Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಫೆ.26ರಿಂದ ಕರ್ನಾಟಕ ಇಂಟರ್ ನ್ಯಾಷನಲ್...

ಫೆ.26ರಿಂದ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ : ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ1 Feb 2025 11:20 PM IST
share
ಫೆ.26ರಿಂದ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ : ಎಚ್.ಕೆ.ಪಾಟೀಲ್

ಬೆಂಗಳೂರು : ಪ್ರವಾಸೋದ್ಯಮ ಇಲಾಖೆ ವತಿಯಿಂದ ಫೆಬ್ರವರಿ 26ರಿಂದ 28ರಂದು 3 ದಿನಗಳ ಕಾಲ ಬೆಂಗಳೂರಿನಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ(ಕೆಐಟಿಇ) ನಡೆಯಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೆÇೀದ ಎರಡನೇ ಆವೃತ್ತಿಯ ಕರ್ಟನ್ ರೈಸರ್, ಬ್ರೋಚರ್ ಮತ್ತು ಲಾಂಛನವನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು, ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ ಮೂಲಕ ನಮ್ಮ ರಾಜ್ಯದ ವಿವಿಧ ಮತ್ತು ವಿಶಿಷ್ಟ ಪ್ರವಾಸಿ ಉತ್ಪನ್ನಗಳನ್ನು ಈ ಮೂರು ದಿನಗಳ ಕಾಲ ಪ್ರದರ್ಶಿಸಲಿದ್ದೇವೆ ಎಂದರು.

ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣಗಳಲ್ಲದೇ, ಅಲ್ಪ ಪರಿಚಿತ ಪ್ರವಾಸಿ ತಾಣಗಳನ್ನು ಈ ಸಂದರ್ಭದಲ್ಲಿ ಎಲ್ಲರಿಗೂ ಪ್ರದರ್ಶನ ಮಾಡುವ ಮೂಲಕ ಎಲ್ಲರನ್ನೂ ಒಳಗೊಳ್ಳುವ ಮೂಲಕ ಅಭಿವೃದ್ಧಿ ಮಾಡುವ ಉದ್ದೇಶವನ್ನು ಹೊಂದಿದ್ದೇವೆ. ಈ ಸುಸಂದರ್ಭದಲ್ಲಿ ಪ್ರವಾಸೋದ್ಯಮ ವಲಯದ ಎಲ್ಲಾ ಭಾಗಿದಾರರನ್ನು ನಮ್ಮ ರಾಜ್ಯದ ಪ್ರವಾಸೋದ್ಯಮ ನಕಾಶೆಯನ್ನು ಪ್ರಜ್ವಲಿಸುವಂತೆ ಮಾಡಲು ನಾನು ಆಹ್ವಾನ ನೀಡುತ್ತಿದ್ದೇನೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.

