Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಔದ್ಯೋಗಿಕ ಪ್ರಪಂಚಕ್ಕೆ ಬೇಕಾದ ತಾಂತ್ರಿಕ...

ಔದ್ಯೋಗಿಕ ಪ್ರಪಂಚಕ್ಕೆ ಬೇಕಾದ ತಾಂತ್ರಿಕ ಕೌಶಲ್ಯಗಳು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿಲ್ಲ: ನ್ಯಾ.ನಾಗಮೋಹನ್ ದಾಸ್

ವಾರ್ತಾಭಾರತಿವಾರ್ತಾಭಾರತಿ9 May 2026 7:29 PM IST
share
ಔದ್ಯೋಗಿಕ ಪ್ರಪಂಚಕ್ಕೆ ಬೇಕಾದ ತಾಂತ್ರಿಕ ಕೌಶಲ್ಯಗಳು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿಲ್ಲ: ನ್ಯಾ.ನಾಗಮೋಹನ್ ದಾಸ್

ಬೆಂಗಳೂರು, ಮೇ 9: ದೇಶದಲ್ಲಿ ಪ್ರತಿವರ್ಷ ಸುಮಾರು 50 ಲಕ್ಷ ಪದವೀಧರರು ಹೊರಬರುತ್ತಿದ್ದು ಅದರಲ್ಲಿ ಕೇವಲ ಶೇ.30ರಷ್ಟು ಪದವೀಧರರು ಮಾತ್ರ ಉದ್ಯೋಗಕ್ಕೆ ಅರ್ಹರಾಗುತ್ತಿದ್ದಾರೆ. ಉಳಿದವರು ನಿರುದ್ಯೋಗಿಗಳಾಗಿದ್ದಾರೆ. ಇದಕ್ಕೆಲ್ಲ ಕಾರಣ ಇಂದಿನ ಔದ್ಯೋಗಿಕ ಪ್ರಪಂಚಕ್ಕೆ ಬೇಕಾದ ತಾಂತ್ರಿಕ ಕೌಶಲ್ಯಗಳು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಇಲ್ಲದಿರುವುದು ಎಂದು ಹೈಕೋರ್ಟ್‍ನ ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಕಳವಳ ವ್ಯಕ್ತಪಡಿಸಿದರು.

ಶನಿವಾರ ನಗರದ ಕೆ.ಆರ್.ಪುರದಲ್ಲಿರುವ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಎಂಬಿಎ, ಎಂಸಿಎ ಮತ್ತು ಎಂಟೆಕ್ ಸ್ನಾತಕೋತ್ತರ ಪದವಿ ಪೂರೈಸಿದ ಸುಮಾರು 250 ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.

ಇಂದಿನ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಅಸಂಖ್ಯಾತ ಉದ್ಯೋಗಗಳು ಲಭ್ಯವಿವೆ. ಆದರೆ ಅದಕ್ಕೆ ಬೇಕಾದ ಕೌಶಲ್ಯಗಳು ಇಂದಿನ ಪದವೀಧರರಲ್ಲಿ ಇಲ್ಲವಾಗಿದೆ. ಆದುದರಿಂದ, ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕಾಗಿದೆ. ಹಾಗೆ ವಿದ್ಯಾರ್ಥಿಗಳು ತಮ್ಮ ಶಿಕ್ಷಣದೊಂದಿಗೆ ಅಗತ್ಯ ಕೌಶಲ್ಯಗಳನ್ನು ಕಲಿಯಬೇಕೆಂದು ಕರೆ ನೀಡಿದರು.

ಕೇಂಬ್ರಿಡ್ಜ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಿ.ಕೆ.ಮೋಹನ್ ಮಾತನಾಡಿ, ನಮ್ಮ ಸಂಸ್ಥೆಯು ಅಂತರ್‍ರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಹೊಂದಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಎಂಬ ಮಹದಾಸೆಯನ್ನು ಹೊಂದಿದೆ. ನಮ್ಮಲ್ಲಿ ಕಲಿತ ವಿದ್ಯಾರ್ಥಿಗಳು ಕೇವಲ ಉದ್ಯೋಗಸ್ಥರಾಗದೆ ಉದ್ಯೋಗದಾತರಾಗಿ ನೂರಾರು ಜನರಿಗೆ ಉದ್ಯೋಗ ನೀಡುವಂತವರಾಗಬೇಕು ಎಂದು ಹಾರೈಸಿದರು.

ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಬಿ.ವಿ.ರವಿಶಂಕರ್ ಮಾತನಾಡಿ, ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯವು ಶಿಕ್ಷಣವಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಮುಂದೆ ತಮ್ಮದೆ ಸಂಸ್ಥೆಗಳನ್ನು ಸ್ಥಾಪಿಸಲು ಬೇಕಾದ ಸಲಹೆ, ಸಹಕಾರ ಮತ್ತು ನೆರವನ್ನು ನೀಡಲಾಗುವುದು. ಇದಕ್ಕಾಗಿ, ಸಂಸ್ಥೆಯ ಆವರಣದಲ್ಲಿ ಹತ್ತಾರು ನವೋದ್ಯಮ ಆ್ಯಪ್‍ಗಳು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಅಗತ್ಯವಾದ ತರಬೇತಿ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದ ಸಲಹೆಗಾರ ಡಾ.ಕೆ.ಎನ್.ಬಾಲಸುಬ್ರಹ್ಮಣ್ಯ ಮೂರ್ತಿ, ಸಹಾಯಕ ನಿರ್ದೇಶಕಿ ಡಾ.ಇಂದುಮತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ನಿತಿನ್ ಮೋಹನ್, ಪ್ರಾಂಶುಪಾಲ ಡಾ.ನಾಗೇಶ್, ಡೀನ್ ಡಾ.ಸುಬ್ರಹ್ಮಣ್ಯ ಕಟ್ಟೆ, ಡಾ.ಶಿವಪಂಚಾಕ್ಷರಿ, ಪರೀಕ್ಷಾ ನಿಯಂತ್ರಕ ಡಾ.ಮಂಜುನಾಥ ರೆಡ್ಡಿ ಮತ್ತು ಎಲ್ಲ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

Tags

Justice Nagamohan Das
share
ವಾರ್ತಾಭಾರತಿ
ವಾರ್ತಾಭಾರತಿ
Next Story
X