Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿದ್ಯುತ್ ವಾಹನ ಮೂಲ ಸೌಕರ್ಯ, ಸುಸ್ಥಿರ...

ವಿದ್ಯುತ್ ವಾಹನ ಮೂಲ ಸೌಕರ್ಯ, ಸುಸ್ಥಿರ ಇಂಧನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿ : ಕೆ.ಜೆ.ಜಾರ್ಜ್

ದೇಶದ ಪ್ರಥಮ ಸೌರಶಕ್ತಿ ಸೆಕೆಂಡ್ ಲೈಫ್ ಬ್ಯಾಟರಿ ಸಂಯೋಜಿತ ‘ಇವಿ ಹಬ್' ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ2 Jun 2025 11:13 PM IST
share
ವಿದ್ಯುತ್ ವಾಹನ ಮೂಲ ಸೌಕರ್ಯ, ಸುಸ್ಥಿರ ಇಂಧನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿ : ಕೆ.ಜೆ.ಜಾರ್ಜ್

ಬೆಂಗಳೂರು: ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ ಇಂಧನ ಬಳಕೆಯ ಮಾದರಿಯಲ್ಲೂ ನಮ್ಮದೇ ಮೊದಲ ಹೆಜ್ಜೆಯಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಸೋಮವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬೆಸ್ಕಾಂ ಸ್ಥಾಪಿಸಿರುವ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ಸೆಕೆಂಡ್ ಲೈಫ್ ಬ್ಯಾಟರಿ ಇವಿ ಚಾಜಿರ್ಂಗ್ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಇವಿ ಬೇಡಿಕೆಗೆ ಅನುಕೂಲವಾಗುವಂತೆ ಚಾರ್ಜಿಂಗ್‌ ಕೇಂದ್ರಗಳು ಹಾಗೂ ಮೂಲ ಸೌಕರ್ಯ ಅಭಿವೃದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಬದ್ಧವಾಗಿದೆ. ಅಲ್ಲದೆ, ಇದಕ್ಕೆ ನಮ್ಮ ರಾಜ್ಯದ ‘ಇವಿ ನೀತಿ’ ಹೆಚ್ಚಿನ ಬಲ ತುಂಬಿದೆ. ಇದೀಗ ವಿಮಾನ ನಿಲ್ದಾಣ ಸಮೀಪ ಇವಿ ಚಾಜಿರ್ಂಗ್ ಸ್ಟೇಷನ್ ಉದ್ಘಾಟಿಸಲಾಗಿದ್ದು, ಇದರಿಂದ ಕ್ಯಾಬ್ ಚಾಲಕರು, ಇವಿ ಬಳಕೆ ಮಾಡುತ್ತಿರುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

ಬೆಸ್ಕಾಂ, ಜರ್ಮನ್ ಕಾರ್ಪೊರೇಷನ್ ಫಾರ್ ಇಂಟರ್‍ನ್ಯಾಷನಲ್ ಕೋ ಆಪರೇಷನ್ (ಜಿಐಝಡ್) ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಬೃಹತ್ ಇವಿ ಚಾರ್ಜಿಂಗ್‌ ಹಬ್‍ನಲ್ಲಿ 23 ವಾಹನಗಳನ್ನು ಏಕಕಾಲದಲ್ಲಿ ಚಾರ್ಜ್ ಮಾಡಬಹುದಾಗಿದೆ. ಈ ಸ್ಟೇಷನ್‍ನಲ್ಲಿ ಸೌರ ವಿದ್ಯುತ್ತನ್ನು ಹಳೆಯ ಕಾರ್ ಬ್ಯಾಟರಿಗಳಲ್ಲಿ ಶೇಖರಣೆ ಮಾಡಲಾಗುತ್ತದೆ. ಹಗಲಿನಲ್ಲಿ ಸೋಲಾರ್ ವಿದ್ಯುತ್ ಉತ್ಪಾದಿಸಿ ಅದನ್ನು ಬ್ಯಾಟರಿ ವ್ಯವಸ್ಥೆಯ ಸಹಾಯದಿಂದ ದಿನದ 24 ಗಂಟೆಯೂ ಇವಿ ವಾಹನಗಳಿಗೆ ಸರಬರಾಜು ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ದೇಶದಲ್ಲೇ ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಒಟ್ಟು 5,880 ಇವಿ ಚಾಜಿರ್ಂಗ್ ಸ್ಟೇಷನ್‍ಗಳಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್‌ ಸ್ಟೇಷನ್‍ಗಳಿವೆ. ಈ ವರ್ಷ ಹೊಸದಾಗಿ 140 ಚಾರ್ಜರ್‍ಗಳನ್ನು ಅಳವಡಿಸಲಾಗಿದೆ ಎಂದು ಅವರು ವಿವರಿಸಿದರು.

