Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯಕ್ಕೆ...

ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯಕ್ಕೆ ಬ್ರೇಕ್ ಹಾಕಲು ಜೆ.ಪಿ.ನಡ್ಡಾ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Jan 2025 8:21 PM IST
share
ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯಕ್ಕೆ ಬ್ರೇಕ್ ಹಾಕಲು ಜೆ.ಪಿ.ನಡ್ಡಾ ಸೂಚನೆ

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯವನ್ನು ಕೂಡಲೇ ನಿಲ್ಲಿಸಿ, ಪಕ್ಷ ಸಂಘಟನೆ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು ಎಂದು ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರು, ರಾಜ್ಯ ಬಿಜೆಪಿ ಮುಖಂಡರಿಗೆ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ.

ಶುಕ್ರವಾರ ಹೊಸದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಜೆ.ಪಿ.ನಡ್ಡಾ, ಬಿಜೆಪಿಯ ಬಣ ರಾಜಕೀಯಕ್ಕೆ ಅಂತ್ಯ ಹಾಡಿ ಎಲ್ಲ ಸಮಸ್ಯೆಗಳಿಗೂ ಪರಿಹಾರ ಹುಡುಕಲು ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಪಕ್ಷದ ಮಟ್ಟದಲ್ಲಿ ಯಾವ ತೀರ್ಮಾನಗಳು ಆಗಬೇಕು, ಯಾವ ರೀತಿ ಪಕ್ಷದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂಬ ಕುರಿತು ಸಮಾಲೋಚನೆ ನಡೆಸಿದ್ದಾರೆಂದು ಗೊತ್ತಾಗಿದೆ.

ನಗರದ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿರುವ ಜೆ.ಪಿ.ನಡ್ಡಾ ಅವರನ್ನು ರಾಜ್ಯ ಹಲವು ನಾಯಕರು ಭೇಟಿ ಮಾಡಿ ಬಿಜೆಪಿಯಲ್ಲಿನ ಬಣ ರಾಜಕೀಯದಿಂದ ಪಕ್ಷ ಸಂಘಟನೆಗೆ ಆಗುತ್ತಿರುವ ತೊಂದರೆಯ ಬಗ್ಗೆ ಗಮನ ಸೆಳೆದಿದ್ದು, ಇದರಿಂದ ಪಕ್ಷದ ವರ್ಚಸ್ಸಿಗೂ ಧಕ್ಕೆಯಾಗಿದೆ. ಇದಕ್ಕೆ ಪರಿಹಾರ ದೊರಕಿಸಿಕೊಡಬೇಕೆಂಬ ಮನವಿ ಮಾಡಿದ್ದು, ನಾಯಕರುಗಳ ಅಹವಾಲುಗಳನ್ನು ಆಲಿಸಿರುವ ಜೆ.ಪಿ. ನಡ್ಡಾ ಬಣ ರಾಜಕೀಯಕ್ಕೆ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕರುಗಳಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು, ಜೆ.ಪಿ.ನಡ್ಡಾ ಅವರನ್ನು ಖುದ್ದು ಭೇಟಿ ಮಾಡಿದ್ದು, ಪ್ರತ್ಯೇಕ ಸಮಾಲೋಚನೆ ನಡೆಸಿದ್ದರು. ಅಲ್ಲದೆ, ಪಕ್ಷದಲ್ಲಿನ ಭಿನ್ನಮತೀಯ ನಾಯಕರು ಕೈಗೊಂಡಿರುವ ವಕ್ಫ್ ಆಸ್ತಿಗೆ ಸಂಬಂಧಿಸಿದ ಹೋರಾಟದ ಬಗ್ಗೆಯೂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಭಿನ್ನರ ವಿರುದ್ಧ ದೂರು: ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಇತರ ನಾಯಕರು ವಕ್ಫ್ ಹೋರಾಟ ನಡೆಸುತ್ತಿರುವ ಭಿನ್ನರ ಬಗ್ಗೆ ದೂರು ನೀಡಿದ್ದು, ಭಿನ್ನರ ಪ್ರತ್ಯೇಕ ಹೋರಾಟಗಳಿಂದ ಪಕ್ಷ ಸಂಘಟನೆಗೆ ಅಡ್ಡಿಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಿ ಎಂದು ಮನವಿ ಮಾಡಿದರು ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X