Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಇಎ ನೇಮಕಾತಿ: 5,431 ವಿವಿಧ...

ಕೆಇಎ ನೇಮಕಾತಿ: 5,431 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ

ವಾರ್ತಾಭಾರತಿವಾರ್ತಾಭಾರತಿ30 Oct 2026 11:06 PM IST
share
ಕೆಇಎ ನೇಮಕಾತಿ: 5,431 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ

ಬೆಂಗಳೂರು : ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹಾಗೂ ಇತರ ಸಮಾನಾಂತರ 5,431 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶುಕ್ರವಾರದಿಂದ ಆರಂಭವಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಲವು ನೂತನ ಉಪಕ್ರಮಗಳನ್ನು ಈ ಬಾರಿ ಅಳವಡಿಸಿಕೊಂಡಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಮಾನಾಂತರ ಶೈಕ್ಷಣಿಕ ಅರ್ಹತೆಯ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇಸಲ ಪರೀಕ್ಷೆ ನಡೆಸುವುದರ ಮೂಲಕ ನೇಮಕಾತಿ ಪ್ರಕ್ರಿಯೆ ಮುಗಿಸಲು ಇದೇ ಮೊದಲ ಬಾರಿಗೆ ಕೆಇಎ ಹೆಜ್ಜೆ ಹಾಕಿದೆ. ಇದುವರೆಗೂ ಇಂತಹ ಅವಕಾಶ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಮಾತ್ರ ಇತ್ತು ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ರಾಜ್ಯ ಸರಕಾರ, ಕೆಇಎಗೂ ನೇಮಕಾತಿ ಪ್ರಾಧಿಕಾರದ ಮಾನ್ಯತೆ ನೀಡಿರುವ ಹಿನ್ನೆಲೆಯಲ್ಲಿ ಒಟ್ಟು 33 ಇಲಾಖೆಗಳ ವಿವಿಧ ಸಮಾನಾಂತರ ಹುದ್ದೆಗಳಿಗೆ ಒಂದೇ ಸಲ ಪರೀಕ್ಷೆ ನಡೆಸಿ, ತ್ವರಿತವಾಗಿ ನೇಮಕಾತಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಹಿಂದೆ ಕೆಇಎ ನಡೆಸಿದ ಗ್ರಾಮ ಆಡಳಿತಾಧಿಕಾರಿ, ಭೂ ಮಾಪಕ, ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳ ಮಾಹಿತಿ ಎಫ್‍ಡಿಎ ಮತ್ತು ಎಸ್‍ಡಿಎ ಅರ್ಜಿಯಲ್ಲೂ ಪ್ರತಿಬಿಂಬಿಸುವ ಹಾಗೆ ಸಾಫ್ಟ್‍ವೇರ್ ಅಭಿವೃದ್ಧಿಪಡಿಸಿದ್ದು ಅಂತಹವರು ಕೇವಲ ಲಾಗಿನ್ ಆಗಿ ಶುಲ್ಕ ಪಾವತಿಸಿದರೆ ಅರ್ಜಿ ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಹಿಂದಿನ ಯೂಸರ್ ನೇಮ್, ಪಾಸ್‍ವರ್ಡ್ ಮೂಲಕವೇ ಲಾಗಿನ್ ಆಗಬಹುದು. ಬಳಿಕ ಅಗತ್ಯಬಿದ್ದರೆ ಏನಾದರೂ ತಿದ್ದುಪಡಿ ಮಾಡಿಕೊಳ್ಳಬಹುದು. ನಂತರ ಶುಲ್ಕ ಪಾವತಿಸಿ ಸಬ್ ಮಿಟ್ ಮಾಡಿದರೆ ಅರ್ಜಿ ಸಲ್ಲಿಸಿದಂತಾಗುತ್ತದೆ. ಯಾರು ಇದುವರೆಗೂ ನೋಂದಣಿ ಮಾಡಿಕೊಂಡಿಲ್ಲವೊ ಅಂತಹವರು ಮಾತ್ರ ಆಧಾರ್ ದೃಢೀಕರಣದ ಮೂಲಕ ಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ವರ್ಷಕ್ಕೆ ಎರಡು ಪರೀಕ್ಷೆ: ಸಮಾನಾಂತರ ಹುದ್ದೆಗಳಿಗೆ ವರ್ಷಕ್ಕೆ ಎರಡು ಬಾರಿ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ಇದೆ. ಉದಾಹರಣೆಗೆ ಜನವರಿಯಿಂದ ಜೂನ್ ವರೆಗೂ ವಿವಿಧ ಇಲಾಖೆಗಳ ನೇಮಕಾತಿ ಕೋರಿಕೆಗಳಿಗೆ ಒಮ್ಮೆಗೆ ಅರ್ಜಿ ಕರೆದು ಪರೀಕ್ಷೆ ನಡೆಸುವುದು. ಅದರ ನಂತರ ಬರುವ ಇಲಾಖೆಗಳ ಕೋರಿಕೆಗಳಿಗೆ ಡಿಸೆಂಬರ್ ನಲ್ಲಿ ಪರೀಕ್ಷೆ ನಡೆಸಿ, ನೇಮಕಾತಿ ಪಟ್ಟಿ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಎಚ್.ಪ್ರಸನ್ನ ತಿಳಿಸಿದ್ದಾರೆ.

Tags

KEA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X