Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಕನ್ನಡ ಬಾವುಟಕ್ಕೆ ನಾಡಧ್ವಜ’ದ ಸ್ಥಾನಮಾನ...

‘ಕನ್ನಡ ಬಾವುಟಕ್ಕೆ ನಾಡಧ್ವಜ’ದ ಸ್ಥಾನಮಾನ ನೀಡಲು ಚಿಂತನೆ : ಸಿಎಂ ಡಿ.ಕೆ.ಶಿವಕುಮಾರ್

‘ಬೆಳಗಾವಿ ಅಧಿವೇಶನದಲ್ಲಿ ಚರ್ಚೆ; ನಾಡಧ್ವಜಕ್ಕೆ ಕಾನೂನುಬದ್ಧ ಅಡಿಪಾಯ’

ವಾರ್ತಾಭಾರತಿವಾರ್ತಾಭಾರತಿ1 Nov 2026 7:29 PM IST
share
‘ಕನ್ನಡ ಬಾವುಟಕ್ಕೆ ನಾಡಧ್ವಜ’ದ ಸ್ಥಾನಮಾನ ನೀಡಲು ಚಿಂತನೆ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜ ಸ್ಥಾನಮಾನ ನೀಡಲು ಸರಕಾರ ಚಿಂತನೆ ನಡೆಸಿದ್ದು, ಈ ವಿಚಾರವಾಗಿ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಪ್ರಕಟಿಸಿದ್ದಾರೆ.

ರವಿವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಈಗಷ್ಟೇ ರಾಷ್ಟ್ರಧ್ವಜದ ಪಕ್ಕ ಕನ್ನಡ ಧ್ವಜ ಹಾರಿಸಿದ್ದೇನೆ. ಈ ಕನ್ನಡ ಬಾವುಟಕ್ಕೆ ಅಧಿಕೃತ ಸ್ಥಾನಮಾನ ನೀಡಲು ಮುಂದಾಗಿದ್ದೇವೆ. ಈ ಹಿಂದೆ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಮಾಡಿ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿದ್ದೆವು. ಆದರೆ, ನಮಗೆ ಈವರೆಗೂ ಮಾನ್ಯತೆ ಸಿಕ್ಕಿಲ್ಲ ಎಂದರು.

ನಾಡಧ್ವಜಕ್ಕೆ ಅಧಿಕೃತ ಮಾನ್ಯತೆ ನೀಡಿ, ರಾಷ್ಟ್ರಧ್ವಜದ ಪಕ್ಕದಲ್ಲೇ ಗೌರವಯುತವಾಗಿ ಹಾರಿಸಲು ಅಗತ್ಯವಿರುವ ಕಾನೂನು, ನೀತಿ ನಿಯಮಗಳ ರೂಪುರೇಷ ಸಿದ್ಧಪಡಿಸಿ, ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು. ಆ ಮೂಲಕ ನಾಡಧ್ವಜಕ್ಕೆ ಕಾನೂನಾತ್ಮಕ ಅಡಿಪಾಯ ಹಾಕಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಕನ್ನಡ ಬಾವುಟಕ್ಕೆ ನೀಡಬೇಕಾದ ಗೌರವ, ರಾಷ್ಟ್ರಧ್ವಜದ ಪಕ್ಕದಲ್ಲಿ ಅದನ್ನು ಹಾರಿಸುವಾಗ ಪಾಲಿಸಬೇಕಾದ ನಿಯಮಗಳು ಹಾಗೂ ಅದಕ್ಕೆ ಅಗತ್ಯವಿರುವ ಕಾನೂನು ಅವಕಾಶಗಳ ಕುರಿತು ಸರಕಾರ ಸಿದ್ಧತೆ ನಡೆಸುತ್ತಿದೆ. ಕನ್ನಡಿಗರು ಕನ್ನಡ ಬಾವುಟವನ್ನು ಯಾವ ರೀತಿಯಲ್ಲಿ ಗೌರವದಿಂದ ಕಾಣಬೇಕು ಎಂಬುದಕ್ಕೆ ಮಾರ್ಗಸೂಚಿ ಸಿದ್ಧಪಡಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಕನ್ನಡಿಗರ ಭಾವನೆಯ ಹೆಗ್ಗುರುತಾಗಿರುವ ಕೆಂಪು-ಹಳದಿ ಬಾವುಟಕ್ಕೆ ಗೌರವ ನೀಡಲಾಗುವುದು. ಕನ್ನಡದ ಜ್ಞಾನ, ಪರಂಪರೆ, ಸಂಸ್ಕೃತಿ, ಸರ್ವಧರ್ಮ ಪರಂಪರೆ ಸಮಾನತೆ, ಶಾಂತಿಯ ಸಂದೇಶ ಸಾರುವ ಈ ಬಾವುಟವನ್ನು ನಾಡಧ್ವಜವಾಗಿ ಅಧಿಕೃತಗೊಳಿಸಲು ಮುಂದಾಗಿದ್ದೇವೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕದ ಹೆಗ್ಗುರತನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವುದಕ್ಕೆ ಈ ತೀರ್ಮಾನ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ವಿವರಿಸಿದರು.

