Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜನಪ್ರಿಯತೆಯ ಬೆನ್ನತ್ತುವಾಗ ಪತ್ರಿಕೋದ್ಯಮ...

ಜನಪ್ರಿಯತೆಯ ಬೆನ್ನತ್ತುವಾಗ ಪತ್ರಿಕೋದ್ಯಮ ತನ್ನ ಸತ್ಯನಿಷ್ಠೆ ಮತ್ತು ಜವಾಬ್ದಾರಿಯನ್ನು ಮರೆಯಬಾರದು: ಡಾ.ಜಿ.ಪರಮೇಶ್ವರ್‌

ಪ್ರಕಾಶ್ ರಾಮಜೋಗಿ ಹಳ್ಳಿಪ್ರಕಾಶ್ ರಾಮಜೋಗಿ ಹಳ್ಳಿ16 Nov 2026 4:15 PM IST
share
ಜನಪ್ರಿಯತೆಯ ಬೆನ್ನತ್ತುವಾಗ ಪತ್ರಿಕೋದ್ಯಮ ತನ್ನ ಸತ್ಯನಿಷ್ಠೆ ಮತ್ತು ಜವಾಬ್ದಾರಿಯನ್ನು ಮರೆಯಬಾರದು: ಡಾ.ಜಿ.ಪರಮೇಶ್ವರ್‌

ಬೆಂಗಳೂರು : ಪತ್ರಿಕೋದ್ಯಮದಲ್ಲಿ ಜನಪ್ರಿಯತೆ ಎಷ್ಟು ಮುಖ್ಯವೋ, ಜವಾಬ್ದಾರಿಯೂ ಅಷ್ಟೇ ಮುಖ್ಯ. ಜನಪ್ರಿಯತೆಗಾಗಿ ಸತ್ಯವನ್ನು ಕಡೆಗಣಿಸುವಂತಾಗಬಾರದು. ಪತ್ರಕರ್ತರ ಬರಹದಲ್ಲಿ ಸತ್ಯನಿಷ್ಠೆ, ಸ್ವಂತಿಕೆ ಹಾಗೂ ಆಳವಾದ ವಿಶ್ಲೇಷಣೆ ಇರಬೇಕು. ಪತ್ರಿಕೋದ್ಯಮ ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗುವುದರ ಜೊತೆಗೆ ದೇಶದ ಅಭಿವೃದ್ಧಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಅಭಿಪ್ರಾಯಪಟ್ಟರು.

ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ವಾರ್ತಾಭವನದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಪತ್ರಿಕೋದ್ಯಮ: ಜನಪ್ರಿಯತೆಯೇ ಅಥವಾ ಜವಾಬ್ದಾರಿಯುತವೇ?’ ವಿಷಯದ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕೋದ್ಯಮದ ಸ್ವಾತಂತ್ರ್ಯ, ಅದರ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಮಹತ್ವವನ್ನು ವಿವರಿಸಿದ ಅವರು, ಪಂಡಿತ್ ಜವಾಹರಲಾಲ್ ನೆಹರು ಅವರು ಪತ್ರಿಕಾ ಸ್ವಾತಂತ್ರ್ಯದ ಕುರಿತು ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಸ್ಮರಿಸಿದರು.

‘ಪತ್ರಿಕಾ ಸ್ವಾತಂತ್ರ್ಯದ ದುರುಪಯೋಗದಿಂದ ಅಪಾಯಗಳಿದ್ದರೂ, ನಿಯಂತ್ರಿತ ಅಥವಾ ನಿರ್ಬಂಧಿತ ಪತ್ರಿಕೆಗಳಿಗಿಂತ ಸಂಪೂರ್ಣ ಸ್ವತಂತ್ರ ಪತ್ರಿಕಾ ವ್ಯವಸ್ಥೆಯೇ ನನಗೆ ಹೆಚ್ಚು ಒಪ್ಪಿಗೆಯಾಗುತ್ತದೆ’ ಎಂಬ ನೆಹರು ಅವರ ಮಾತುಗಳನ್ನು ಉಲ್ಲೇಖಿಸಿದ ಅವರು, ಪತ್ರಿಕಾ ಸ್ವಾತಂತ್ರ್ಯದ ಕುರಿತು ನೆಹರು ಅವರಿಗಿದ್ದ ದೂರದೃಷ್ಟಿಯನ್ನು ಶ್ಲಾಘಿಸಿದರು.

