Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೋರ್ಟ್ ಕಟ್ಟಡ, ನ್ಯಾಯಾಧೀಶರ ವಸತಿ...

ಕೋರ್ಟ್ ಕಟ್ಟಡ, ನ್ಯಾಯಾಧೀಶರ ವಸತಿ ಗೃಹಕ್ಕಾಗಿ 175 ಕೋಟಿ ರೂ.

ವಾರ್ತಾಭಾರತಿವಾರ್ತಾಭಾರತಿ7 March 2026 12:04 AM IST
share
ಕೋರ್ಟ್ ಕಟ್ಟಡ, ನ್ಯಾಯಾಧೀಶರ ವಸತಿ ಗೃಹಕ್ಕಾಗಿ 175 ಕೋಟಿ ರೂ.
ಎಸ್‍ಟಿ ಆಯೋಗ ರಚನೆ, 50 ಕೋಟಿ ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ

ಬೆಂಗಳೂರು : ನ್ಯಾಯಾಂಗ ವ್ಯವಸ್ಥೆಯನ್ನು ಸುಧಾರಣೆಗೊಳಿಸಲು ಮೂಲಭೂತ ಸೌಕರ್ಯಗಳಾದ ಕೋರ್ಟ್ ಕಟ್ಟಡ ಹಾಗೂ ನ್ಯಾಯಾಧೀಶರಿಗೆ ವಸತಿ ಗೃಹ ನಿರ್ಮಾಣಕ್ಕಾಗಿ 175 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕಳೆದ ಸಾಲಿನಲ್ಲಿ ವಿಶೇಷ ಲೋಕ್ ಅದಾಲತ್ಗಳನ್ನು ನಡೆಸಿ 2.82 ಕೋಟಿ ಸಿವಿಲ್ ಪ್ರಕರಣಗಳನ್ನು ಮತ್ತು 1,113 ಭೂಸ್ವಾಧೀನ ಪ್ರಕರಣಗಳನ್ನು ಅನುಕ್ರಮವಾಗಿ 9,978 ಕೋಟಿ ರೂ. ಮತ್ತು 132 ಕೋಟಿ ರೂ.ಗಳ ಪರಿಹಾರದ ಮೊತ್ತದೊಂದಿಗೆ ಇತ್ಯರ್ಥಪಡಿಸಲಾಗಿದೆ. ಜತೆಗೆ, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ನಿರ್ಮಾಣ ಮಾಡಲಾಗುವುದು ಎಂದು ಉಲ್ಲೇಖಿಸಿದರು.

ಕಾಗದರಹಿತ, ಸಮರ್ಥ ಮತ್ತು ನಾಗರಿಕ-ಕೇಂದ್ರಿತ ನ್ಯಾಯಾಂಗವನ್ನು ಜಾರಿಗೊಳಿಸಲು ಬೆಂಗಳೂರು, ಧಾರವಾಡ, ಕಲಬುರಗಿ ಮತ್ತು ಮೈಸೂರು ನಗರಗಳಲ್ಲಿ ಪ್ರಾಯೋಗಿಕವಾಗಿ ʻಇ-ಕೋರ್ಟ್ʼ ಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಅಡ್ವೋಕೇಟ್ ಜನರಲ್ ಕಚೇರಿಗೆ ಗ್ರಂಥಾಲಯ, ವಿ.ಸಿ. ಸೌಲಭ್ಯ ಒದಗಿಸಲು ಹಾಗೂ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಕಚೇರಿಗಳಲ್ಲಿನ ಸಿಸಿಎಂಎಸ್ ಮತ್ತು ಇ-ಫೈಲಿಂಗ್ ಗೆ ಅಗತ್ಯವಿರುವ ಮೂಲ ಸೌಕರ್ಯವನ್ನು ಉನ್ನತೀಕರಿಸಲು 5 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದರು.

ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಗೊಳಿಸಿ ಕಡಿಮೆ ಮಾಡಬಹುದಾಗಿದ್ದು, ಮಧ್ಯಸ್ಥಿಕೆಯಲ್ಲಿ ಆಸಕ್ತಿ ಇರುವ ನ್ಯಾಯಾಧೀಶರು ಮತ್ತು ವಕೀಲರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಸರಕಾರದಿಂದ ರಚಿಸಲ್ಪಡುವ ಎಲ್ಲ ಕಾನೂನುಗಳನ್ನು ಕನ್ನಡದಲ್ಲಿ ಸಿದ್ಧಪಡಿಸಲಾಗುವುದು. ಅಲ್ಲದೇ, ಕೇಂದ್ರ ಸರಕಾರವು ಇಲ್ಲಿಯವರೆಗೂ ಅಧಿನಿಯಮಿಸಿದ ಎಲ್ಲ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲಾಗುವುದು ಎಂದು ಅವರು ಪ್ರಕಟಿಸಿದರು.

ಎಸ್‍ಟಿ ಆಯೋಗ ರಚನೆ, 50 ಕೋಟಿ ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ

ಪರಿಶಿಷ್ಟ ಪಂಗಡದ ಸಮುದಾಯದವರ ಹಕ್ಕುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅವರ ದೂರು ಮತ್ತು ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡಗಳ ಆಯೋಗ ರಚಿಸಲಾಗುವುದು. ಜತೆಗೆ, ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ನಿರ್ದೇಶನಾಲಯದಡಿ ಬರುವ ನಿಗಮ ಮತ್ತು ಇತರೆ ಕಚೇರಿಗಳಿಗಾಗಿ ಬೆಂಗಳೂರಿನ ಸುಮನಹಳ್ಳಿಯಲ್ಲಿ “ಶ್ರೀ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ” ಸಂಕೀರ್ಣವನ್ನು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

2026-27ನೆ ಸಾಲಿನಲ್ಲಿ ಪರಿಶಿಷ್ಟ ಪಂಗಡದ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು. ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ, ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್, ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಸೌಲಭ್ಯಗಳನ್ನು ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಠ ನಾಲ್ಕು ಲಕ್ಷ ರೂ.ಗಳ ಸಹಾಯಧನ ನೀಡಲಾಗುವುದು ಎಂದರು.

ಪರಿಶಿಷ್ಟ ಪಂಗಡದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಆರೈಕೆಗಾಗಿ 119 ಮಹಿಳಾ ಕೇರ್‍ಟೇಕರ್ ಹುದ್ದೆಗಳನ್ನು ಮಂಜೂರು ಮಾಡಲಾಗುವುದು. ಇದಕ್ಕಾಗಿ 3 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದೂ ಅವರು ಉಲ್ಲೇಖಿಸಿದರು.

ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆ:

ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಇರುಳ, ಸೋಲಿಗ, ಜೇನುಕುರುಬ, ಕಾಡುಕುರುಬ, ಕುಡಿಯ, ಸಿದ್ದಿ ಮತ್ತು ಇತರೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ʻಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮʼವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

Tags

Karnataka Budget 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X