Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್ʼ...

ʼಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್ʼ ನೀತಿ ಜಾರಿ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 March 2025 7:38 PM IST
share
ʼಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್ʼ ನೀತಿ ಜಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೃಷಿ ಅರಣ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಇಂಗಾಲದ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾಗಿರುವ ಸಸ್ಯ ಪ್ರಭೇದಗಳನ್ನು ಬೆಳೆಸಲು ‘ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್’ ನೀತಿಯ ಮೂಲಕ ರೈತರ ಆರ್ಥಿಕ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಶುಕ್ರವಾರ ಆಯವ್ಯಯ ಮಂಡನೆ ಮಾಡಿದ ಅವರು, ವಿವಿಧ ಕಾರ್ಯಕ್ರಮದಡಿ ಅರಣ್ಯ ಪ್ರದೇಶದಲ್ಲಿ 28,494 ಹೆಕ್ಟೇರ್‍ನಲ್ಲಿ 213 ಲಕ್ಷ ಸಸಿಗಳನ್ನು ಹಾಗೂ ಅರಣ್ಯೇತರ ಪ್ರದೇಶದಲ್ಲಿ 1,200 ಹೆಕ್ಟೇರ್‍ನಲ್ಲಿ 3.50 ಲಕ್ಷ ಸಸಿಗಳನ್ನು ಬೆಳೆಸಿ ನೆಡುತೋಪುಗಳನ್ನು ನಿರ್ವಹಣೆ ಮಾಡುವ ಮೂಲಕ ‘ಹಸಿರು ಕವಚ’ವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಹವಾಮಾನ ಬದಲಾವಣೆಯ ಪರಿಣಾಮವನ್ನು ನಿಯಂತ್ರಿಸಲು ಪರಿಸರದ ಮೇಲೆ ಕಾಳಜಿ ಹೊಂದಿರುವ ಕಾರ್ಪೊರೇಟ್ ಸಂಸ್ಥೆಗಳು ಹಾಗೂ ಸ್ವಯಂ ಸೇವಕರ ಸಹಯೋಗದೊಂದಿಗೆ ‘ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ’ವನ್ನು ರಚಿಸಿ, ಸಿಎಸ್‍ಆರ್ ಕೊಡುಗೆ ಮತ್ತು ದೇಣಿಗೆ ಮೂಲಕ ಪರಿಸರ ಅಭಿವೃದ್ಧಿಗೆ ಅನುಕೂಲ ಕಲ್ಪಿಸಲಾಗುವುದು. ಹವಾಮಾನ ವೈಪರೀತ್ಯದ ಅಪಾಯಗಳನ್ನು ತಗ್ಗಿಸಲು ಮತ್ತು ಸುಸ್ಥಿರ ಅಭಿವೃದ್ಧಿಗೆ ‘ಕರ್ನಾಟಕ ರಾಜ್ಯ ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ’ಯನ್ನು ಪ್ರಸಕ್ತ ಸಾಲಿನಲ್ಲಿ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ವನ್ಯ ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ ನೀಡಲಾಗುತ್ತಿರುವ ದಯಾತ್ಮಕ ಧನವನ್ನು 15 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಕೃಷಿ ಭೂಮಿಯಲ್ಲಿ ಸಾಗುವಾನಿ ಮತ್ತು ಇತರೆ ಬೆಲೆ ಬಾಳುವ ಮರಗಳನ್ನು ಬೆಳೆಸಲು ಉತ್ತೇಜನ ನೀಡಲು ಪ್ರಸ್ತುತ ಇರುವ ಸಾಗಾಣಿಕೆ ನಿಯಮಾವಳಿಗಳನ್ನು ಸರಳೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ರಾಜ್ಯದಲ್ಲಿ ಕಾಡಾನೆ ಹಾಗೂ ಚಿರತೆ ಹಾವಳಿಯನ್ನು ನಿಯಂತ್ರಿಸಲು ಈಗಾಗಲೇ ಎಂಟು ಆನೆ ಕಾರ್ಯಪಡೆ ಹಾಗೂ ಎರಡು ಚಿರತೆ ಕಾರ್ಯಪಡೆಗಳನ್ನು ರಚಿಸಿದ್ದು, ಪ್ರಸಕ್ತ ಸಾಲಿನಲ್ಲಿ 17 ಕೋಟಿ ರೂ. ಒದಗಿಸುವ ಮೂಲಕ ಕಾರ್ಯ ಯೋಜನೆಯನ್ನು ಮುಂದುವರೆಸಲಾಗುವುದು. ಮಾನವ-ಆನೆ ಸಂಘರ್ಷ ತಡೆಗಟ್ಟಲು ಇನ್ನೂ 150 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿಗಳಿಗಾಗಿ 2025-26ನೇ ಸಾಲಿನಲ್ಲಿ 60 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮಾನವ-ಆನೆ ಸಂಘರ್ಷದ ಸಮಸ್ಯೆಯನ್ನು ಪರಿಹರಿಸಲು ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 20 ಚದರ ಕಿ.ಮೀ ವ್ಯಾಪ್ತಿಯಲ್ಲಿ ‘ಕಾಡಾನೆ ಸಾಫ್ಟ್ ರಿಲೀಸ್ ಕೇಂದ್ರ’ ಸ್ಥಾಪನೆಗೆ 20 ಕೋಟಿ ರೂ. ಅನುದಾನ, ಅರಣ್ಯದಲ್ಲಿ ಬೆಳೆದಿರುವ ಲಂಟಾನ ಮತ್ತು ಯುಫಟೋರಿಯಂ ಕಳೆಗಳನ್ನು ನರೇಗಾ ಯೋಜನೆಯ ಸಹಯೋಗದೊಂದಿಗೆ ಸ್ವಚ್ಛಗೊಳಿಸಿ ವನ್ಯ ಪ್ರಾಣಿಗಳಿಗೆ ಪೂರಕವಾದ ಹುಲ್ಲು ಬೆಳೆಯಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X