ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನ್ಯಾ.ತಾಜ್ ಅಲಿ ಮೌಲಾಸಾಬ್ ನದಾಫ್ ಅಧಿಕಾರ ಸ್ವೀಕಾರ

Photo Credit : kannada.barandbench
ಬೆಂಗಳೂರು : ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ತಾಜ್ ಅಲಿ ಮೌಲಾಸಾಬ್ ನದಾಫ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅಧಿಕಾರ ಪ್ರಮಾಣವಚನ ಬೋಧಿಸಿದರು. ಹೆಚ್ಚುವರಿ ನ್ಯಾಯಾಧೀಶರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ವೃತ್ತಿ ಜೀವನದಲ್ಲಿ ತಮಗೆ ಸಹಕಾರ ಕೊಟ್ಟ ಎಲ್ಲರನ್ನೂ ನೆನೆದು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು, ವಕೀಲರು, ನ್ಯಾಯಾಂಗದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Next Story





