ಕೆಸೆಟ್- 2024 : ಅರ್ಜಿ ಸಲ್ಲಿಸಲು ಆ.28ರವರೆಗೆ ಅವಕಾಶ

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್- 2024)ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಆ.28ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಬುಧವಾರ ಪ್ರಕಟನೆ ಹೊರಡಿಸಿರುವ ಅವರು, ಅರ್ಜಿ ಸಲ್ಲಿಸಲು ಆ.22 ಕೊನೆ ದಿನವಾಗಿತ್ತು. ಸಾರ್ವಜನಿಕರ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಆ.30ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅರ್ಹತಾ ನಿಬಂಧನೆ, ಪರೀಕ್ಷಾ ದಿನಾಂಕ ಇತ್ಯಾದಿ ವಿವರಗಳಿಗೆ ಜುಲೈ 13ರಂದು ಹೊರಡಿಸಿದ್ದ ಅಧಿಸೂಚನೆಯನ್ನು ನೋಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.
Next Story





