Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಐ, ತಂತ್ರಜ್ಞಾನದ ಭಾಷೆಯಾಗಿ ಕನ್ನಡ...

ಎಐ, ತಂತ್ರಜ್ಞಾನದ ಭಾಷೆಯಾಗಿ ಕನ್ನಡ ಬಳಕೆಯಾಗಬೇಕು : ಸಿಎಂ ಡಿ.ಕೆ.ಶಿವಕುಮಾರ್

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ1 Nov 2026 9:27 PM IST
share
ಎಐ, ತಂತ್ರಜ್ಞಾನದ ಭಾಷೆಯಾಗಿ ಕನ್ನಡ ಬಳಕೆಯಾಗಬೇಕು : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಕನ್ನಡ ಭಾಷೆ ಕಲಿಯುವ ಅನಿವಾರ್ಯತೆ ಸೃಷ್ಟಿ ಮಾಡಬೇಕು. ಕನ್ನಡದ ಬಲದೊಂದಿಗೆ ಜಗತ್ತನ್ನು ಗೆಲ್ಲುವುದು ಮಾತ್ರವಲ್ಲದೆ, ಕನ್ನಡವು ಕೃತಕ ಬುದ್ಧಿಮತ್ತೆ (ಎಐ) ಭಾಷೆಯಾಗಿ ಬೆಳೆಯಬೇಕು. ಜತೆಗೆ ವಿಜ್ಞಾನದ, ಸ್ಟಾರ್ಟ್‌ಅಪ್‌ಗಳ, ಡಿಜಿಟಲ್ ಯುಗದ ಭಾಷೆಯಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

ರವಿವಾರ ನಗರದ ರವೀಂದ್ರ ಕಲಾಕ್ಷೇತ್ರ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರಿಗೆ ‘ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ-2026’ದಲ್ಲಿ ಪ್ರಶಸ್ತಿ ಪ್ರದಾನಿಸಿ ಮಾತನಾಡಿದ ಅವರು, ‘ಭಾರತದ ಬಲ ಕರ್ನಾಟಕ ಎಂಬ ಪರಿಕಲ್ಪನೆ’ಯೊಂದಿಗೆ ನಾವು ಬೆಳೆಯಬೇಕು ಎಂಬುದು ನಮ್ಮ ದೂರದೃಷ್ಟಿ. ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ಭಾರತದ ಹೆಬ್ಬಾಗಿಲಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನ ಮೂಲಕ ಭಾರತವನ್ನು ನೋಡಲಾಗುತ್ತಿದೆ ಎಂದರು.

ನುಡಿ ಉಳಿದರೆ ನಾಡು ಉಳಿಯಲಿದೆ ಹಾಗೂ ನಾಡು ಉಳಿದರೆ ನುಡಿಯೂ ಉಳಿಯಲಿದೆ. 'ಜಗದ ಏಳಿಗೆ ಆಗುವುದೇ ಕನ್ನಡದಿಂದ ಎನ್ನುವ ವರಕವಿ ಬೇಂದ್ರೆಯವರ ಮಾತು ನಿಜವಾಗುತ್ತಿದೆ. ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಪಾಲು ಶೇ.5.5ರಷ್ಟಿದೆ. ದೇಶದ ಆರ್ಥಿಕತೆಯಲ್ಲಿ ರಾಜ್ಯದ ಪಾಲು ಶೇ.9.19ರಷ್ಟಿದೆ ಎಂದ ಅವರು, ಇಡೀ ರಾಜ್ಯ ಒಗ್ಗಟ್ಟಾಗಿ ನಾಡಧ್ವಜವನ್ನು ಅಧಿಕೃತಗೊಳಿಸುವ ಕುರಿತು ಕೇಂದ್ರಕ್ಕೆ ಸಂದೇಶ ರವಾನಿಸೋಣ. ಸಂವಿಧಾನದಲ್ಲಿ ನಾಡಧ್ವಜ ಹೊಂದಬಾರದು ಎಂದು ಎಲ್ಲಿಯೂ ಹೇಳಿಲ್ಲ. ರಾಷ್ಟ್ರಧ್ವಜದ ಕೆಳಗೆ ನಾಡಧ್ವಜ ಹಾರುವಂತೆ ನಾವು ಹೆಜ್ಜೆ ಇಡೋಣ. ಕನ್ನಡ, ಕರ್ನಾಟಕದ ಗೌರವ ಹೆಚ್ಚಿಸೋಣ ಎಂದು ಅವರು ಹೇಳಿದರು.

