Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯ ಬಜೆಟ್‌ | ಹೊಸ ನ್ಯಾಯಬೆಲೆ ಅಂಗಡಿ...

ರಾಜ್ಯ ಬಜೆಟ್‌ | ಹೊಸ ನ್ಯಾಯಬೆಲೆ ಅಂಗಡಿ ಪ್ರಾರಂಭ : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 March 2025 6:24 PM IST
share
ರಾಜ್ಯ ಬಜೆಟ್‌ | ಹೊಸ ನ್ಯಾಯಬೆಲೆ ಅಂಗಡಿ ಪ್ರಾರಂಭ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಅವರು, ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭಿಸಲಾದ ಅನ್ನಭಾಗ್ಯ ಯೋಜನೆಯಡಿ, ಇದುವರೆಗೆ ಹೆಚ್ಚುವರಿ 5 ಕೆ.ಜಿ. ಆಹಾರ ಧಾನ್ಯಕ್ಕೆ ಪರ್ಯಾಯವಾಗಿ ನೀಡಲಾಗುತ್ತಿರುವ ಸಹಾಯಧನದ ಬದಲಾಗಿ, 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುವುದು. ಇದರಿಂದ 4.21 ಕೋಟಿ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ಲಭ್ಯವಾಗಲಿದೆ ಎಂದರು.

ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ತಂತ್ರಜ್ಞಾನವನ್ನು ಗರಿಷ್ಠ ಬಳಕೆ ಮಾಡಲಾಗುವುದು. ಇದಕ್ಕಾಗಿ ಒಟ್ಟಾರೆ 5 ಕೋಟಿ ರೂ. ವೆಚ್ಚದಲ್ಲಿ ಸಗಟು ಗೋದಾಮುಗಳಿಗೆ ಸಿಸಿಟಿವಿ ಅಳವಡಿಕೆ, ಜಿಪಿಎಸ್ ಆಧಾರಿತ ವಾಹನ ಟ್ರಾಕಿಂಗ್ ವ್ಯವಸ್ಥೆ ಮತ್ತು ಕಮಾಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ ‘ಅನ್ನ-ಸುವಿಧಾ’ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 2 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, 75 ವಯಸ್ಸಿನ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೂ ಈ ಸೇವೆ ವಿಸ್ತರಿಸಲಾಗುವುದು. ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಮರ್ಪಕವಾಗಿ ನಿಗಾವಹಿಸಲು ಸಾಧ್ಯವಾಗುವಂತೆ, ನ್ಯಾಯಬೆಲೆ ಅಂಗಡಿಗಳಲ್ಲಿ ಸ್ಥಾಪಿಸಿರುವ ಎಲೆಕ್ಟ್ರಾನಿಕ್ ತೂಕ ಯಂತ್ರ ಮತ್ತು ಪಾಯಿಂಟ್ ಆಫ್ ಸೇಲ್ ಸಿಸ್ಟಮ್‍ಗಳನ್ನು ಸಾರ್ವಜನಿಕ ವಿತರಣಾ ಪದ್ಧತಿಯ ಐಟಿ ವ್ಯವಸ್ಥೆಯೊಂದಿಗೆ ಸಂಯೋಜಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್‍ಗೆ 35 ರೂ.ಗಳಿಂದ 45 ರೂ.ಗಳಿಗೆ ಹೆಚ್ಚಳ ಮಾಡಲಾಗುವುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದವರಿಗೆ ಮತ್ತು ಸಹಕಾರ ಸಂಘಗಳಿಗೆ ಹಂಚಿಕೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X