ಪತ್ರಿಕೋದ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದು ಕರೆಯಲಾಗುತ್ತದೆ. ಈ ಸ್ತಂಭಕ್ಕೆ ಎಷ್ಟು ಸ್ವಾತಂತ್ರ್ಯ ಮತ್ತು ಶಕ್ತಿ ಇರಬೇಕು, ಅದು ಸಮಾಜಕ್ಕೆ, ದೇಶಕ್ಕೆ ಹಾಗೂ ಆಡಳಿತ ವ್ಯವಸ್ಥೆಗೆ ಯಾವ ರೀತಿಯಲ್ಲಿ ನೆರವಾಗಬೇಕು ಎಂಬುದನ್ನು ನೆಹರು ಅವರು ಆಳವಾಗಿ ಅರ್ಥೈಸಿಕೊಂಡಿದ್ದರು. ಪತ್ರಿಕಾ ಸ್ವಾತಂತ್ರ್ಯ ಎನ್ನುವುದು ಕೇವಲ ಘೋಷಣೆಯಲ್ಲ, ಅದು ಪ್ರಜಾಪ್ರಭುತ್ವದ ಪ್ರಕ್ರಿಯೆಯ ಅವಿಭಾಜ್ಯ ಅಂಗ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದರು ಎಂದು ಹೇಳಿದರು.

ಸ್ವತಂತ್ರ ಮತ್ತು ನಿರ್ಭೀತ ಪತ್ರಿಕೋದ್ಯಮವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ 1966ರ ನವೆಂಬರ್ 16ರಂದು ಭಾರತೀಯ ಪತ್ರಿಕಾ ಮಂಡಳಿ ಕಾರ್ಯಾರಂಭ ಮಾಡಿತು. ಈ ಐತಿಹಾಸಿಕ ದಿನವನ್ನು ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಅವರು ಸ್ಮರಿಸಿದರು.

ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯಾನಂತರದ ಪತ್ರಿಕೋದ್ಯಮದ ಪಯಣವನ್ನು ಅವಲೋಕಿಸುವ ಅಗತ್ಯವಿದೆ. ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ನೀಡಿರುವ ಮಹತ್ವವನ್ನು ಗಮನಿಸಿದಾಗ, ಈ ಸ್ವಾತಂತ್ರ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಎಷ್ಟರಮಟ್ಟಿಗೆ ಬಳಸಿಕೊಳ್ಳಲಾಗಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ಹೇಳಿದರು.

ಸಮಾಜದಲ್ಲಿ ಸಮಾನತೆ ಸ್ಥಾಪಿಸುವುದು, ನಾಗರಿಕರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು, ಅಭಿವೃದ್ಧಿಯ ವಿಚಾರಗಳನ್ನು ಮುನ್ನೆಲೆಗೆ ತರುವುದು ಹಾಗೂ ಸಂವಿಧಾನದ ಆಶಯಗಳ ಕುರಿತು ಚರ್ಚೆಗಳನ್ನು ರೂಪಿಸುವಲ್ಲಿ ಪತ್ರಿಕೋದ್ಯಮ ಮಹತ್ವದ ಪಾತ್ರ ವಹಿಸಬೇಕಿದೆ. ಸಂವಿಧಾನದ ವಿಚಾರಧಾರೆಗಳನ್ನು ಜನರಿಗೆ ಅರ್ಥೈಸುವ ಮೂಲಕ ಕಾನೂನುಗಳು ಮತ್ತು ನಿಯಮಗಳ ರೂಪಿಸುವಿಕೆಗೆ ಅಗತ್ಯವಾದ ಸಾರ್ವಜನಿಕ ಚರ್ಚೆಗಳನ್ನು ಬೆಳೆಸುವ ಜವಾಬ್ದಾರಿಯೂ ಮಾಧ್ಯಮಗಳ ಮೇಲಿದೆ ಎಂದು ತಿಳಿಸಿದರು.

ಪತ್ರಿಕಾ ಸ್ವಾತಂತ್ರ್ಯ ದೊರೆತಿದೆ ಎಂಬುದಷ್ಟೇ ಮುಖ್ಯವಲ್ಲ. ಆ ಸ್ವಾತಂತ್ರ್ಯದ ಮೂಲಕ ದೇಶದ ಬೆಳವಣಿಗೆಗೆ ಪತ್ರಿಕೋದ್ಯಮ ನೀಡಿರುವ ಕೊಡುಗೆ ಏನು ಎಂಬುದನ್ನೂ ಪರಿಶೀಲಿಸಬೇಕಿದೆ. ಸಮಾನತೆ, ಹಕ್ಕುಗಳು ಮತ್ತು ಅಭಿವೃದ್ಧಿಯ ಕುರಿತು ನಾವು ನಿರಂತರವಾಗಿ ಮಾತನಾಡುತ್ತೇವೆ. ಆದರೆ ಈ ಕ್ಷೇತ್ರಗಳಲ್ಲಿ ಸಮಾಜವನ್ನು ಬದಲಾಯಿಸಲು ಪತ್ರಿಕೆಗಳು ಎಷ್ಟರಮಟ್ಟಿಗೆ ಸಹಾಯ ಮಾಡಿವೆ ಎಂಬುದನ್ನು ವಿಶ್ಲೇಷಿಸಬೇಕು. ಅಗತ್ಯವಿರುವ ಕಡೆಗಳಲ್ಲಿ ನಮ್ಮ ಕಾರ್ಯವೈಖರಿಯನ್ನು ತಿದ್ದಿಕೊಳ್ಳುವ ಮನೋಭಾವವೂ ಇರಬೇಕು ಎಂದು ಅಭಿಪ್ರಾಯಪಟ್ಟರು.

