Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಾರ್ಮಿಕರ ಪರಿಹಾರ ಧನ 8 ಲಕ್ಷ ರೂ.ಗೆ...

ಕಾರ್ಮಿಕರ ಪರಿಹಾರ ಧನ 8 ಲಕ್ಷ ರೂ.ಗೆ ಹೆಚ್ಚಳ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 March 2025 6:28 PM IST
share
ಕಾರ್ಮಿಕರ ಪರಿಹಾರ ಧನ 8 ಲಕ್ಷ ರೂ.ಗೆ ಹೆಚ್ಚಳ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನೋಂದಾಯಿತ ಕಟ್ಟಡ ಕಾರ್ಮಿಕರು ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ ಆ ಕಾರ್ಮಿಕರ ಅವಲಂಬಿತರಿಗೆ ಪರಿಹಾರವನ್ನು 8 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಅವರು, ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ ಧನಸಹಾಯ ಮೊತ್ತವನ್ನು 75ಸಾವಿರ ರೂ.ನಿಂದ 1.5 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದರು.

ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ನೀಡುತ್ತಿರುವ ಶೈಕ್ಷಣಿಕ, ವೈದ್ಯಕೀಯ ಮತ್ತು ಇತರೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು. ಇದಕ್ಕಾಗಿ ಸರಕಾರದ ವತಿಯಿಂದ ನೀಡುತ್ತಿರುವ ಧನಸಹಾಯವನ್ನು ದ್ವಿಗುಣಗೊಳಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಮಂಡಳಿಯ ಫಲಾನುಭವಿಗಳು 5 ಲಕ್ಷ ರೂ. ಚಿಕಿತ್ಸೆ ಮಿತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಂಡಳಿಯಿಂದ ಹೆಚ್ಚುವರಿಯಾಗಿ ಹೃದ್ರೋಗ ಮತ್ತು ಕ್ಯಾನ್ಸರ್ ಖಾಯಿಲೆಗಳಿಗೆ 5 ಲಕ್ಷ ರೂ.ವರೆಗೆ ಮತ್ತು ಇತರೆ ಖಾಯಿಲೆಗಳಿಗೆ 2 ಲಕ್ಷ ರೂ.ವರೆಗೆ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ: ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ 6ನೇ ತರಗತಿಯಿಂದ 12ನೇ ತರಗತಿ ವರೆಗಿನ ವಸತಿ ಶಾಲೆಗಳನ್ನು ನಿರ್ಮಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮುಖಾಂತರ ನಿರ್ವಹಿಸಲಾಗುವುದು. ಇದಕ್ಕೆ ಒಟ್ಟಾರೆ 750 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಆಸ್ಪತ್ರೆಗಳ ಮೂಲಸೌಕರ್ಯಕ್ಕೆ 51ಕೋಟಿ ರೂ.: ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪೂರಕವಾಗಿ ರಾಜ್ಯ ವಿಮಾ ಆಸ್ಪತ್ರೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು 51 ಕೋಟಿ ರೂ. ಅನುದಾನ ನಿಗದಿಪಡಿಸಲಾಗುವುದು. ಈ ಅನುದಾನದಲ್ಲಿ ರಾಜ್ಯ ವಿಮಾ ಆಸ್ಪತ್ರೆಗಳ ಶುಚಿತ್ವ, ಪರಿಕರಗಳ ಖರೀದಿ, ತುರ್ತು ವಿಭಾಗಗಳ ನವೀಕರಣ, ಪ್ರಯೋಗಾಲಯಗಳ ಉನ್ನತೀಕರಣ ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X