Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ:...

ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

‘ಆಸ್ಟ್ರೇಲಿಯಾ ವಾಣಿಜ್ಯ ನಿಯೋಗದ ಜೊತೆ ಸಭೆ’

ವಾರ್ತಾಭಾರತಿವಾರ್ತಾಭಾರತಿ13 Feb 2025 8:13 PM IST
share
Photo of Program

ಬೆಂಗಳೂರು : ನವೀಕರಿಸಬಹುದಾದ ಇಂಧನವೂ ಸೇರಿದಂತೆ ಇಂಧನ ಉತ್ಪಾದನೆ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಗುರುವಾರ ಬೆಂಗಳೂರು ಅರಮನೆ ಆವರಣದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ನಡೆದ ‘ನವೀಕರಿಸಬಹುದಾದ ಇಂಧನ ಹಾಗೂ ಹಸಿರು ಆರ್ಥಿಕತೆ ಜಾಗತಿಕ ಮಾರುಕಟ್ಟೆಯ ಅವಕಾಶಗಳು’ ಕುರಿತ ಭಾರತ ಮತ್ತು ಆಸ್ಟ್ರೇಲಿಯಾ ದ್ವೀಪಕ್ಷೀಯ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ ಹೂಡಿಕೆದಾರರ ಸ್ನೇಹಿ ಸರಕಾರವಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೂಡಿಕೆಗೆ ವಿಫುಲ ಅವಕಾಶಗಳಿದ್ದು, ಆಸ್ಟ್ರೇಲಿಯಾದ ಸಂಸ್ಥೆಗಳು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು. ಅದಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಅವರು ತಿಳಿಸಿದರು.

ಉದ್ಯಮ ಸ್ನೇಹಿ ರಾಜ್ಯ ಎನಿಸಿಕೊಂಡಿರುವ ಕರ್ನಾಟಕದಲ್ಲಿ ಅತ್ಯುತ್ತಮ ಕೈಗಾರಿಕಾ ನೀತಿ ಇದ್ದು, ಅಗತ್ಯ ಪ್ರೋತ್ಸಾಹಗಳನ್ನು ಒದಗಿಸುತ್ತಿದೆ. ಈ ಹಿಂದೆ ನಾನು ಕೈಗಾರಿಕಾ ಸಚಿವನಾಗಿದ್ದಾಗಲೂ ಉದ್ಯಮಗಳ ಸ್ಥಾಪನೆಗೆ ಒತ್ತು ನೀಡಿದ್ದೆ. ಬಂಡವಾಳ ಹೂಡಿಕೆಗೂ ಇದು ಪ್ರಶಸ್ತ ರಾಜ್ಯ. ಇಲ್ಲಿನ ಜನರು ಸ್ನೇಹಪರರರು. ಕೇರಳ ದೇವರ ನಾಡು ಎನಿಸಿಕೊಂಡರೆ ಕರ್ನಾಟಕದವರನ್ನು ‘ದೇವರ ಜನ' (ಗಾಡ್ಸ್ ಓನ್ ಪೀಪಲ್) ಎನ್ನುತ್ತೇವೆ ಎಂದು ಜಾರ್ಜ್ ಹೇಳಿದರು.

ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಹಾಗೂ ನವೀಕರಿಸಬಹುದಾದ ಇಂಧನ ವಲಯದ ಸ್ಟಾರ್ಟ್‍ಅಪ್‍ಗಳನ್ನು ಉತ್ತೇಜಿಸಿ, ಅಭಿವೃದ್ಧಿಪಡಿಸಲು ಆಸ್ಟ್ರೇಲಿಯಾದ ಸೌತ್ ವೇಲ್ಸ್ ವಿಶ್ವವಿದ್ಯಾಲಯದೊಂದಿಗೆ ಇಂಧನ ಇಲಾಖೆ ಇತ್ತೀಚೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಈ ಒಪ್ಪಂದವು ಶುದ್ಧ ಇಂಧನ, ನವೀಕರಿಸಬಹುದಾದ ಇಂಧನ, ಗ್ರೀನ್ ಹೈಡ್ರೋಜನ್, ಬ್ಯಾಟರಿ ಪವರ್ ಸ್ಟೋರೇಜ್ ವ್ಯವಸ್ಥೆಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸಹಕಾರ ಹೆಚ್ಚಿಸುವ ಗುರಿ ಹೊಂದಿದೆ ಎಂದು ಜಾರ್ಜ್ ಹೇಳಿದರು.

