Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ನಗರವನ್ನು ಮಾಲಿನ್ಯ...

ಬೆಂಗಳೂರು ನಗರವನ್ನು ಮಾಲಿನ್ಯ ಮುಕ್ತವಾಗಿರಿಸುವುದು ನಮ್ಮೆಲ್ಲರ ಕರ್ತವ್ಯ: ಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ1 Dec 2023 7:30 PM IST
share
ಬೆಂಗಳೂರು ನಗರವನ್ನು ಮಾಲಿನ್ಯ ಮುಕ್ತವಾಗಿರಿಸುವುದು ನಮ್ಮೆಲ್ಲರ ಕರ್ತವ್ಯ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ‘ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರವನ್ನು ಮಾಲಿನ್ಯ ಮುಕ್ತವನ್ನಾಗಿ ಮಾಡಿ ಮುಂದಿನ ಯುವ ಪೀಳಿಗೆಗೆ ಉತ್ತಮ ವಾತವರಣ ನಿರ್ಮಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರ ನೃಪತುಂಗ ರಸ್ತೆಯ ಯವನಿಕ ಸಭಾಂಗಣದಲ್ಲಿ ಸಾರಿಗೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಸಮಾರೋಪ ಸಮಾರಂಭ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜಲ ಮಾಲಿನ್ಯ, ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯವೂ ಹೆಚ್ಚುತ್ತಿದೆ. ನಗರೀಕರಣ, ಹೆಚ್ಚುತ್ತಿರುವ ವಾಹನಗಳು, ಜನಸಂಖ್ಯೆಯಿಂದ ವಾಯುಮಾಲಿನ್ಯ ಉಂಟಾಗುತ್ತಿದೆ. ನಾವು ಆದಷ್ಟು ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಉತ್ತೇಜಿಸಬೇಕು ಎಂದು ಸಲಹೆ ನೀಡಿದರು.

ಚಲನಚಿತ್ರ ನಟಿ ಐಂದ್ರಿತ ರೈ ಮಾತನಾಡಿ, ದೇಶದಲ್ಲಿ ಮಾಲಿನ್ಯ ಹೊಂದಿದ ನಗರಗಳಲ್ಲಿ ಬೆಂಗಳೂರು 5ನೇ ಸ್ಥಾನದಲ್ಲಿದ್ದು, ದೀಪಾವಳಿಯ ಸಂದರ್ಭದಲ್ಲಿ ಉಂಟಾದ ಶಬ್ದ, ವಾಯುಮಾಲಿನ್ಯದಿಂದ ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿತ್ತಲ್ಲದೆ, ಪ್ರಾಣಿಗಳಿಗೂ ತೊಂದರೆ ಉಂಟಾಯಿತು. ನಾವು ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಬಳಸಲು ರೂಢಿ ಮಾಡಿಕೊಳ್ಳಬೇಕು. ಹಾಗೆಯೇ ಸೈಕ್ಲಿಂಗ್, ವಾಯು ವಿಹಾರ ಮಾಡಿ ದೇಹದ ಸ್ವಾಸ್ಥ್ಯ ಕಾಪಾಡಬೇಕು ಎಂದು ತಿಳಿಸಿದರು.

ಫ್ರೊ.ಎಚ್.ಪರಮೇಶ್ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿ, ವಾಯುಮಾಲಿನ್ಯ ನಿಧಾನಗತಿಯಲ್ಲಿ ಮನುಷ್ಯನನ್ನು ಕೊಲ್ಲುತ್ತದೆ. ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆಗಳು, ಸ್ನಾಯು ಸೆಳೆತ, ಅಸ್ತಮಾ ಕಾಯಿಲೆಗಳು ವಾಯು ಮಾಲಿನ್ಯದಿಂದ ಉಂಟಾಗುತ್ತದೆ. ನಾವು ವ್ಯಾಯಾಮ ಮಾಡುವುದರ ಜೊತೆಗೆ ಶುದ್ಧ ಆಮ್ಲಜನಕ ಹಾಗೂ ಉತ್ತಮ ಆಹಾ ಸೇವಿಸಿದರೆ ಆರೋಗ್ಯವನ್ನು ಹೊಂದಬಹುದು ಎಂದರು.

ಇದೇ ವೇಳೆ ಸಾರಿಗೆ ಇಲಾಖೆಯು ಹೊರತಂದ ‘ಹಸಿರಾಗುವ-ಉಸಿರಾಗುವ’ ಮಾಹಿತಿ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಮಾಸಾಚರಣೆ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ರಸ್ತೆ ಸುರಕ್ಷತೆ ಕಾರ್ಯದರ್ಶಿ ಎ.ಎಂ.ಯೋಗೀಶ್, ಅಪರ ಸಾರಿಗೆ ಆಯುಕ್ತ ಬಿ.ಪಿ.ಉಮಾಶಂಕರ್, ಜೆ. ಜ್ಞಾನೇಂದ್ರ ಕುಮಾರ್, ಜೆ.ಪುರುಷೋತ್ತಮ್, ಸಿ.ಮಲ್ಲಿಕಾರ್ಜುನ್, ಜಂಟಿ ಸಾರಿಗೆ ಆಯುಕ್ತ ಎಂ.ಶೋಭ ಸೇರಿದಂತೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X