ಸಚಿವ ಮಧು ಬಂಗಾರಪ್ಪ ಕ್ಷಮೆಯಾಚನೆಗೆ ಜೆಡಿಎಸ್ ಆಗ್ರಹ

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅಗೌರವದ ಮಾತಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡಲೇ ಕ್ಷಮೆ ಕೇಳಬೇಕೆಂದು ಜೆಡಿಎಸ್ ಆಗ್ರಹಿಸಿದೆ.
ಶನಿವಾರ ಈ ಸಂಬಂಧ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಜೆಡಿಎಸ್, ಬುಡಕಟ್ಟು ಸಮುದಾಯದಿಂದ ಬಂದು ದೇಶದ ಪ್ರಥಮ ಪ್ರಜೆಯಾಗಿರುವ ಮಹಿಳಾ ರಾಷ್ಟ್ರಪತಿಗಳಿಗೆ `ಮೌನ ರಾಷ್ಟ್ರಪತಿ’ ಎಂದು ಅಪಮಾನಿಸಿರುವುದು ಕಾಂಗ್ರೆಸ್ ಪಕ್ಷದ ಸಂವಿಧಾನ ವಿರೋಧಿ ಹಾಗೂ ಅಹಂಕಾರದ ಮನಸ್ಥಿತಿಯನ್ನು ತೋರಿಸುತ್ತದೆ. ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿರುವ ಅಗೌರವದ ಹೇಳಿಕೆ ತೀವ್ರ ಖಂಡನೀಯ ಎಂದು ಹೇಳಿದೆ.
Next Story