ವರದಿಗಾರಿಕೆಗೆ ಸೀಮಿತವಾಗದೆ ವಿಶ್ಲೇಷಣಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳಿ :

ಇತ್ತೀಚಿನ ದಿನಗಳಲ್ಲಿ ಸ್ವಂತ ಚಿಂತನೆಯೊಂದಿಗೆ ಲೇಖನಗಳನ್ನು ಬರೆಯುವ ಪ್ರವೃತ್ತಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ತಂತ್ರಜ್ಞಾನದ ಪ್ರಗತಿಯಿಂದಾಗಿ ಕೀಬೋರ್ಡ್ ಮತ್ತು ಮೊಬೈಲ್ ಫೋನ್‌ಗಳ ಮೂಲಕವೇ ಬಹುತೇಕ ಪತ್ರಿಕಾ ಕೆಲಸಗಳು ನಡೆಯುತ್ತಿವೆ. ಆದರೆ ಈ ಬದಲಾವಣೆಗಳ ನಡುವೆ ಸ್ವಂತ ಬರವಣಿಗೆ, ಆಳವಾದ ಅಧ್ಯಯನ ಮತ್ತು ವಿಶ್ಲೇಷಣೆಗೆ ನೀಡುವ ಪ್ರಾಮುಖ್ಯತೆ ಕಡಿಮೆಯಾಗಬಾರದು ಎಂದು ಸಲಹೆ ನೀಡಿದರು.

ಪತ್ರಿಕೋದ್ಯಮದಲ್ಲಿ ‘ಕಾಪಿ ಆ್ಯಂಡ್ ಪೇಸ್ಟ್’ ಸಂಸ್ಕೃತಿ ಹೆಚ್ಚಾಗುತ್ತಿದೆ. ಮತ್ತೊಬ್ಬರ ಬರಹವನ್ನು ನಕಲು ಮಾಡುವುದರಿಂದ ಪತ್ರಕರ್ತರ ಸ್ವಂತಿಕೆ ಬೆಳೆಯುವುದಿಲ್ಲ. ಪತ್ರಕರ್ತರ ಪ್ರತಿಭೆ ಅವರ ಸ್ವಂತ ಚಿಂತನೆ, ವಿಷಯದ ಗ್ರಹಿಕೆ ಹಾಗೂ ವಿಶ್ಲೇಷಣಾ ಸಾಮರ್ಥ್ಯದಲ್ಲಿ ವ್ಯಕ್ತವಾಗಬೇಕು. ಸ್ವಂತಿಕೆ ಇಲ್ಲದೆ ಒಬ್ಬ ಯಶಸ್ವಿ ಪತ್ರಕರ್ತನಾಗಿ ರೂಪುಗೊಳ್ಳುವುದು ಕಷ್ಟ ಎಂದು ಹೇಳಿದರು.

ಪ್ರಸ್ತುತ ಸಂದರ್ಭದಲ್ಲಿ ಪತ್ರಿಕೆಗಳನ್ನು ನಡೆಸುವುದು ಹಾಗೂ ಸುದ್ದಿವಾಹಿನಿಗಳನ್ನು ನಿರ್ವಹಿಸುವುದು ಸುಲಭದ ಕೆಲಸವಲ್ಲ. ಮಾಧ್ಯಮ ಸಂಸ್ಥೆಗಳ ಅಸ್ತಿತ್ವ ಮತ್ತು ನಿರ್ವಹಣೆಯ ದೃಷ್ಟಿಯಿಂದ ಜನಪ್ರಿಯತೆಯೂ ಮುಖ್ಯವಾಗುತ್ತದೆ. ಆದರೆ ಜನಪ್ರಿಯತೆ ಗಳಿಸುವ ಪ್ರಯತ್ನದಲ್ಲಿ ಜವಾಬ್ದಾರಿಯನ್ನು ಮರೆಯಬಾರದು. ಸುದ್ದಿ ಅಥವಾ ಲೇಖನ ಪ್ರಕಟಿಸುವಾಗ ಅದರ ಸತ್ಯಾಸತ್ಯತೆ ಹಾಗೂ ಪರಿಣಾಮಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಡಾ. ಕೆ. ಗೋವಿಂದರಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ್ ತಗಡೂರು, ಹಿರಿಯ ಪತ್ರಕರ್ತರು ಹಾಗೂ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಮಾಜಿ‌ ಸಂವಹನ ಸಲಹೆಗಾರ ಪಂಕಜ್ ಪಚೌರಿ, ಸುದರ್ಶನ್ ಚನ್ನಂಗಿಹಳ್ಳಿ, ಎಸ್.ಆರ್.ರಾಮಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

Tags

JournalismDr. G. Parameshwara
share
ಪ್ರಕಾಶ್ ರಾಮಜೋಗಿ ಹಳ್ಳಿ
ಪ್ರಕಾಶ್ ರಾಮಜೋಗಿ ಹಳ್ಳಿ
Next Story
X