Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Karnataka Budget | ಅಲ್ಪಸಂಖ್ಯಾತರ...

Karnataka Budget | ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿಗಳ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ6 March 2026 11:46 AM IST
share
Karnataka Budget | ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿಗಳ ಸ್ಥಾಪನೆ
CBSE ಪಠ್ಯಕ್ರಮದಡಿ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳು ಆರಂಭಿಸಲು ಕ್ರಮ

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಪ್ರೋತ್ಸಾಹ ನೀಡುವುದಕ್ಕಾಗಿ ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ಮಂಡಿಸಿರುವ 2026-27ನೇ ಸಾಲಿನ ಬಜೆಟ್ ನಲ್ಲಿ ಅವರು ಅಲ್ಪ ಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಘೋಷಿಸಿದರು.

ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳನ್ನು CBSE ಪಠ್ಯಕ್ರಮದಡಿಯಲ್ಲಿ ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಹೆಚ್ಚಿನ ಬೇಡಿಕೆ ಇರುವ ಜಿಲ್ಲೆಗಳಲ್ಲಿ 150 ಸಂಖ್ಯಾಬಲದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗುವುದು. ಅದೇರೀತಿ ಹಾಲಿ ಕಾರ್ಯನಿರ್ವಹಿಸುತ್ತಿರುವ 25 ವಿದ್ಯಾರ್ಥಿ ನಿಲಯಗಳಲ್ಲಿ 50 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

2025-26ನೇ ಸಾಲಿನಲ್ಲಿ 117 ಮೌಲಾನಾ ಆಝಾದ್ ಮಾಧ್ಯಮ ಶಾಲೆಗಳು ಹಾಗೂ ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ 600 ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇನ್ನೂ 100 ಶಾಲೆಗಳನ್ನು 400 ಕೋಟಿ ರೂ.ಗಳ ವೆಚ್ಚದಲ್ಲಿ ಇದೇ ಮಾದರಿಯಲ್ಲಿ ಉನ್ನತೀಕರಿಸಲಾಗುವುದು.

ಪ್ರಸಕ್ತ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪೈಕಿ 25 ವಸತಿ ಶಾಲೆಗಳಲ್ಲಿ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ಪ್ರಾರಂಭಿಸಲಾಗುವುದು

ಎ.ಪಿ.ಜೆ -ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲಾಗುವುದು. ಅದೇರೀತಿ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳಲ್ಲಿ Center of Excellence ಸ್ಥಾಪಿಸಲಾಗುವುದು. ಅಲ್ಲದೇ 20 ವಸತಿ ಶಾಲೆಗಳಲ್ಲಿನ ಮಕ್ಕಳಿಗೆ CET/JEE/NEET ವಿಶೇಷ ತರಬೇತಿ ನೀಡಲಾಗುವುದು ಎಂದು ಪ್ರಕಟಿಸಿದರು.

ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ನಿರಂತರ ಕಲಿಕಾ ಅವಕಾಶಗಳನ್ನು ಒದಗಿಸಲು ಮತ್ತು ಜ್ಞಾನವನ್ನು ವೃದ್ಧಿಸಲು ಆಯ್ದ ವಕ್ಫ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.

ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಬೆಂಗಳೂರಿನಲ್ಲಿ 100 ಸಂಖ್ಯಾಬಲದ ಉದ್ಯೋಗಸ್ಥ ಮಹಿಳೆಯರ ನಾಲ್ಕು ವಸತಿ ನಿಲಯಗಳನ್ನು ಪ್ರಾರಂಭಿಸಲಾಗುವುದು

ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ

ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ 6,000 ರೂ.ಗಳ ಮಾಸಿಕ ಗೌರವಧನ ನೀಡಲಾಗುವುದು

ಅಲ್ಪಸಂಖ್ಯಾತ ಸಮುದಾಯದ ನಿರ್ಗತಿಕ 1 100 ಸಂಖ್ಯಾಬಲದ ಎರಡು ಮಹಿಳಾ ವೃದ್ಧಾಶ್ರಮಗಳನ್ನು ಪ್ರಾರಂಭಿಸುವುದಕ್ಕೆ ನೆರವು ನೀಡಲಾಗುವುದು

ಅಲ್ಪಸಂಖ್ಯಾತರ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ತಾಂತ್ರಿ ಹಾಗೂ ಉನ್ನತ ಮಟ್ಟದ ಡಿಜಿಟಲ್ ಶಿಕ್ಷಣವನ್ನು ಪ್ರೋತ್ಸಾಹಿಸಲ 5,000 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗಾಗಿ ತಲಾ 12 50,000 ರೂ.ಗಳನ್ನು ನೀಡಲಾಗುವುದು.

ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಕ ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ ಮೊಬೈಲ್ ಕಿಚನ ಫುಡ್ ಕಿಯೋಸ್ಕ (Kiosk) ಸೌಲಭ್ಯಗಳನ್ನು ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಘಟಕ ವೆಚ್ಚದ ಶೇ.75ರಷ್ಟು ಅಥವಾ ಗರಿಷ್ಠ ಮೂರು ಲಕ್ಷ ರೂ.ಗಳ ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್ ನಲ್ಲಿ ಘೋಷಿಸಿದರು.

Tags

Karnataka Budget 2026-27
share
ವಾರ್ತಾಭಾರತಿ
ವಾರ್ತಾಭಾರತಿ
Next Story
X