗಳಿಗೆ ಮೇವು ದೊರೆಯುತ್ತದೆ. ಎಲ್ಲಿ ಸರಕಾರಿ ಭೂಮಿ ಲಭ್ಯವಿಲ್ಲವೋ ಅಲ್ಲಿ ಖಾಸಗಿ ಜಮೀನನ್ನು ಗುತ್ತಿಗೆಗೆ ಪಡೆದು ಮೇವು ಬೆಳೆಸಬಹುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಧ್ಯ ಪ್ರವೇಶಿಸಿ, ಮೀನುಗಾರಿಕೆ ಶೆಡ್, ಕೊಟ್ಟಿಗೆ, ಕುರಿಗಳ ಶೆಡ್ ಇತ್ಯಾದಿ ನಿರ್ಮಾಣಕ್ಕೆ ಕೂಡ ಅವಕಾಶವಿದ್ದು, ಪಶುಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಈ ಯೋಜನೆಗಳನ್ನು ಕಾರ್ಯಗತಗೊಳಿಸಬಹುದು. ಅದೇ ರೀತಿ ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಸಹಯೋಗದಲ್ಲಿ ಮೇವು ಬೆಳೆಸಲು ಕ್ರಮ ವಹಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲ, ಆಯುಕ್ತರಾದ ದಿವ್ಯಾ ಪ್ರಭು ಹಾಗೂ ಜಿಲ್ಲಾ ಕಾರ್ಯದರ್ಶಿಗಳು, ಸಿಇಓಗಳು ಪಾಲ್ಗೊಂಡಿದ್ದರು.

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X