ಸಮಾನತೆ, ಸಹಭಾಗಿತ್ವ ಸಹಬಾಳ್ವೆ, ಸಮಾನ ಅವಕಾಶ, ಸಮಾನ ಗುರಿ-ಉದ್ದೇಶಗಳ ಮೂಲಕ ನಮ್ಮ ರಾಜ್ಯವನ್ನು ದೇಶದಲ್ಲಿಯೇ ದೇಶಿಯ ಪ್ರವಾಸೋದ್ಯಮದಲ್ಲಿ ಮುಂಚೂಣಿಯಲ್ಲಿರಿಸಲು ಮತ್ತು ಅಂತಾರಾಷ್ಟ್ರೀಯ ಪ್ರವಾಸೋದ್ಯಮ ನಕಾಶೆಯಲ್ಲಿ ಪ್ರಖ್ಯಾತಿಯನ್ನು ಹೆಚ್ಚಿಸಲು ಶಕ್ತಿಮೀರಿ ಪ್ರಯತ್ನಿಸೋಣ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಕರ್ನಾಟಕದಲ್ಲಿ ಪ್ರವಾಸೋದ್ಯಮವು ಒಂದು ಆರ್ಥಿಕ ಚಾಲಕ ಶಕ್ತಿಯಷ್ಟೇ ಆಗಿರದೇ, ಅದಕ್ಕಿಂತಲೂ ಹೆಚ್ಚಾಗಿ ಇದು ಸಾಮಾಜಿಕ ಒಳಿತಿನ ಬಲವಾಗಿದೆ, ಶಾಂತಿಯುತ ಸಹಬಾಳ್ವೆಯನ್ನು ಬೆಳಸುವ ಸಾಧನವಾಗಿದೆ ಮತ್ತು ಕಲಿಕೆ ಹಾಗೂ ಪ್ರಬುದ್ಧತೆಯ ದಾರಿಯಾಗಿದೆ. ಜಗತ್ತಿನಲ್ಲಿ ಅಡೆತಡೆಗಳು ನಮ್ಮ ನಡುವೆ ಆಗಾಗ ಭಿನ್ನಾಭಿಪ್ರಾಯ ಉಂಟು ಮಾಡುವಾಗ ಪ್ರವಾಸೋದ್ಯಮವು ತಪ್ಪು ತಿಳುವಳಿಕೆಯ ಗೋಡೆಗಳನ್ನು ಒಡೆಯುವ ಮತ್ತು ಪರಸ್ಪರ ಗೌರವ ಹಾಗೂ ಸಮಾನ ಅನುಭವ ಸೇತುಗಳನ್ನು ಸೃಜಿಸುವ ಜೊತೆಗೆ ಜನರನ್ನು ಒಟ್ಟಿಗೆ ಸೇರಿಸುವ ವಿಶಿಷ್ಟ ಸಾಮಥ್ರ್ಯವನ್ನು ಹೊಂದಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಕರ್ನಾಟಕ ಪ್ರವಾಸೋದ್ಯಮ ವಲಯವು ಗಮನಾರ್ಹ ಪರಿವರ್ತನಾ ಪಥದಲ್ಲಿದೆ. ನಮ್ಮ ಸರಕಾರವು ನೂತನ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತಂದಿದೆ. ಈ ನೀತಿಯು ರಾಜ್ಯವನ್ನು ಶಾಂತಿ, ಜ್ಞಾನ ಮತ್ತು ಉನ್ನತಿಯ ಸಂಕೇತವನ್ನಾಗಿ ರೂಪಿಸುವ ನಕಾಶೆಯಾಗಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ ಮುಖಾಂತರ ನಾವು ಹೆಚ್ಚಿನ ಸಾಮರಸ್ಯ ಮತ್ತು ಪ್ರಬುದ್ಧ ಸಮಾಜವನ್ನು ನಿರ್ಮಿಸಲು ಬಯಸುತ್ತೇವೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ರಾಜ್ಯದಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ಬಂಡವಾಳ ಹೂಡಿಕೆ ಮತ್ತು ಆಕರ್ಷಣೆ, ಕೌಶಲ್ಯಾಭಿವೃದ್ಧಿ ಮೂಲಕ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲು ನಾವು ಬದ್ಧರಾಗಿದ್ದೇವೆ. ಸಮುದಾಯ ಕೇಂದ್ರಿತ ಉಪಕ್ರಮಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಪ್ರವಾಸೋದ್ಯಮ ವಲಯದ ಲಾಭ ನೀಡಬೇಕೆನ್ನುವ ಗುರಿಯನ್ನು ಹೊಂದಿದ್ದೇವೆ. ‘ಸರ್ವರಿಗೂ ಸಮಪಾಲು, ಸಮಬಾಳು’ ಪರಿಕಲ್ಪನೆಯ ಮೂಲಕ ಸಮ ಸಮಾಜದ ನಿರ್ಮಾಣದ ಉದ್ದೇಶವನ್ನು ಹೊಂದಿದ್ದೇವೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.

ಇದೇ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಾಜನೀಶ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಹೀಂ, ನಿರ್ದೇಶಕ ಡಾ.ರಾಜೇಂದ್ರ ಕೆ.ವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X