Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಣ್ಣ ನೀರಾವರಿ : ಏತ ನೀರಾವರಿ, ಚೆಕ್...

ಸಣ್ಣ ನೀರಾವರಿ : ಏತ ನೀರಾವರಿ, ಚೆಕ್ ಡ್ಯಾಂ, ಕೆರೆಗಳ ಪುನಃಶ್ಚೇತನ ಸಹಿತ 112 ಕಾಮಗಾರಿಗಳಿಗೆ 1,793 ಕೋಟಿ ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ6 March 2026 9:33 PM IST
share
ಸಣ್ಣ ನೀರಾವರಿ : ಏತ ನೀರಾವರಿ, ಚೆಕ್ ಡ್ಯಾಂ, ಕೆರೆಗಳ ಪುನಃಶ್ಚೇತನ ಸಹಿತ 112 ಕಾಮಗಾರಿಗಳಿಗೆ 1,793 ಕೋಟಿ ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ
ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕಾ ದೇವಾಲಯ ಕ್ಷೇತ್ರ ಅಭಿವೃದ್ಧಿಗೆ ಪ್ರಾಧಿಕಾರ

ಬೆಂಗಳೂರು, ಮಾ.6: 2025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏತ ನೀರಾವರಿ, ಚೆಕ್ ಡ್ಯಾಂ, ಕೆರೆಗಳ ಪುನಃಶ್ಚೇತನ ಅಭಿವೃದ್ಧಿ ಮುಂತಾದ 112 ಕಾಮಗಾರಿಗಳನ್ನು 1,793 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ 2026-27ನೆಯ ಸಾಲಿನ ಬಜೆಟ್ ಮಂಡಿಸಿದ ಅವರು, ಹೆಬ್ಬಾಳ-ನಾಗವಾರ ಕಣಿವೆಯ ಮೂರನೇ ಹಂತದಲ್ಲಿ ಶಿಡ್ಲಘಟ್ಟದ ಅಮಾನಿಕೆರೆಯಿಂದ ಶಿಡ್ಲಘಟ್ಟ ತಾಲೂಕಿನ 45 ಕೆರೆಗಳಿಗೆ ಮತ್ತು ಚಿಂತಾಮಣಿ ತಾಲೂಕಿನ 119 ಕೆರೆಗಳೂ ಸೇರಿ ಒಟ್ಟಾರೆ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು 237 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ಹೊಸಕೋಟೆ ತಾಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಎಚ್.ಎನ್. ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಯನ್ನು 140 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂ.ಎಲ್.ಡಿ. ನೀರಿನಿಂದ 259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲೂಕಿನ 119 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಯನ್ನು 650 ಕೋಟಿ ರೂ.ಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯಾದ್ಯಂತ ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ಸಂರಕ್ಷಿಸಲು ಕೆರೆ ಬಳಕೆದಾರರ ಸಂಘಗಳನ್ನು ಬಲವರ್ಧನೆಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು ಹಾಗೂ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅಂತರ್ಜಲ ಹೆಚ್ಚಿಸಲು ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕ್-ಅಪ್ ಹಾಗೂ ಚೆಕ್ ಡ್ಯಾಂ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಮುಜರಾಯಿ | ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕಾ ದೇವಾಲಯ ಕ್ಷೇತ್ರ ಅಭಿವೃದ್ಧಿಗೆ ಪ್ರಾಧಿಕಾರ

ಕರ್ನಾಟಕ ರಾಜ್ಯದಿಂದ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರಕಾರದಿಂದ ತಲಾ 5,000 ರೂ.ಗಳ ಸಹಾಯಧನವನ್ನು ಡಿ.ಬಿ.ಟಿ ಮೂಲಕ ವಿತರಿಸಲು ಉದ್ದೇಶಿಸಲಾಗಿದೆ. ಈ ಉದ್ದೇಶಕ್ಕೆ ಐದು ಕೋಟಿ ರೂ. ಅನುದಾನ ಮೀಸಲಿರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ದೇವಾಲಯಗಳಿಗೆ ಒಳಪಟ್ಟಿರುವ 259 ಕಲ್ಯಾಣಿಗಳನ್ನು ಮೂರು ವರ್ಷಗಳಲ್ಲಿ ಪುನರುಜ್ಜೀವನಗೊಳಿಸಲು ʻಜಲ ನಿಧಿ ಕಲ್ಯಾಣಿಗಳ ಪುನಃಶ್ಚೇತನ ಯೋಜನೆʼ ಕೈಗೊಳ್ಳಲಾಗುತ್ತಿದೆ. ಈ ಉದ್ದೇಶಕ್ಕೆ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.

ʻಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯʼ ಮತ್ತು ʻಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯʼಗಳಿಗೆ ಮೂಲಭೂತ ಸೌಲಭ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲು ಉದ್ದೇಶಿಸಿದೆ. ಹೊರ ರಾಜ್ಯದ ಪುಣ್ಯಕ್ಷೇತ್ರಗಳಲ್ಲಿರುವ ಕರ್ನಾಟಕ ರಾಜ್ಯದ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ಧಿಪಡಿಸಲು ಈ ಕೆಳಕಂಡಂತೆ ಕ್ರಮ ಕೈಗೊಳ್ಳಲಾಗುವುದು̤

ವಾರಣಾಸಿಯಲ್ಲಿ ಪ್ರಸ್ತುತ ಇರುವ ಛತ್ರವು ಶಿಥಿಲಗೊಂಡಿರುವುರಿಂದ ಹೊಸ ರಾಜ್ಯ ಛತ್ರವನ್ನು ನಿರ್ಮಿಸಲಾಗುವುದು. ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಸೇರಿದ ಜಾಗದಲ್ಲಿ ಪ್ರಸ್ತುತ ಇರುವ ಛತ್ರವು ಶಿಥಿಲಗೊಂಡಿದ್ದು, ಇದರ ನವೀಕರಣವನ್ನು ಕೈಗೊಳ್ಳಲಾಗುವುದು. ಶ್ರೀಶೈಲಂ ಕ್ಷೇತ್ರದಲ್ಲಿ ಹೊಸದಾಗಿ ಯಾತ್ರಿನಿವಾಸ ನಿರ್ಮಾಣ ಮಾಡಲಾಗುವುದು. ತುಳಜಾಪುರದಲ್ಲಿ ಪ್ರಸ್ತುತ ಇರುವ ಛತ್ರವನ್ನು ಹೊಸದಾಗಿ ನಿರ್ಮಾಣ ಮಾಡಲಾಗುವುದು.

Tags

Karnataka Budget
share
ವಾರ್ತಾಭಾರತಿ
ವಾರ್ತಾಭಾರತಿ
Next Story
X