ಕನ್ನಡಿಗರ ಹಕ್ಕಿನ ಪ್ರಶ್ನೆ ಬಂದಾಗ ಪಕ್ಷಭೇದ ಇರಬಾರದು. ಕನ್ನಡದ ವಿಚಾರದಲ್ಲಿ ರಾಜಕೀಯ ಬೇಡ. ಕನ್ನಡವೇ ನಮ್ಮ ನಾಡಿನ ಬದ್ಧತೆ. ನಾವೆಲ್ಲರೂ ಸಂವಿಧಾನದ ಚೌಕಟ್ಟಿನಲ್ಲಿ, ಶಾಂತಿಯುತವಾಗಿ ಮತ್ತು ಜನಜಾಗೃತಿಯ ಮೂಲಕ ಕನ್ನಡ ಕಟ್ಟುವುದು, ಕನ್ನಡ, ಕರ್ನಾಟಕದ ಗೌರವ ಹೆಚ್ಚಿಸುವುದು ನಮ್ಮೆಲ್ಲರ ಕರ್ತವ್ಯ. ಈ ಮೊದಲೇ ಹೇಳಿದಂತೆ ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜ ಸ್ಥಾನಮಾನ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಈ ವಿಚಾರವಾಗಿ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದೂ ಅವರು ತಿಳಿಸಿದರು.

2018ರಲ್ಲಿ ಭಾಷೆ ಸಮೀಕ್ಷೆ ಪ್ರಕಾರ ದೇಶದಲ್ಲಿ ಅತಿ ಹೆಚ್ಚು ಮಾತನಾಡುವವರ ಭಾಷೆಯಲ್ಲಿ ಕನ್ನಡಕ್ಕೆ 8ನೇ ಸ್ಥಾನ ಸಿಕ್ಕಿದೆ. 2011 ಜನಗಣತಿ ಪ್ರಕಾರ ಬೆಂಗಳೂರಲ್ಲಿ 107 ಭಾಷೆ ಮಾತನಾಡುವ ಜನರಿದ್ದಾರೆ. ಶೇ 44.5 ರಷ್ಟು ಜನ ಮಾತ್ರ ಕನ್ನಡ ಮಾತೃಭಾಷೆ ಮಾತನಾಡುವವರು ಇದ್ದಾರೆ. ಶೇ.90 ರಷ್ಟು ಕನ್ನಡ ಮಾತನಾಡುತ್ತಾ ಇದ್ದ ಬೆಂಗಳೂರಲ್ಲಿ ಕಡಿಮೆಯಾಗಿದ್ದಾರೆ. ಈ ಬಗ್ಗೆ ನಾವೆಲ್ಲರೂ ಆಲೋಚನೆ ಮಾಡಬೇಕು. 2011 ರಲ್ಲಿ ನಡೆದ ಸಮೀಕ್ಷೆ ಪ್ರಕಾರ ಬೆಂಗಳೂರಲ್ಲಿ 44ರಿಂದ 47 ಲಕ್ಷ ಜನ ವಲಸಿಗರು ಇದ್ದಾರೆ. ವಲಸೆ ಬಂದ ಶೇ.78ಕ್ಕಿಂತ ಹೆಚ್ಚು ಜನ ವಾಪಸ್ ಹೋಗ್ತಾ ಇಲ್ಲ. ದೇಶದ ಯಾವ ನಗರದಲ್ಲೂ ಇಷ್ಟು ವೈವಿಧ್ಯತೆ ಇಲ್ಲ ಎಂದು ಅವರು ಹೇಳಿದರು.

