Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಎಚ್‍ಡಿಕೆ...

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಎಚ್‍ಡಿಕೆ ಅಭ್ಯರ್ಥಿಯಾಗಬೇಕೆಂದು ಜೆಡಿಎಸ್ ಕಾರ್ಯಕರ್ತರಿಂದ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ24 March 2024 6:17 PM IST
share
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಎಚ್‍ಡಿಕೆ ಅಭ್ಯರ್ಥಿಯಾಗಬೇಕೆಂದು ಜೆಡಿಎಸ್ ಕಾರ್ಯಕರ್ತರಿಂದ ಒತ್ತಾಯ

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಒತ್ತಾಯಿಸಿದ ಮಂಡ್ಯದ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಜೆ.ಪಿ.ನಗರದಲ್ಲಿರುವ ಎಚ್‍ಡಿಕೆ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು.

ರವಿವಾರ ಬೆಳಗ್ಗೆ ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಕುಮಾರಸ್ವಾಮಿ ಅವರನ್ನು ನೋಡಲು ವಿವಿಧ ಜಿಲ್ಲೆಗಳಿಂದ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಎಚ್‍ಡಿಕೆ ನಿವಾಸದ ಮುಂದೆ ಜಮಾಯಿಸಿದ ಕಾರ್ಯಕರ್ತರು, ಕುಮಾರಸ್ವಾಮಿ ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಬೇಕು ಎಂದು ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ತಂದೆಯವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಈಗಷ್ಟೇ ಮನೆಗೆ ಬಂದಿದ್ದಾರೆ. ಅವರಿಗೆ ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿಕೊಂಡರು. ನಿಖಿಲ್ ಮಾತಿನ ನಡುವೆಯೇ ಕುಮಾರಸ್ವಾಮಿ ಅವರೇ ನಮ್ಮ ಅಭ್ಯರ್ಥಿ ಎಂದು ಘೋಷಣೆಗಳನ್ನು ಕೂಗಿದ ಕಾರ್ಯಕರ್ತರನ್ನು ಕೊನೆಗೆ ಕುಮಾರಸ್ವಾಮಿಯವರೇ ಸಮಾಧಾನಪಡಿಸಬೇಕಾಯಿತು.

ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಎಚ್‍ಡಿಕೆ, ‘ಮಂಡ್ಯದಲ್ಲಿ ನಮಗೆ ವಿಶೇಷ ಪ್ರೀತಿ ವಿಶ್ವಾಸ ಸಿಕ್ಕಿದೆ. ಅದು ನನ್ನ ಭಾಗ್ಯ. ನಾನು ಈ ಭೂಮಿಯಲ್ಲಿ ಇರುವವರೆಗೂ ಈ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ನನಗೆ ಈವರೆಗೆ ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನನ್ನ ಆರೋಗ್ಯವನ್ನು ನೋಡಿಕೊಂಡು ಪಕ್ಷದ ಕೆಲಸ, ಜನರ ಸೇವೆ ಮಾಡಬೇಕಿದೆ’ ಎಂದು ಹೇಳಿದರು.

‘ನಮ್ಮ ಪಕ್ಷದಲ್ಲಿ ದೊಡ್ಡ ನಾಯಕರು ಯಾರು ಇಲ್ಲ. ನಮ್ಮ ಪಕ್ಷದಲ್ಲಿ ಬೆಳೆದವರು ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿ ಹೋಗಿದ್ದಾರೆ. ನಿಮ್ಮ ಆಸೆಗೆ ನಿರಾಸೆ ಮಾಡಲ್ಲ ಎಂದು ಮಂಡ್ಯದ ಸಭೆಯಲ್ಲೇ ಹೇಳಿದ್ದೇನೆ ಎಂದು ಅವರು ತಿಳಿಸಿದರು.

‘ನಾನು ಹುಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ ಜಿಲ್ಲೆ, ಜೀವಕ್ಕೆ ಜೀವವಾಗಿ ನನ್ನನ್ನು ಪೊರೆದು ಸಲಹುತ್ತಿರುವ ಜಿಲ್ಲೆ ಮಂಡ್ಯ. ಈ ನೆಲವನ್ನು, ಈ ಜನರ ಪ್ರೀತಿ ವಿಶ್ವಾಸವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ನಾಳೆ (ಸೋಮವಾರ) ಚನ್ನಪಟ್ಟಣ ಕ್ಷೇತ್ರದ ಮುಖಂಡರನ್ನು ಕರೆಸಿ ಮಾತನಾಡುತ್ತೇನೆ. ನಾಳೆಯ ದಿನ ಯಾವುದೇ ಕಾರಣಕ್ಕೂ ನಿಮಗೆ ನಿರಾಶೆ ಮಾಡುವುದಿಲ್ಲ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X