ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಕಾರ್ಯದರ್ಶಿಯಾಗಿ ಪತ್ರಕರ್ತ ದೀಪಕ್ ತಿಮ್ಮಯ್ಯ ನೇಮಕ

ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಮತ್ತು ಮಾಧ್ಯಮ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಗುರುವಾರ ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದು, ‘ತಾವು ಕೂಡಲೇ ಜವಾಬ್ದಾರಿಯನ್ನು ವಹಿಸಿಕೊಂಡು ರಾಜ್ಯ-ಜಿಲ್ಲಾ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷ ಸಂಘಟನೆ, ಬಲವರ್ಧನೆಗೆ ಎಲ್ಲರ ಸಹಕಾರದೊಂದಿಗೆ ತಮಗೆ ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
Next Story





