Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಬಿ ಜಿ ರಾಮ್ ಜಿಯಡಿ ದಾಖಲೆಯ 2.04 ಕೋಟಿ...

ವಿಬಿ ಜಿ ರಾಮ್ ಜಿಯಡಿ ದಾಖಲೆಯ 2.04 ಕೋಟಿ ಮಾನವ ದಿನ ಸೃಜನೆ : ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ14 Oct 2026 1:34 PM IST
share
ವಿಬಿ ಜಿ ರಾಮ್ ಜಿಯಡಿ ದಾಖಲೆಯ 2.04 ಕೋಟಿ ಮಾನವ ದಿನ ಸೃಜನೆ : ಈಶ್ವರ್‌ ಖಂಡ್ರೆ

ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ವಿಬಿ ಜಿ ರಾಮ್ ಜಿ ಅಡಿಯಲ್ಲಿ ಜುಲೈ 1ರಿಂದ ನಿನ್ನೆಯವರೆಗೆ ದಾಖಲೆಯ 2.04 ಕೋಟಿ ಮಾನವ ದಿನ ಉದ್ಯೋಗ ಸೃಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್‌ ಬಿ ಖಂಡ್ರೆ ತಿಳಿಸಿದ್ದಾರೆ.

ಮನ್ರೇಗಾ ಅಡಿಯಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 1.71 ಕೋಟಿ ಮಾನವ ದಿನ ಸೃಜನೆಯಾಗಿತ್ತು. ಆದರೆ ಈ ಬಾರಿ ಎಲ್ ನಿ ನೋ ಪ್ರಭಾವದಿಂದ ಮಳೆಯ ಕೊರತೆ ಆಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಬಡವರಿಗೆ, ಭೂರಹಿತ ಕೂಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಯಚೂರು ಪ್ರಥಮ:

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಜುಲೈ 1ರಿಂದ ನಿನ್ನೆಯವರೆಗೆ ಒಟ್ಟಾರೆ 24 ಲಕ್ಷ ಮಾನವ ದಿನ ಸೃಜಿಸಲಾಗಿದ್ದು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಬೀದರ್ 21 ಲಕ್ಷ ಮಾನವ ದಿನ, ಕೊಪ್ಪಳ 18 ಲಕ್ಷ ಮಾನವ ದಿನ ಸೃಜಿಸುವುದರೊಂದಿಗೆ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ. ಉದ್ಯೋಗ ಸೃಜನೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ವಿಜಯನಗರ ಜಿಲ್ಲೆಯಲ್ಲಿ ಶೇ.340ರಷ್ಟು, ಕಲ್ಬುರ್ಗಿ ಜಿಲ್ಲೆಯಲ್ಲಿ ಶೇ.257, ಕೊಪ್ಪಳದಲ್ಲಿ ಶೇ.207, ಬಳ್ಳಾರಿ ಶೇ.175 ಮತ್ತು ಬೀದರ್ ಶೇಕಡ 173ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.

ಜಾಬ್ ಕಾರ್ಡ್ ಮೇಳ-87164 ಹೊಸ ಕಾರ್ಡ್ ವಿತರಣೆ:

ರಾಜ್ಯದಲ್ಲಿ ಮನ್ರೇಗಾ ಅಡಿಯಲ್ಲಿ ವಿತರಿಸಲಾಗಿದ್ದ ಜಾಬ್ ಕಾರ್ಡ್ ಗಳ ಇ-ಕೆ.ವೈ.ಸಿ.ಯನ್ನು ಮಾಡುವುದರ ಜೊತೆಗೆ ಜಾಬ್ ಕಾರ್ಡ್ ಮೇಳ ನಡೆಸಿ ಹೊಸ ಜಾಬ್ ಕಾರ್ಡ್ ಗಳನ್ನು ವಿತರಿಸಲು ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ, ಗುಳೆ ಹೋಗುತ್ತಿದ್ದ ನೂರಾರು ಕುಟುಂಬಗಳು ಇರುವ ಸ್ಥಳದಲ್ಲಿಯೇ ಉದ್ಯೋಗ ಪಡೆಯಲು ಅನುಕೂಲವಾಗಿದೆ. ಈ ವರ್ಷದಲ್ಲಿ ಹೊಸದಾಗಿ 87164 ಅಧಿಕ ಜಾಬ್ ಕಾರ್ಡ್ ವಿತರಿಸಲಾಗಿದೆ ಎಂದು ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಕೆರೆಯ ಹೂಳೆತ್ತುವುದು, ಸಾಮಾಜಿಕ ಅರಣ್ಯೀಕರಣ, ಕಾಲುವೆ, ಕೆರೆ, ಸರೋವರಗಳ ಪುನಶ್ಚೇತನ, ಜಾನುವಾರು ಶೆಡ್, ಕೃಷಿ ಹೊಂಡ ನಿರ್ಮಾಣ, ಗುಡ್ಡಗಳ ಮಣ್ಣು ಕುಸಿಯದಂತೆ ತಡೆಗಳ ನಿರ್ಮಾಣ, ಗೊಬ್ಬರ ಗುಂಡಿ, ಸಂಪರ್ಕ ರಸ್ತೆ ನಿರ್ಮಾಣ ಇತ್ಯಾದಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈಗ ಹೊಸದಾಗಿ ವಸತಿ ಯೋಜನೆ, ಸಮುದಾಯ ಭವನ, ಗ್ರಾಮೀಣ ಬಸ್ ನಿಲ್ದಾಣಗಳ ನಿರ್ಮಾಣಕ್ಕೂ ಅವಕಾಶ ನೀಡಲಾಗಿದ್ದು ಗ್ರಾಮೀಣ ಭಾಗದಲ್ಲಿ ಶಾಶ್ವತ ಆಸ್ತಿಗಳ ಸೃಜನೆ ಮತ್ತು ಗ್ರಾಮಾಭಿವೃದ್ಧಿಗೂ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿಬಿಜಿ ರಾಮ್‌ ಜಿ ಯೋಜನೆಯಡಿ ಒಂದು ಕುಟುಂಬಕ್ಕೆ ಒಂದು ವರ್ಷದಲ್ಲಿ 125 ದಿನ ಉದ್ಯೋಗ ನೀಡಲು ಅವಕಾಶವಿದ್ದು, ಹೆಣ್ಣು, ಗಂಡು ಎಂಬ ತಾರತಮ್ಯವಿಲ್ಲದೆ 382 ರು. ಕೂಲಿ ನೀಡಲಾಗುತ್ತಿದೆ. ಹೀಗಾಗಿ ಪ್ರತಿ ಗ್ರಾಮೀಣ ಕುಟುಂಬಗಳು ವಾರ್ಷಿಕ 47,750 ರು. ಗಳಿಸಬಹುದಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X