Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರಿ ಹುದ್ದೆ ಅಧಿಕಾರ ಚಲಾವಣೆಗಲ್ಲ,...

ಸರಕಾರಿ ಹುದ್ದೆ ಅಧಿಕಾರ ಚಲಾವಣೆಗಲ್ಲ, ಜನಸೇವೆಗೆ : ಈಶ್ವರ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ1 Aug 2026 10:46 PM IST
share
ಸರಕಾರಿ ಹುದ್ದೆ ಅಧಿಕಾರ ಚಲಾವಣೆಗಲ್ಲ, ಜನಸೇವೆಗೆ : ಈಶ್ವರ ಖಂಡ್ರೆ

ಬೆಂಗಳೂರು : ಸರಕಾರಿ ಅಧಿಕಾರಿಗಳ ಹುದ್ದೆ, ಅಧಿಕಾರ ಇರುವುದು ದರ್ಪ ಚಲಾವಣೆಗಲ್ಲ. ಬದಲಾಗಿ ಅದು ಜನಸೇವೆ ಮಾಡಲು ಸಿಕ್ಕಿರುವ ಅವಕಾಶ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಶನಿವಾರ ಕಲ್ಯಾಣ ಕರ್ನಾಟಕ ವೃಂದದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಹೊಸದಾಗಿ ನೇಮಕಗೊಂಡಿರುವ 66 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಎಲ್ಲ 5927 ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅನ್ನು ಅಲ್ಲಿನ ಅಧಿಕಾರಿಗಳು ಸ್ವಾರ್ಥ ಮರೆತು, ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಪ್ರತಿ ಗ್ರಾಮವೂ ಆದರ್ಶ ಗ್ರಾಮವಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ನಗರ, ಪಟ್ಟಣಗಳಲ್ಲಿರುವಂತೆ ಗ್ರಾಮಗಳಲ್ಲೂ ಮೂಲಭೂತ ಸೌಕರ್ಯ ನೀಡಿದರೆ ವಲಸೆ ತಡೆಯಲು ಸಾಧ್ಯವಾಗುತ್ತದೆ. ಗ್ರಾಮಗಳ ಅಭಿವೃದ್ಧಿಯೂ ಆಗುತ್ತದೆ, ನಗರಗಳ ಮೇಲಿನ ಒತ್ತಡವೂ ತಗ್ಗುತ್ತದೆ. ಜತೆಗೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕುಡಿಯುವ ನೀರು ಪೂರೈಕೆ, ಗ್ರಾಮೀಣ ರಸ್ತೆ ಅಭಿವೃದ್ಧಿ, ಸ್ವಚ್ಛತೆ, ಗ್ರಾಮೀಣ ವಸತಿ, ಇ-ಸ್ವತ್ತು ಮೊದಲಾದ ಕಾರ್ಯಗಳನ್ನು ನಿಷ್ಠೆಯಿಂದ, ವಿಳಂಬವಿಲ್ಲದೆ ಮಾಡಬೇಕು ಅವರು ಸೂಚನೆ ನೀಡಿದರು.

ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಮಹತ್ವದ ಜವಾಬ್ದಾರಿಯೂ ಪಂಚಾಯತಿ ಅಧಿಕಾರಿಗಳ ಮೇಲಿದೆ. ಶತಮಾನಗಳ ಶಾಪದಿಂದ ಮತ್ತು ದಬ್ಬಾಳಿಕೆಯಿಂದ ತೀವ್ರ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಜನರ ನೋವು ನಿಮಗೆ ಅರಿವಿದೆ. ಹೀಗಾಗಿ, ಈ ಭಾಗದ ಗ್ರಾಮಗಳ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದ ಅವರು, ಉಳಿಕೆ ವೃಂದದಲ್ಲಿ 150 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಆಯ್ಕೆಯಾಗಿದ್ದು, 3 ತಿಂಗಳ ಒಳಗಾಗಿ ವೈದ್ಯಕೀಯ ಪರೀಕ್ಷೆ, ಮೂಲ ಪ್ರಮಾಣ ಪತ್ರಗಳ ಪರಿಶೀಲನೆ ಪ್ರಕ್ರಿಯೆ ಮುಗಿಸಿ ನೇಮಕಾತಿ ಪತ್ರ ನೀಡಲಾಗುವುದು ಎಂದೂ ಈಶ್ವರ ಖಂಡ್ರೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಇಲಾಖೆಯ ಕಾರ್ಯದರ್ಶಿ ಡಿ.ರಂದೀಪ್, ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಸೇರಿದಂತೆ ಪ್ರಮುಖರಿದ್ದರು.

Tags

Minister Ishwara Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X