Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮ್ಯಾನುಯಲ್ ಸ್ಕ್ಯಾವೆಂಜರ್ ಕಾಯ್ದೆ...

ಮ್ಯಾನುಯಲ್ ಸ್ಕ್ಯಾವೆಂಜರ್ ಕಾಯ್ದೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ : ನ್ಯಾ.ನಾಗಮೋಹನ್ ದಾಸ್

ವಾರ್ತಾಭಾರತಿವಾರ್ತಾಭಾರತಿ19 Feb 2025 8:57 PM IST
share
ಮ್ಯಾನುಯಲ್ ಸ್ಕ್ಯಾವೆಂಜರ್ ಕಾಯ್ದೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ : ನ್ಯಾ.ನಾಗಮೋಹನ್ ದಾಸ್

ಬೆಂಗಳೂರು : ಭಾರತದಲ್ಲಿ ಜಾರಿಗೆ ತಂದಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿಲ್ಲ ಎಂದು ಒಳಮೀಸಲಾತಿ ಜಾರಿಗಾಗಿ ಏಕಸದಸ್ಯ ಆಯೋಗದ ಅಧ್ಯಕ್ಷ, ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ತಿಳಿಸಿದ್ದಾರೆ.

ಬುಧವಾರ ನಗರದ ರಾಷ್ಟ್ರೀಯ ಕಾನೂನು ಶಾಲೆ ವಿವಿಯ ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ, ಸಫಾಯಿ ಕರ್ಮಚಾರಿ ಕಾವಲು ಸಮಿತಿ, ತಮಟೆ, ಸಖಿ ಟ್ರಸ್ಟ್ ಸಹಯೋಗದೊಂದಿಗೆ ಮಲ ಹೊರುವ ವೃತ್ತಿಯಲ್ಲಿ ನೇಮಕ ನಿಷೇಧ ಹಾಗೂ ಅವರ ಪುನರ್ವಸತಿ ಕಾಯ್ದೆ 2013ರ ಅನುಷ್ಠಾನ ಮತ್ತು ಸವಾಲುಗಳು ಕುರಿತ ‘ರಾಷ್ಟೀಯ ಸಮಾವೇಶ’ದಲ್ಲಿ ಮಾತನಾಡಿದ ಅವರು, ಮ್ಯಾನುಯಲ್ ಸ್ಕ್ಯಾವೆಂಜರ್ ವೃತ್ತಿಗೂ ಮತ್ತು ಜಾತಿಗೆ ಸಂಬಂಧವಿದೆ. ವಂಶ ಪಾರಂಪರಿಕವಾಗಿ ಕೆಲವೇ ಕೆಲವು ಜಾತಿಗಳು ಈ ವೃತ್ತಿಯನ್ನುಮಾಡುತ್ತಾ ಬಂದಿವೆ. ಅದರಲ್ಲೂ ಶೇ.90ರಷ್ಟು ಜನ ಒಂದೇ ಜಾತಿಯವರಾಗಿದ್ದಾರೆ. ಕೇವಲ ಒಂದೇ ಜಾತಿಯವರು ಈ ಕೆಲಸ ಮಾಡುತ್ತಿರುವುದು ಏಕೆ ಎಂಬುವುದು ಪ್ರಶ್ನೆಯಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದ್ದರೂ ಮಲಹೊರುವ ಪದ್ಧತಿ ಹಾಗೆಯೇ ಮುಂದುವರೆದಿದೆ. ಭಾರತವು ಎಲ್ಲ ರಂಗಗಳಲ್ಲಿ ಅಭಿವೃದ್ಧಿ ಯಾಗುತ್ತಿದ್ದರೂ ಈ ರೀತಿಯ ವೃತ್ತಿಗಳನ್ನು ಯಾಕೆ ಯಾಂತ್ರೀಕರಣಗೊಳಿಸುತ್ತಿಲ್ಲ. 2013ರ ಕಾಯ್ದೆ ಅನುಸಾರ ಸಮಗ್ರವಾದ ಸಮೀಕ್ಷೆಯನ್ನು ಸರಕಾರಗಳು ಕೈಗೊಳ್ಳಬೇಕು. ಕಾಯ್ದೆಯಡಿಯಲ್ಲಿ ಸಮಗ್ರ ಪುನರ್ವಸತಿಯನ್ನು ನೀಡಬೇಕು. ಜನರೂ ಸಹ ತಮ್ಮ ಆಲೋಚನೆಗಳನ್ನು ಬದಲಿಸಿಕೊಳ್ಳಬೇಕು. ಅನಿವಾರ್ಯತೆಗಳಿದ್ದರೂ ಈ ವೃತ್ತಿಯನ್ನು ಮಾಡಬಾರದು. ಇತರೆ ಉದ್ಯೋಗಳನ್ನು ಆಯ್ಕೆಮಾಡಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದು ತಿಳಿಸಿದರು.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞೆ ಅಶ್ವಿನಿ ಕೆ.ಪಿ. ಮಾತನಾಡಿ, ಮ್ಯಾನುಯಲ್ ಸ್ಕ್ಯಾವೆಂಜರ್ ಕುರಿತು ಅಂತರ್‌ ರಾಷ್ಟ್ರೀಯಮಟ್ಟದಲ್ಲಿ ಚರ್ಚಿಸಬೇಕಾಗುತ್ತದೆ. ಅದಕ್ಕೆ ಪೂರಕವಾಗಿ ನಾವೆಲ್ಲರೂ ಕೆಲಸ ಮಾಡೋಣ. ಭಾರತದಲ್ಲಿ ಜಾತಿ ಆಧಾರಿತ ವೃತ್ತಿಗಳಿಂದ ನಾವು ಹೊರ ಬರಬೇಕಾಗಿದೆ. ಅಂತರ್‌ ರಾಷ್ಟ್ರೀಯಮಟ್ಟದಲ್ಲಿ ಇದೇ ರೀತಿಯ ತಾರತಮ್ಯಗಳನ್ನು ಚರ್ಚಿಸಲಾಗುತ್ತದೆ. ಅದಕ್ಕೆ ಪೂರಕವಾಗಿ ನಾವು ಭಾರತದಲ್ಲಿರುವ ಜಾತಿ ಆಧಾರಿತವಿಷಯಗಳನ್ನು ಅಂತರ್‌ ರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆಗಳಲ್ಲಿ ಮತ್ತು ವಿಶ್ವಸಂಸ್ಥೆಯಲ್ಲಿ ಚರ್ಚಿಸಲು ಪ್ರಯತ್ನಿಸಬೇಕಾಗಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ರಾಷ್ಟ್ರೀಯ ಕಾನೂನು ಶಾಲೆಯ ಸಾರ್ವಜನಿಕ ನೀತಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಬಾಬು ಮ್ಯಾಥೂ, ಪ್ರಾಧ್ಯಾಪಕ ಚಂದ್ರಶೇಖರ್, ಹಿರಿಯ ಸಾಹಿತಿ ಡಾ.ಎಲ್.ಹನುಮಂತಯ್ಯ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X