ಚಾರ್ಜಿಂಗ್‌ ಸ್ಟೇಷನ್ ವಿಶೇಷತೆಗಳೇನು?: ಇವಿ ಹಬ್‍ನ ವಿಶೇಷತೆಯನ್ನು ವಿವರಿಸಿದ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ‘24 ಗಂಟೆಗಳ ಕಾಲ ಇವಿ ಚಾರ್ಜಿಂಗ್‌ ಸೌಲಭ್ಯ ನೀಡುವ ದೇಶದ ಮೊದಲ ಚಾರ್ಜಿಂಗ್‌ ಸ್ಟೇಷನ್ ಇದಾಗಿದೆ. ಈ ಹಬ್‍ನಲ್ಲಿ 45 ಕಿ.ವ್ಯಾ. ಸೌರ ವಿದ್ಯುತ್ ವ್ಯವಸ್ಥೆ ಮತ್ತು 100 ಕಿ.ವ್ಯಾ.ಹೆಚ್. ಸೆಕೆಂಡ್-ಲೈಫ್ ಬ್ಯಾಟರಿ ಸಂಗ್ರಹಣೆ ಸಾಮಥ್ರ್ಯ ದೊಂದಿಗೆ ಏಕಕಾಲದಲ್ಲಿ 18 ಫಾಸ್ಟ್ ಚಾರ್ಜಿಂಗ್‌ ಪಾಯಿಂಟ್‍ಗಳು ಮತ್ತು 5 ಸ್ಲೋ ಚಾರ್ಜಿಂಗ್‌ ಪಾಯಿಂಟ್‍ಗಳೊಂದಿಗೆ ಒಟ್ಟು 23 ಚಾರ್ಜಿಂಗ್‌ ಪಾಯಿಂಟ್‍ಗಳಿವೆ. ನಮ್ಮ ಬೆಸ್ಕಾಂ ಕೈಗೆಟುಕುವ ದರದಲ್ಲಿ ಇವಿ ಚಾರ್ಜಿಂಗ್‌ ಸೌಲಭ್ಯ ಒದಗಿಸುತ್ತಿದೆ ಎಂದು ಮಾಹಿತಿ ನೀಡಿದರು.

ಚಾರ್ಚ್ ಮಾಡುವುದು ಹೇಗೆ?: ಬೆಸ್ಕಾಂನ ಇವಿ ಮಿತ್ರ ಅಪ್ಲಿಕೇಷನ್‍ನಲ್ಲಿ ಇವಿ ಚಾರ್ಜಿಂಗ್‌ ಸ್ಟೇಷನ್ ಸ್ಥಳ, ದರ, ಲಭ್ಯವಿರುವ ಸ್ಲಾಟ್‍ಗಳು ಎಂಬ ಮಾಹಿತಿ ಪಡೆಯಬಹುದು. ಅಥವಾ ಸ್ಟೇಷನ್‍ನಲ್ಲಿರುವ ಕ್ಯೂರ್‍ಕೋಡ್ ಸ್ಕ್ಯಾನ್ ಮಾಡಿ, ವಾಟ್ಸಪ್‍ಮೂಲಕವೂ ಹಣ ಪಾವತಿಸಿ ಚಾರ್ಜ್ ಮಾಡಬಹುದು.

ದರ:

ಎಸಿ-001-ಪ್ರತಿ ಯೂನಿಟ್‍ಗೆ 7.02 ರೂ.

ಡಿಸಿ-001-ಪ್ರತಿ ಯೂನಿಟ್‍ಗೆ 7.16 ರೂ.

ಸಿಸಿಎಸ್-2-ಪ್ರತಿ ಯೂನಿಟ್‍ಗೆ 7.83 ರೂ.

‘ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡುತ್ತಿರುವ ಕ್ಯಾಬ್ ಚಾಲಕರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ವಿಮಾನ ನಿಲ್ದಾಣ ಸಮೀಪ ಹೊಸ ಚಾರ್ಜಿಂಗ್‌ ಸ್ಟೇಷನ್ ಆರಂಭಿಸಿರುವುದು ಸಂತಸದ ವಿಷಯ. ವಿಮಾನ ನಿಲ್ದಾಣದಿಂದ ನಿತ್ಯ 10ಸಾವಿರ ಕ್ಯಾಬ್‍ಗಳು ಬೆಂಗಳೂರಿಗೆ ಓಡಾಡುತ್ತವೆ. ಈ ಪೈಕಿ ಸಾವಿರಾರು ಎಲೆಕ್ಟ್ರಿಕ್ ಕಾರ್‍ಗಳಿದ್ದು, ಅವುಗಳ ಚಾರ್ಜಿಂಗ್‌ ಸರ್ಕಾರದಿಂದ ವ್ಯವಸ್ಥೆ ಕಲ್ಪಿಸಿರುವುದು ವಿಶೇಷ. ದೇಶದಲ್ಲಿ ನಮ್ಮ ರಾಜ್ಯ ಇಂಥ ಹಲವು ಪ್ರಥಮಗಳಿಗೆ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ಸಂಗತಿ’

-ಕೃಷ್ಣ ಬೈರೇಗೌಡ, ಕಂದಾಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X