Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಕಲಾ...

ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಕಲಾ ಶಿಕ್ಷಣ : ಈಶ್ವರ್‌ ಖಂಡ್ರೆ

‘ಎನ್.ಜಿ.ಎಂ.ಎ-ಆರ್.ಡಿ.ಪಿ.ಆರ್ ನಡುವೆ ಒಡಂಬಡಿಕೆಗೆ ಸಹಿ’

ವಾರ್ತಾಭಾರತಿವಾರ್ತಾಭಾರತಿ8 Oct 2026 7:32 PM IST
share
ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಕಲಾ ಶಿಕ್ಷಣ : ಈಶ್ವರ್‌ ಖಂಡ್ರೆ

ಬೆಂಗಳೂರು : ಗ್ರಾಮೀಣ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಲು ಹಾಗೂ ಕಲಾ ರಂಗದಲ್ಲಿ ಔನ್ನತ್ಯ ಸಾಧಿಸಲು ಅನುವಾಗುವಂತೆ ಗ್ರಾಮ ಪಂಚಾಯತಿಗಳ ಗಂಥಾಲಯಗಳಲ್ಲಿ ಉಚಿತವಾಗಿ ಆಧುನಿಕ ಕಲಾ ಶಿಕ್ಷಣ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಬೆಂಗಳೂರಿನ ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿ (ಎನ್.ಜಿ.ಎಂ.ಎ) ನಡುವೆ ನಡೆದ ಒಡಂಬಡಿಕೆ ವಿನಿಮಯಕ್ಕೆ ಸಾಕ್ಷಿಯಾಗಿ ಅವರು ಮಾತನಾಡಿದರು.

ಗ್ರಾಮ ಪಂಚಾಯತಿ ಗ್ರಂಥಾಲಯ-ಅರಿವು ಕೇಂದ್ರಕ್ಕೆ ಬರುವ ಮಕ್ಕಳಿಗೆ ಆಧುನಿಕ ಕಲೆಯ ಪರಿಚಯ ಮಾಡಿಸಲಾಗುವುದು. ಒಡಂಬಡಿಕೆಯನ್ವಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಕ್ರಮದ ಪ್ರಸಾರ ಮತ್ತು ಅನುಷ್ಠಾನಕ್ಕೆ ಅನುಕೂಲ ಕಲ್ಪಿಸಲಿದೆ. ಎನ್.ಜಿ.ಎಂ.ಎ. ಕಲಾ ಶಿಕ್ಷಣದ ಮಾದರಿಗಳು ಹಾಗೂ ಸಂಪನ್ಮೂಲ ಅಭಿವೃದ್ಧಿ ಪಡಿಸಲಿದೆ ಎಂದು ಅವರು ಹೇಳಿದರು.

ಶೈಕ್ಷಣಿಕ ಉದ್ದೇಶಕ್ಕಾಗಿ ತನ್ನ ಶಾಶ್ವತ ಸಂಗ್ರಹಾಲಯದಲ್ಲಿರುವ ಆಯ್ದ ಡಿಜಿಟಲ್ ಕಲಾಕೃತಿಗಳನ್ನು ಒದಗಿಸಲಿದೆ. ಜೊತೆಗೆ ಗ್ರಂಥಪಾಲಕರಿಗೆ ಮತ್ತು ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿಯನ್ನು ನೀಡಲಿದೆ. ಇವರು ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಆಧುನಿಕ ಕಲಾ ಶಿಕ್ಷಣ ನೀಡುತ್ತಾರೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಇಂಡಿಯಾ ಫೌಂಡೇಷನ್ ಫಾರ್ ಆಟ್ರ್ಸ್ (ಐ.ಎಫ್.ಎ) ಆಧುನಿಕ ಕಲಾ ಶಿಕ್ಷಣ ಕಲಿಕೆಗೆ ಅಗತ್ಯವಾದ ಪಠ್ಯಕ್ರಮ ಅಭಿವೃದ್ಧಿ ಪಡಿಸುತ್ತದೆ ಮತ್ತು ಸಾಮಥ್ರ್ಯವರ್ಧನೆ ಹಾಗೂ ಕಾರ್ಯಕ್ರಮದ ಅನುಷ್ಠಾನಕ್ಕೆ ಬೆಂಬಲ ನೀಡಲಿದೆ. ಅಲ್ಲದೆ, ಈ ಸಂಸ್ಥೆ ಸ್ವತಂತ್ರ ಮೌಲ್ಯಮಾಪನ ಮತ್ತು ಮೇಲ್ವಿಚಾರಣೆಯನ್ನು ಕೈಗೊಳ್ಳಲಿದೆ ಎಂದು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಇಲಾಖೆಯ ಕಾರ್ಯದರ್ಶಿ ಡಿ.ರಂದೀಪ್, ಆಯುಕ್ತ ವೈ.ಎಸ್. ಪಾಟೀಲ್, ಎಂ.ಜಿ.ಎಂ.ಎ. ನಿರ್ದೇಶಕ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಉಪಸ್ಥಿತರಿದ್ದರು.

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X