Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಗ್ರೇಟರ್‌ ಬೆಂಗಳೂರುʼ ವಿಧೇಯಕದ ವಿರುದ್ಧ...

ʼಗ್ರೇಟರ್‌ ಬೆಂಗಳೂರುʼ ವಿಧೇಯಕದ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 March 2025 4:44 PM IST
share
ʼಗ್ರೇಟರ್‌ ಬೆಂಗಳೂರುʼ ವಿಧೇಯಕದ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಬೆಂಗಳೂರು : ರಿಯಲ್‌ ಎಸ್ಟೇಟ್‌ ದಂಧೆ ನಡೆಸುವುದು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ ಮಾಡಲು ಹೊರಟಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ.

ಗ್ರೇಟರ್‌ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್‌ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್.‌ಎಂ.ರಮೇಶ್‌ ಗೌಡ ಅವರು,; ಕೇವಲ ಭೂ ದಂಧೆ ನಡೆಸುವ ಏಕೈಕ ಉದ್ದೇಶ ಹಾಗೂ ಬೆಂಗಳೂರಿನಲ್ಲಿಯೇ ಕನ್ನಡಿಗರನ್ನು ಪರಕೀಯರನ್ನಾಗಿ ಮಾಡುವ ದುರುದ್ದೇಶದಿಂದ ಸರಕಾರವು ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು.

ಅಲ್ಲದೇ, ವಿಧಾನಮಂಡಲದಲ್ಲಿ ಕಾಂಗ್ರೆಸ್‌ ಸರಕಾರ ಬೆಂಗಳೂರು ಜನರ ಭಾವನೆಗಳಿಗೆ ವಿರುದ್ಧವಾಗಿ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ಪಾಸ್‌ ಮಾಡಿಕೊಂಡಿದೆ. ರಾಜ್ಯಪಾರು ಯಾವುದೇ ಕಾರಣಕ್ಕೂ ಈ ವಿಧೇಯಕಕ್ಕೆ ಸಹಿ ಹಾಕಬಾರದು. ಮತ್ತೂ ಆ ವಿಧೇಯಕವನ್ನು ತಿರಸ್ಕರಿಸಬೇಕು ಎಂದು ಕೋರುತ್ತೇವೆ. ಈ ಬಗ್ಗೆ ನಮ್ಮ ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನರು ವಾಸ ಮಾಡುತ್ತಿದ್ದಾರೆ. ಜನರಿಗೆ ಕುಡಿಯುವ ನೀರಿಲ್ಲ, ಸರಿಯಾದ ಮೂಲಸೌಕರ್ಯಗಳು ಇಲ್ಲ. ರಸ್ತೆಗುಂಡಿಗಳನ್ನು ಮುಚ್ಚಲು ಈ ಸರಕಾರದಲ್ಲಿ ನಯಾಪೈಸೆ ಹಣವಿಲ್ಲ. ಈಗ ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಜನರನ್ನು ಯಾಮಾರಿಸಲು ಹೊರಟಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಬೇಸಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶುರುವಾಗಿಲ್ಲ. ಆಗಲೇ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಒಂದು ನೀರಿನ ಟ್ಯಾಂಕರ್‌ ಗೆ ಐದು ಸಾವಿರ, ಆರು ಸಾವಿರ ಕೊಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಬೆಂಗಳೂರಿನ ಜನ ನಿಜಕ್ಕೂ ದಿನಿತ್ಯವೂ ಸತ್ತು ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಸರಕಾರದ ದುರಾಡಳಿತವೇ ಕಾರಣ ಎಂದು ಆರೋಪ ಮಾಡಿದರು.

ಕೂಡಲೇ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ರಾಜ್ಯ ಸರಕಾರ ವಾಪಸ್‌ ವಿಧೇಯಕವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ನಗರದಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕರ ಕಾರ್ಯಕ್ರಮಗಳನ್ನು ನಡೆಯಲು ಬಿಡುವುದಿಲ್ಲ. ಅಲ್ಲೆಲ್ಲ ನಾವು ಪಕ್ಷದ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ಕೊಟ್ಟರು.

ಮತ್ತೆ ಹಾಲಿನ ದರ ಏರಿಕೆ ಮಾಡಲು ಈ ಸರಕಾರ ಹೊರಟಿದೆ. ಬೆಂಗಳೂರು ಜನರನ್ನು ಈ ಸರಕಾರ ಏನು ಮಾಡಲು ಹೊರಟಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಸರಕಾರ ಬಂದಾಗಿನಿಂದ 43 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ತರಿಗೆ ಹಾಕಿದ್ದೀರಿ. ಇದು ಬಹಳ ಅನ್ಯಾಯ ಎಂದು ಅವರು ಕಿಡಿಕಾರಿದರು.

ವಿಧಾನ ಪರಿಷತ್‌ ಸದಸ್ಯ ಟಿ.ಎ.ಜವರಾಯಿ ಗೌಡ, ಮಾಜಿ ಎಂಎಲ್‌ ಸಿ ಕೆ.ಎ. ತಿಪಪೇಸ್ವಾಮಿ, ಬೆಂಗಳೂರು ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್‌, ಮುಖಂಡರಾದ ನಾಗೇಶ್‌ ರಾವ್‌, ವೆಂಕಟಸ್ವಾಮಿ, ವೇಣುಗೋಪಾಲ್‌, ಮಂಗಳಮ್ಮ ಪ್ರವೀಣ್‌ ಕುಮಾರ್‌, ಸ್ಯಾಮುಯಲ್‌, ಅಪ್ರೋಜ್‌ ಬೇಗ್‌ ಸೇರಿದಂತೆ ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X