Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಸಕ್ತ ಸಾಲಿನಲ್ಲಿ ಬೆಸ್ಕಾಂಗೆ 293.62...

ಪ್ರಸಕ್ತ ಸಾಲಿನಲ್ಲಿ ಬೆಸ್ಕಾಂಗೆ 293.62 ಕೋಟಿ ರೂ.ಲಾಭ : ಇಂಧನ ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ3 Oct 2026 7:08 PM IST
share
ಪ್ರಸಕ್ತ ಸಾಲಿನಲ್ಲಿ ಬೆಸ್ಕಾಂಗೆ 293.62 ಕೋಟಿ ರೂ.ಲಾಭ : ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಬೆಸ್ಕಾಂ)ವು 2025-26ನೇ ಹಣಕಾಸು ವರ್ಷದಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅಧ್ಯಕ್ಷತೆಯಲ್ಲಿ ನಡೆದ ಬೆಸ್ಕಾಂನ 144ನೇ ಆಡಳಿತ ಮಂಡಳಿ ಸಭೆಯಲ್ಲಿ 2025-26ನೇ ಸಾಲಿನ ಬೆಸ್ಕಾಂನ ಆರ್ಥಿಕ ಕಾರ್ಯಕ್ಷಮತೆ ಹಾಗೂ ಲಾಭ ದಾಖಲಿಸಲು ಕಾರಣವಾದ ಅಂಶಗಳನ್ನು ಮಂಡಿಸಲಾಯಿತು.

ಬೆಸ್ಕಾಂ ಲಾಭದ ಹಾದಿಯಲ್ಲಿ ಸಾಗಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕೆ.ಜೆ.ಜಾರ್ಜ್, ಹೆಚ್ಚಿದ ಆದಾಯ ವಸೂಲಿ, ವಿದ್ಯುತ್ ಖರೀದಿಯಲ್ಲಿ ಸಮರ್ಪಕ ನಿರ್ವಹಣೆ ಮತ್ತು ಹಣಕಾಸು ವೆಚ್ಚದಲ್ಲಿನ ಇಳಿಕೆ, ಆರ್ಥಿಕ ಶಿಸ್ತು ಹೆಚ್ಚಿಸಿರುವುದು ಮುಂತಾದ ಸಂಯೋಜಿತ ಪರಿಣಾಮವಾಗಿ 2025-26ನೇ ಸಾಲಿನಲ್ಲಿ ಬೆಸ್ಕಾಂ 293.62 ಕೋಟಿ ರೂ. ಲಾಭ ದಾಖಲಿಸಲು ಸಾಧ್ಯವಾಗಿದೆ ಎಂದರು.

ಅಲ್ಲದೆ, ಆದಾಯ ಹೆಚ್ಚಳ ಮತ್ತು ವೆಚ್ಚ ನಿಯಂತ್ರಣಕ್ಕೆ ಸಮಾನ ಆದ್ಯತೆ ನೀಡುವ ಮೂಲಕ ಬೆಸ್ಕಾಂನ ಆರ್ಥಿಕ ಕಾರ್ಯಕ್ಷಮತೆಯಲ್ಲಿ ಸುಧಾರಣೆ ತರಲಾಗಿದೆ. ನಮ್ಮ ಸಮರ್ಪಕ ಬಿಲ್ಲಿಂಗ್ ವ್ಯವಸ್ಥೆಯು ಆರ್ಥಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ.ಪ್ರೋ ಬ್ ರೀಡಿಂಗ್ ವ್ಯವಸ್ಥೆಯಿಂದ ಸಿಬ್ಬಂದಿ ಹಸ್ತಕ್ಷೇಪ ಕಡಿಮೆಯಾಗಿದ್ದು, ಬಿಲ್ಲಿಂಗ್ ನಿಖರತೆ ಹೆಚ್ಚಿದೆ ಎಂದು ಅವರು ಹೇಳಿದರು.

ಇದರಿಂದ ಸುಮಾರು 100 ಮಿಲಿಯನ್ ಯೂನಿಟ್ ಹೆಚ್ಚುವರಿ ವಿದ್ಯುತ್ ಮಾರಾಟಕ್ಕೆ ಕಾರಣವಾಗಿರುವುದರ ಜತೆಗೆ ಗರಿಷ್ಠ ಬೇಡಿಕೆಯನ್ನು ನಿಖರವಾಗಿ ದಾಖಲಿಸಲು ನೆರವಾಗಿದೆ. ಹೆಚ್ಚಿನ ಆದಾಯ ನೀಡುವ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರ ವಿಭಾಗದಲ್ಲಿ ಶೇ.100ರಷ್ಟು ಬಿಲ್ಲಿಂಗ್ ದಕ್ಷತೆ ಸಾಧಿಸಲು ಬೆಸ್ಕಾಂ ಮುಂದಾಗಿದೆ ಎಂದು ಜಾರ್ಜ್ ತಿಳಿಸಿದರು.