ಅನ್ಯಭಾಷೆಗಳು ಅತಿಥಿಯಾಗಿ ಇರಬೇಕು. ಕನ್ನಡ ಭಾಷೆ ಅಧಿಪತಿಯಾಗಿ ಇರಬೇಕು. ಕನ್ನಡ ಪ್ರೀತಿಸುವುದು ಎಂದರೆ ಬೇರೆ ಭಾಷೆಯನ್ನು ದ್ವೇಷಿಸುವುದಲ್ಲ. ಎಲ್ಲ ಭಾಷೆಗಳಿಗೂ ಗೌರವ ನೀಡುವುದು. ಕಚೇರಿ, ವ್ಯಾಪಾರದ ಸಮಯದಲ್ಲಿ ಸಾರ್ವಜನಿಕ ಜೀವನದಲ್ಲಿ, ಎಲ್ಲ ಕಡೆ ಕನ್ನಡ ಸಹಜವಾಗಿ ಬಳಕೆಯಾಗಬೇಕು. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮನಾಗಿರಬೇಕು. ಕನ್ನಡ ಜನರ ಬದುಕಿನ ಭಾಷೆಯಾಗಬೇಕು. ಅದೇ ರೀತಿ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಜೊತೆಗೆ ಕರ್ನಾಟಕ ಏಕೀಕರಣ ಆಗಬೇಕು ಎಂದು ದನಿ ಎತ್ತಿದ್ದೂ ಕಾಂಗ್ರೆಸ್ ಪಕ್ಷ. ಕರ್ನಾಟಕ ಎಂದು ನಾಮಕರಣ ಮಾಡಿದ್ದೂ ಕಾಂಗ್ರೆಸ್ ಪಕ್ಷ. ಇದರೊಟ್ಟಿಗೆ ನಾ.ಸು.ಹರ್ಡಿಕರ್, ರಂಗನಾಥ್ ದಿವಾಕರ್ ಅವರು ಕರ್ನಾಟಕ ಏಕೀಕರಣದ ಬಗ್ಗೆ ಸ್ವಾತಂತ್ರ್ಯ ಪೂರ್ವದಲ್ಲೇ ದನಿ ಎತ್ತಿದ್ದರು. ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದರು. ಹೀಗೆ ಕನ್ನಡ ಕಟ್ಟಿದ ಸಾವಿರಾರು ಜನರನ್ನು ಈ ಸಂದರ್ಭದಲ್ಲಿ ನೆನೆಯಲೇ ಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷ ಜಿ.ಎಸ್.ಪಾಟೀಲ್, ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಇಲಾಖೆಯ ಕಾರ್ಯದರ್ಶಿ ಎನ್.ಮಂಜುಶ್ರೀ, ನಿರ್ದೇಶಕಿ ಡಾ.ಕೆ.ಎಂ.ವಸುಂಧರಾ ಸೇರಿದಂತೆ ಪ್ರಮುಖರಿದ್ದರು.

ಪುರಸ್ಕೃತರೊಂದಿಗೆ ಸಂತೋಷ ಕೂಟ :

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಾಧಕರ ಗೌರವಾರ್ಥ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ರವಿವಾರ ಸಂಜೆ ವಿಶೇಷ ಸಂತೋಷ ಕೂಟವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರೊಂದಿಗೆ ಆತ್ಮೀಯವಾಗಿ ಅವರ ಸಾಧನೆ ಹಾಗೂ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಗೆ ಸಲ್ಲಿಸಿರುವ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು.

ಮಾಸ್ತಿ ಅವರ ಮಾತೃಭಾಷೆ ತಮಿಳು. ಬೇಂದ್ರೆ ಅವರ ಮಾತೃಭಾಷೆ ಮರಾಠಿ. ಕುವೆಂಪು ಅವರು ಮೊದಲು ಕವನ ಬರೆದಿದ್ದು ಇಂಗ್ಲೀಷ್‌ ನಲ್ಲಿ. ಬೂಕರ್ ಪ್ರಶಸ್ತಿಗಳಿಸಿದ ಬಾನು ಮುಷ್ತಾಕ್ ಅವರ ಮನೆ ಭಾಷೆಉರ್ದು. ಆದರೆ ಇವರೆಲ್ಲರೂ ಉಸಿರಾಡಿದ್ದು, ಹೆಸರು ಮಾಡಿದ್ದು ಕನ್ನಡದಲ್ಲಿ ಎಂದು ಡಿ.ಕೆ.ಶಿವಕುಮಾರ್ ನುಡಿದರು.

ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುವ ಪ್ರಕ್ರಿಯೆ, ಪರಿ ಸ್ವಾಗತಿಸುವೆ.ರಾಜ್ಯ ಸರಕಾರದ ಇಂತಹ ಬೆಳವಣಿಗೆಯಿಂದ ರಾಜ್ಯೋತ್ಸವ ಪ್ರಶಸ್ತಿಯ ಮೌಲ್ಯ ಮತ್ತಷ್ಟು ಹೆಚ್ಚಿದೆ ಎಂದು ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರ ಪರವಾಗಿ ಹಿರಿಯ ನ್ಯಾಯವಾದಿ ಬಿ.ವಿ.ಆಚಾರ್ಯ ನುಡಿದರು.

ಶೇ.60ರಷ್ಟು ಕನ್ನಡ ಕಾಣದಿದ್ದರೆ ಕಾನೂನು ಕ್ರಮ : ಸಚಿವ ತಂಗಡಗಿ ಎಚ್ಚರಿಕೆ

ಬೆಂಗಳೂರು : ನಮ್ಮ ಸರಕಾರ ‘ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯ್ದೆ' ಮೂಲಕ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿದೆ.ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ ನೀಡಿದ್ದಾರೆ

ರವಿವಾರ ನಗರದ ರವೀಂದ್ರ ಕಲಾಕ್ಷೇತ್ರ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ‘ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ-2026’ದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನಿಸಿ ಮಾತನಾಡಿದ ಅವರು, ಇಂದಿಗೂ ಹಲವು ನಗರ ಪ್ರದೇಶಗಳಲ್ಲಿ, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಬಳಕೆಯನ್ನು ನಿರ್ಲಕ್ಷಿಸುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ನಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಕನ್ನಡ ಕೇವಲ ಮಾತನಾಡುವ ಭಾಷೆಯಾಗಬಾರದು. ಅದು ಅನ್ನದ ಭಾಷೆಯೂ ಆಗಬೇಕು. ಹೀಗಾಗಿ ಕನ್ನಡ ಮಾತೃ ಭಾಷೆ ಎಂಬ ಕಾರಣಕ್ಕೆ ಉದ್ಯೋಗ ನಿರಾಕರಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಇತ್ತೀಚೆಗೆ ಮಹಿಳೆಯೊಬ್ಬರು ಕನ್ನಡ ಭಾಷೆಯಲ್ಲಿ ತಮ್ಮ ವ್ಯಕ್ತಿ ಪರಿಚಯ ಕೊಟ್ಟ ಕಾರಣಕ್ಕೆ ಉದ್ಯೋಗ ನೀಡಲು ನಿರಾಕರಿಸಿದರು ಎಂದು ಹೇಳಿಕೆ ಕೊಟ್ಟಿದ್ದರು. ನಮ್ಮ ಸರಕಾರ ಇಂತಹದ್ದನ್ನೆಲ್ಲ ಸಹಿಸಲ್ಲ. ಮುಂದೆ ಇಂತಹದು ಮರುಕಳಿಸಿದರೆ ಕನ್ನಡವನ್ನು ನಿರ್ಲಕ್ಷ್ಯ ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಪರಂಪರೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ಸರಕರದ ಬದ್ಧತೆಯಾಗಿದೆ. ನಾಡಿನ ಮೂಲೆ ಮೂಲೆಗಳಲ್ಲಿರುವ ಕಲಾವಿದರು, ಸಾಹಿತಿಗಳು ಮತ್ತು ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ರಾಜ್ಯೋತ್ಸವದ ದಿನ ಕನ್ನಡದ ಬಾವುಟ ಹಾರಿಸಿ, ಘೋಷಣೆ ಕೂಗುವುದಷ್ಟೇ ನಮ್ಮ ಕನ್ನಡಾಭಿಮಾನ ಆಗಬಾರದು. ವರ್ಷದ 365 ದಿನಗಳೂ ಕನ್ನಡವನ್ನು ಪ್ರೀತಿಸಬೇಕು, ಬಳಸಬೇಕು ಮತ್ತು ಬೆಳೆಸಬೇಕು. ಜಾತಿ, ಧರ್ಮ, ಪ್ರದೇಶದ ಭೇದಗಳನ್ನು ಮರೆತು ಕನ್ನಡದ ಬಂಧದಲ್ಲಿ ಒಂದಾಗೋಣ ಎಂದು ಸಚಿವರು ಕರೆ ನೀಡಿದರು.

Tags

D.K.ShivakumartechnologyAIKannada
share
ವಾರ್ತಾಭಾರತಿ
ವಾರ್ತಾಭಾರತಿ
Next Story
X