ಕೆಇಎ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳ ಪ್ರಕಟ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜ.10 ಮತ್ತು ಜ.11ರಂದು ನಡೆದ ಪರೀಕ್ಷೆಗಳ ಕೀ ಉತ್ತರಗಳನ್ನು ಪ್ರಕಟಿಸಿದೆ.
https://cetonline.karnataka.gov.in/KEA ವೆಬ್ ಸೈಟ್ ನಲ್ಲಿ ಕೀ ಉತ್ತರಗಳನ್ನು ಪ್ರಕಟಿದ್ದು, ಈ ಬಗ್ಗೆ ಏನೇ ಆಕ್ಷೇಪಣೆಗಳು ಇದ್ದಲ್ಲಿ ಜ.14ರ ಬೆಳಗ್ಗೆ 11 ಗಂಟೆ ಒಳಗೆ ಸಲ್ಲಿಸಬೇಕು. ಇದನ್ನು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