ಹೆಚ್ಚಿನ ಮೊತ್ತದ ಬಾಕಿ ಹಣಕ್ಕೆ ಸಂಬಂಧಿತ ಕಾನೂನು ಹೋರಾಟ ಮತ್ತು ನಿಯಂತ್ರಣ ಸಂಬಂಧಿತ ಪ್ರಕರಣಗಳ ನಿರಂತರ ಅನುಸರಣೆ ಮೂಲಕ ಕಂಪನಿಗೆ ಬರಬೇಕಿದ್ದ ಆದಾಯವನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ನಿಗದಿತ ಶುಲ್ಕ, ಕ್ರಾಸ್ ಸಬ್ಸಿಡಿ ಸರ್ಚಾರ್ಜ್ ಮತ್ತು ಹೆಚ್ಚುವರಿ ಸರ್ಚಾರ್ಜ್‍ಗಳ ಮೂಲಕ ಲಭ್ಯವಾಗುವ ಆದಾಯವೂ ಸೇರಿದೆ ಎಂದು ಅವರು ಹೇಳಿದರು.

ಸರಾಸರಿ ಆದಾಯ ವಸೂಲಿ (ಎಆರ್‍ಆರ್)ಯನ್ನು ನಿಯಮಿತವಾಗಿ ಪರಿಶೀಲಿಸುವ ಮೂಲಕ ಆದಾಯದ ಮೇಲ್ವಿಚಾರಣೆ, ಉತ್ತಮ ದರ ಪರಿಷ್ಕರಣೆ ಪ್ರಸ್ತಾವನೆಗಳು ಮತ್ತು ಪರಿಣಾಮಕಾರಿ ಆರ್ಥಿಕ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ ಎಂದು ಜಾರ್ಜ್ ತಿಳಿಸಿದರು.

ವೆಚ್ಚ ನಿರ್ವಹಣೆ ಹಾಗೂ ನಷ್ಟ ಆಗದಂತೆ ವಹಿಸಿದ ಎಚ್ಚರಿಕಾ ಕ್ರಮಗಳನ್ನು ವಿವರಿಸಿದ ಅವರು, ವಿದ್ಯುತ್ ಖರೀದಿಯ ಸಮರ್ಪಕ ನಿರ್ವಹಣೆ, ಹಳೆಯ ಬಾಕಿಗಳನ್ನು ಕಂತುಗಳಲ್ಲಿ ಪಾವತಿಸುವ ಮೂಲಕ ವಿಳಂಬ ಪಾವತಿಯ ಹೆಚ್ಚುವರಿ ಶುಲ್ಕದ (ಎಲ್‍ಪಿಎಸ್) ಹೊರೆ ಕಡಿಮೆ ಮಾಡುವುದರ ಜತೆಗೆ, ಅರ್ಹ ಎಫ್.ಪಿ.ಪಿ.ಸಿ.ಎ. ಮೊತ್ತಗಳನ್ನು ಮತ್ತೆ ಪಡೆಯಲಾಗಿದೆ. ಅಲ್ಲದೇ, ವಿದ್ಯುತ್ ಉತ್ಪಾದನಾ ಸಂಸ್ಥೆಗಳು ನೀಡುವ ಮುಂಗಡ ಪಾವತಿ ರಿಯಾಯಿತಿಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆ ಎಂದರು.

ಹೆಚ್ಚಿನ ಬಡ್ಡಿದರದ ಸಾಲಗಳ ಪುನರ್‍ರಚನೆ ಮೂಲಕ ಹಣಕಾಸು ವೆಚ್ಚವನ್ನು ಕಡಿಮೆ ಮಾಡಲಾಗಿದೆ. ಇದರಿಂದ ಬಡ್ಡಿ ವೆಚ್ಚ ಇಳಿಕೆಯಾಗುವುದರ ಜತೆಗೆ, ನಗದು ನಿರ್ವಹಣೆಯೂ ಸುಧಾರಿಸಿದೆ. ಸಾಲದ ಪಾವತಿಯಲ್ಲಿ ಬೆಸ್ಕಾಂ ಯಾವುದೇ ಡಿಫಾಲ್ಟ್ ಮಾಡಿಲ್ಲ ಎಂದು ಜಾರ್ಜ್ ಹೇಳಿದರು.

Tags

K.J. George
share
ವಾರ್ತಾಭಾರತಿ
ವಾರ್ತಾಭಾರತಿ
Next Story
X