ನವೀಕರಿಸಬಹುದಾದ ಇಂಧನ ವಲಯದ ಸಾಮಥ್ರ್ಯ ವರ್ಧನೆ ಮತ್ತು ಹೊಸ ತಂತ್ರಜ್ಞಾನಗಳನ್ನು ಆವಿಷ್ಕರಿಸುವ ಸ್ಟಾರ್ಟ್‍ಅಪ್‍ಗಳಿಗೆ ರಾಜ್ಯದಲ್ಲಿ ಪೂರಕ ಪರಿಸರವಿದೆ. ಸಂಶೋಧನೆ ಮತ್ತು ಆವಿಷ್ಕಾರ ವಲಯಕ್ಕೆ ಸಂಬಂಧಿಸಿದ ಪರಿಣಿತಿಯನ್ನು ಆಸ್ಟ್ರೇಲಿಯಾ ನಮ್ಮ ಜತೆ ಹಂಚಿಕೊಳ್ಳುವುದರಿಂದ ಜಾಗತಿಕ ಮಟ್ಟದ ಪರಿಸರ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ ಹಾಕಿಕೊಂಡಿರುವ ನಮ್ಮ ಗುರಿಗೆ ಒಪ್ಪಂದಗಳು ನೆರವಾಗಲಿವೆ. ಉದ್ಯಮಗಳು, ಸರಕಾರ ಮತ್ತು ನಾಗರಿಕರಿಗೆ ಇದು ಲಾಭದಾಯಕವಾಗಲಿದೆ ಎಂದು ಅವರು ಹೇಳಿದರು.

ಶುದ್ಧ ಇಂಧನ, ಗ್ರೀನ್ ಹೈಡ್ರೋಜನ್, ಬ್ಯಾಟರಿ ಪವರ್ ಸ್ಟೋರೇಜ್ ಮತ್ತು ಸಂಬಂಧಿತ ವಲಯಗಳಲ್ಲಿ ಪರಸ್ಪರ ಸಹಕಾರ ಇದೆ. ನೂತನ ತಂತ್ರಜ್ಞಾನಗಳನ್ನು ಸದುಪಯೋಗಪಡಿಸಿಕೊಳ್ಳುವ ಜತೆಗೆ ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲಾಗುವುದು ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಬಂಡವಾಳ ಹೂಡಿ :

ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ ಮಾತನಾಡಿ, ನವೀಕರಿಸಬಹುದಾದ ಇಂಧನದ ಅತ್ಯಧಿಕ ಸ್ಥಾಪಿತ ಸಾಮಥ್ರ್ಯ ಹೊಂದಿರುವ ದೇಶದ ಮೊದಲ 5 ರಾಜ್ಯಗಳಲ್ಲಿ ಕರ್ನಾಟಕವು ಒಂದಾಗಿದೆ. ಸೌರ ಹಾಗೂ ಪವನ ವಿದ್ಯುತ್ ಉತ್ಪಾದನಾ ಸಾಮಥ್ರ್ಯದಲ್ಲಿ ರಾಜ್ಯವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ನವೀಕರಿಸಬಹುದಾದದ ಇಂಧನ ವಲಯದಲ್ಲಿ ಹೂಡಿಕೆಗೆ ಅವಕಾಶಗಳಿದ್ದು, ಆಸ್ಟ್ರೇಲಿಯಾದ ಸಂಸ್ಥೆಗಳು ಕರ್ನಾಟಕದಲ್ಲಿ ಬಂಡವಾಳ ಹೂಡಲು ಮುಂದೆ ಬರಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಆಸ್ಟ್ರೇಲಿಯಾ ಇಂಡಿಯಾ ಬಿಸಿನೆಸ್ ಕೌನ್ಸಿಲ್‍ನ ಅಧ್ಯಕ್ಷ ಇರ್ಫಾನ್ ಮಲ್ಲಿಕ್, ಆಸ್ಟ್ರೇಲಿಯಾದ ವಾಣಿಜ್ಯ ಮತ್ತು ಹೂಡಿಕೆ ಇಲಾಖೆಯ ಆಯುಕ್ತೆ ಡೆನ್ನಿಸ್ ಇಟಾನ್, ಆಸ್ಟ್ರೇಲಿಯಾದ ವಾಣಿಜ್ಯ ಮತ್ತು ಹೂಡಿಕೆ (ಭಾರತದಲ್ಲಿನ ಹೂಡಿಕೆ) ಮುಖ್ಯಸ್ಥೆ ಮಾಲಿನಿ ದತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X