ಎಲ್ಲ ಸರಕಾರಿ ಕಚೇರಿಗಳ ಮೇಲೆ ಕನ್ನಡ ಧ್ವಜ ಹಾರಿಸುವುದರ ಜತೆಗೆ, ಸರಕಾರದ ಬೆಂಬಲ ಹೊಂದಿರುವ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸುವ ಚಿಂತನೆ ಇದೆ. ಖಾಸಗಿ ಸಂಸ್ಥೆಗಳೂ ಕನ್ನಡ ಧ್ವಜ ಹಾರಿಸುವಂತೆ ಈ ತಿಂಗಳಲ್ಲೇ ಸರಕಾರದ ಆದೇಶ ಹೊರಡಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ನಮ್ಮ ಉಸಿರು, ಹೆಸರು, ಕಸುಬು ಕನ್ನಡ. ನಮ್ಮ ನುಡಿ ಬಹಳ ಚೆಂದ, ಅದರಲ್ಲಿ ಏನೇ ಗೀಚಿದರೂ ಆಗುವುದು ಶ್ರೀಗಂಧ. ತನು ಕನ್ನಡ, ಮನ ಕನ್ನಡ, ನುಡಿ ಕನ್ನಡ, ನಡೆ ಕನ್ನಡ. ಅದನ್ನು ಆಚರಿಸಲು ನಾವು ಸೇರಿದ್ದೇವೆ. ಕವಿ ದ.ರಾ.ಬೇಂದ್ರೆ ಅವರು ಜಗದ ಏಳಿಗೆಗೆ ಕರ್ನಾಟಕ ದಿಕ್ಸೂಚಿ, ಕರ್ನಾಟಕ ಭಾರತದ ಭವಿಷ್ಯ. ಮಾತೃಭಾಷೆ ಮೂಲಕ ಜ್ಞಾನದ ಸಂಸ್ಕೃತಿ ಹರಿಯುತ್ತಿದೆ ಎಂದು ಪ್ರತಿಪಾದಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ನಾವು ಯಾವುದೇ ದೇಶದಲ್ಲಿದ್ದರೂ ನಮ್ಮ ಉಸಿರು ಕನ್ನಡವಾಗಿರಬೇಕು. ಈ ದೇಶದಿಂದ ಹೊರಗಿರುವ ಕನ್ನಡಿಗರು ಕನ್ನಡ ಸಂಘಟನೆ ಕಟ್ಟಿಕೊಂಡು ಮಾತೃಭಾಷೆ ಉಳಿಸಲು ಶ್ರಮಿಸುತ್ತಿದ್ದಾರೆ. ಅವರಿಗೆ ನಾನು ಸಾಷ್ಟಾಂಗ ನಮಸ್ಕಾರ ಸಲ್ಲಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಕನ್ನಡ ಕೇವಲ ಸರಕಾರಿ ಭಾಷೆ ಮಾತ್ರವಲ್ಲ, ಹೃದಯದ ಭಾಷೆಯಾಗಬೇಕು. ಭಾಷೆ ಎಂಬುದು ಬದುಕು. ಭಾಷೆ ಇಲ್ಲದ ಬದುಕು ಮೂಖಿಚಿತ್ರದಂತಾಗುತ್ತದೆ. ಕನ್ನಡದ ಬೇರು ಕರ್ನಾಟಕದಲ್ಲಿದ್ದರೂ ಅದರ ರೆಂಬೆ-ಕೊಂಬೆ, ರುಚಿ ಇಡೀ ಪ್ರಪಂಚಕ್ಕೆ ವಿಸ್ತರಿಸಿದೆ. ಕಲೆ ಕ್ರೀಡೆ, ವಿಜ್ಞಾನ ಐಟಿ ಬಿಟಿ ಸೇರಿದಂತೆ ಯಾವುದೇ ಕ್ಷೇತ್ರದಲ್ಲಾದರೂ ಕನ್ನಡದ ಸಾರ್ವಭೌಮತೆ ಬೆಳೆಯಬೇಕು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಪಂಚಾಯಿತಿ ಮಟ್ಟದ ಸರಕಾರಿ ಶಾಲೆಗಳನ್ನು ನಗರ ಪ್ರದೇಶದ ಶಾಲೆಗಳಂತೆ ರೂಪಿಸಲಾಗುತ್ತಿದೆ. ಈಗಾಗಲೇ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ರಾಜ್ಯದಲ್ಲಿ 25,498 ದ್ವಿಭಾಷಾ ಶಾಲೆಗಳು ಆರಂಭವಾಗಿದೆ. 250 ಸರಕಾರಿ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆ ಮಾಡಲಾಗಿದೆ. 6ನೇ ತರಗತಿಯಿಂದ ಕೌಶಲ್ಯ ಆಧಾರಿತ ಶಿಕ್ಷಣ ಆರಂಭಿಸಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ವಿವರಿಸಿದರು.

ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ 1-10ನೇ ತರಗತಿ, ಪಿಯು ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದಲ್ಲಿ ವ್ಯಾಸಂಗಕ್ಕೆ ಶೇ.7ರಷ್ಟು ಮೀಸಲಾತಿ ನೀಡಲಾಗಿದೆ. ಈ ಮೀಸಲಾತಿ ಉದ್ದೇಶ ಗ್ರಾಮೀಣ ಸರಕಾರಿ ಶಾಲಾ ಮಕ್ಕಳಿಗೆ ಇಂಜಿನಿಯರ್, ವೈದ್ಯ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಸಿಗುವಂತೆ ಮಾಡುವುದಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ನಗರದ ವಿದ್ಯಾರ್ಥಿಗಳಿಗೆ ಹಳ್ಳಿಗಳ ಬದುಕಿನ ಪರಿಚಯಕ್ಕೆ ಗ್ರಾಮಾನುಭವ ಎಂಬ ಕಾರ್ಯಕ್ರಮ ರೂಪಿಸಲಾಗಿದೆ. ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಲಾ ಮಕ್ಕಳಿಗೆ 2-3 ದಿನಗಳ ಗ್ರಾಮವಾಸ್ತವ್ಯ ಪರಿಚಯಿಸಿ ಗ್ರಾಮದ ಬದುಕು ಏನು ಎಂದು ತಿಳಿಸುವುದಾಗಿದೆ. ಗ್ರಾಮಾನುಭವ ಯೋಜನೆ ಮೂಲಕ ವಿದ್ಯಾರ್ಥಿಗಳನ್ನು ಕೊಠಡಿಯಿಂದಾಚೆ ತಂದು ಹಳ್ಳಿಗಳಲ್ಲಿ ಕೃಷಿ, ತೋಟಗಾರಿಕೆ, ಗ್ರಾಮೀಣ ಸಂಸ್ಕೃತಿ ಪರಿಚಯಿಸುವ ಉದ್ದೇಶವಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಬಾವುಟದ ಬಣ್ಣ ಬದಲಾವಣೆ ಇಲ್ಲ :

‘ಕನ್ನಡ ಬಾವುಟದ ಬಣ್ಣಗಳಲ್ಲಿ ಬದಲಾವಣೆ ಅಥವಾ ಹೆಚ್ಚುವರಿ ಬಣ್ಣಗಳನ್ನು ಸೇರಿಸುವ ಉದ್ದೇಶವಿದೆಯೇ?’ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಯಾವುದೇ ಹೆಚ್ಚುವರಿ ಬಣ್ಣ ಇರುವುದಿಲ್ಲ. ಈಗಿರುವ ಬಣ್ಣಗಳೇ ಮುಂದುವರಿಯಲಿವೆ. ನಮ್ಮ ಬಾವುಟದ ಬಣ್ಣಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಈಗಿರುವ ಬಾವುಟ ಮುಂದುವರಿಯಲಿದೆ. ನಮ್ಮ ಭಾಷೆ ಮತ್ತು ಜನರ ಮನಸ್ಸಿಗೆ ಒಪ್ಪಿಗೆಯಾಗಿರುವ, ಜನರು ಪ್ರೀತಿಯಿಂದ ಸ್ವೀಕರಿಸಿರುವ ಬಣ್ಣಗಳಿವೆ. ನಾವು ಬೇರೆ ಯಾವುದೇ ಬಣ್ಣವನ್ನು ಸೇರಿಸಲು ಹೋಗುವುದಿಲ್ಲ ಎಂದು ಸಿಎಂ ತಿಳಿಸಿದರು.

Tags

D.K.ShivakumarFlagKarnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X